ಅಂಬೇಡ್ಕರ್ ಅವರ ಹೋರಾಟ ಲಕ್ಷಾಂತರ ಜನರಿಗೆ ಭರವಸೆ ನೀಡಿದೆ: ಪ್ರಧಾನಿ ಮೋದಿ
Team Udayavani, Dec 6, 2022, 5:48 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭಾರತದ ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ ಮತ್ತು ನಮ್ಮ ರಾಷ್ಟ್ರಕ್ಕೆ ಅವರು ಸಲ್ಲಿಸಿದ ಅನುಕರಣೀಯ ಸೇವೆಯನ್ನು ಸ್ಮರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರೊಂದಿಗೆ ಸಂಸತ್ತಿನ ಸಂಕೀರ್ಣದಲ್ಲಿ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಿದರು.
ಟ್ವೀಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು,”ಮಹಾಪರಿನಿರ್ವಾಣ ದಿನದಂದು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಾನು ಗೌರವ ನಮನ ಸಲ್ಲಿಸುತ್ತೇನೆ ಮತ್ತು ನಮ್ಮ ದೇಶಕ್ಕೆ ಅವರ ಅನುಕರಣೀಯ ಸೇವೆಯನ್ನು ಸ್ಮರಿಸುವುದಾಗಿ ಹೇಳಿದರು.
On Mahaparinirvan Diwas, I pay homage to Dr. Babasaheb Ambedkar and recall his exemplary service to our nation. His struggles gave hope to millions and his efforts to give India such an extensive Constitution can never be forgotten. pic.twitter.com/WpCjx0cz7b
— Narendra Modi (@narendramodi) December 6, 2022
ಅಂಬೇಡ್ಕರ್ ಅವರ ಹೋರಾಟಗಳು ಲಕ್ಷಾಂತರ ಜನರಿಗೆ ಭರವಸೆಯನ್ನು ನೀಡಿವೆ. ಭಾರತಕ್ಕೆ ಇಷ್ಟು ಬೃಹತ್ ಸಂವಿಧಾನವನ್ನು ನೀಡುವ ಅವರ ಪ್ರಯತ್ನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಸದೃಢ, ಸಶಕ್ತ, ಸಮಾನತೆಯ ಭಾರತಕ್ಕಾಗಿ ಅವರು ಕಂಡಂತಹ ಕನಸುಗಳನ್ನು ನನಸು ಮಾಡುವ ಸಂಕಲ್ಪವನ್ನು ಮಾಡೋಣ. pic.twitter.com/Hg5joAjKxV
— Basavaraj S Bommai (@BSBommai) December 6, 2022
ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಸದೃಢ, ಸಶಕ್ತ, ಸಮಾನತೆಯ ಭಾರತಕ್ಕಾಗಿ ಅವರು ಕಂಡಂತಹ ಕನಸುಗಳನ್ನು ನನಸು ಮಾಡುವ ಸಂಕಲ್ಪವನ್ನು ಮಾಡೋಣ ಎಂದು ಬೊಮ್ಮಾಯಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಕೂಡ ಟ್ವೀಟ್ ಮಾಡಿ, ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಹಾದಿಯನ್ನು ಮರೆಯದೆ, ನಮ್ಮೆಲ್ಲರ ವಿಚಾರ ಮತ್ತು ಆಚಾರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಮ್ಮೊಳಗೆ ಸದಾ ಜೀವಂತವಾಗಿರಿಸಿಕೊಂಡು, ನಮಗಾಗಿ ಅವರು ಕಂಡ ಕನಸುಗಳನ್ನು ನನಸು ಮಾಡೋಣ ಎಂದಿದ್ದಾರೆ.
ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧ ಮುಂಭಾಗದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದೆ. pic.twitter.com/HRmnB2fk2Y
— Siddaramaiah (@siddaramaiah) December 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.