ಹೆಚ್ಚಿನ ಮತದಾರರನ್ನು ನೋಂದಾಯಿಸಿ: ಪೊನ್ನುರಾಜ್
Team Udayavani, Dec 8, 2022, 5:40 AM IST
ಮಂಗಳೂರು : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ತಹಶೀಲ್ದಾರರು ಹೆಚ್ಚಿನ ಮತದಾರರನ್ನು ನೋಂದಾಯಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಮತದಾರರ ಪಟ್ಟಿ ವೀಕ್ಷಕರು, ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಅವರು ತಿಳಿಸಿದ್ದಾರೆ.
ಜಿ. ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಈ ಕುರಿತು ಬುಧವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಅಂತಿಮ ಮತದಾರ ಪಟ್ಟಿ 2023ರ ಜ. 5ರಂದು ಪ್ರಕಟವಾಗಲಿದೆ. ಪರಿಷ್ಕರಣೆ ಸಂದರ್ಭ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆಯುವ ಸಂದರ್ಭ ಎಚ್ಚರಿಕೆ ವಹಿಸಬೇಕು. ಮತದಾರರು ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣ ಪತ್ರವನ್ನು ಪಡೆಯಬೇಕು.
ಸ್ಥಳಾಂತರಗೊಂಡ ಮತದಾರರ ವಿವರವನ್ನು ಖಚಿತ ಪಡಿಸಿಕೊಳ್ಳಬೇಕು. ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪಟ್ಟಿಯನ್ನು ತೆಗೆದುಕೊಂಡು ಅವರ ಜನ್ಮ ದಿನಾಂಕವನ್ನು ಪರಿಶೀಲಿಸಿ, ಅರ್ಹರಿದ್ದರೆ ಮತದಾರರ ಪಟ್ಟಿಗೆ ಅವರನ್ನು ಸೇರ್ಪಡೆ ಮಾಡುವ ಕೆಲಸ ಮಾಡಬೇಕು. ಈ ಬಗ್ಗೆಯೂ ಸ್ವೀಪ್ ಸಮಿತಿ ವತಿಯಿಂದ ಹಲವು ಚಟುವಟಿಕೆಗಳನ್ನು ಕೈಗೊಂಡು ವ್ಯಾಪಕವಾಗಿ ಜಾಗೃತಿ ಮೂಡಿಸುವ ಮೂಲಕ ಮತದಾರರ ಪಟ್ಟಿಗೆ ಹೆಸರು ಹೆಚ್ಚು ದಾಖಲಾಗುವಂತೆ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್., ಜಿ. ಪಂ. ಸಿಇಒ ಡಾ| ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಗಿರೀಶ್ ನಂದನ್ ಉಪಸ್ಥಿತರಿದ್ದರು. ಚುನಾವಣ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
ಇದನ್ನೂ ಓದಿ: ಸಿಎಸ್‌ಐ ಕರ್ನಾಟಕ ದಕ್ಷಿಣ ಸಭಾ ಪ್ರಾಂತ ವಂ| ಹೇಮಚಂದ್ರ ಕುಮಾರ್ ನೂತನ ಬಿಷಪ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.