ಯಾರಿಗೆ ಒಲಿಯಲಿದೆ ಗುಜರಾತ್-ಹಿಮಾಚಲ ಗದ್ದುಗೆ: ಮತ ಎಣಿಕೆ ಆರಂಭ
Team Udayavani, Dec 8, 2022, 8:20 AM IST
ಹೊಸದಿಲ್ಲಿ: ದೇಶದ ಕುತೂಹಲಕ್ಕೆ ಕಾರಣವಾಗಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಎರಡೂ ರಾಜ್ಯಗಳಲ್ಲಿ ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಿದೆ.
ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮತ್ತೆ ಪದವಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿದೆ. ಕಾಂಗ್ರೆಸ್ ಮತ್ತೆ ಗೆಲುವಿನ ಹಳಿಯೇರುವ ಯತ್ನದಲ್ಲಿದ್ದು, ಆಮ್ ಆದ್ಮಿ ಪಾರ್ಟಿ ಮ್ಯಾಜಿಕ್ ಮಾಡಲು ಎದುರು ನೋಡುತ್ತಿದೆ.
ಮತಗಟ್ಟೆ ಸಮೀಕ್ಷೆಗಳ ಪ್ರಕಾರ, ಗುಜರಾತ್ ನಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೇರುವ ಸಾಧ್ಯತೆಗಳಿವೆ. ಈ ಮೂಲಕ ಸತತ 7ನೇ ಬಾರಿಗೆ ಅಧಿಕಾರಕ್ಕೇರುವ ಸಂಭವವಿದೆ. ಒಂದು ವೇಳೆ ಗೆದ್ದರೆ ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳು ಮಾಡಿದ್ದ ದಾಖಲೆ ಧೂಳೀಪಟವಾಗಲಿದೆ. 182 ಕ್ಷೇತ್ರಗಳ ವಿಧಾನಸಭೆಯಲ್ಲಿ ಮ್ಯಾಜಿಕ್ ಸಂಖ್ಯೆ 92.
1982ರಿಂದಲೂ ಹಿಮಾಚಲ ಪ್ರದೇಶ ರಾಜ್ಯದಲ್ಲಿ ಒಮ್ಮೆ ಬಿಜೆಪಿ, ಮಗದೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೇರುತ್ತವೆ. ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಕಾಣಿಸಿದೆ. ಬಿಜೆಪಿ ಗೆದ್ದರೆ ಇತಿಹಾಸ, ಕಾಂಗ್ರೆಸ್ ಗೆದ್ದರೆ, ಸಂಪ್ರದಾಯ ಮುಂದುವರಿಕೆ. 68 ಕ್ಷೇತ್ರಗಳ ವಿಧಾನಸಭೆಯಲ್ಲಿ ಮ್ಯಾಜಿಕ್ ನಂ 35 ಕ್ಷೇತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.