![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 8, 2022, 10:35 AM IST
ಅಹಮದಾಬಾದ್:ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭರ್ಜರಿ ಮುನ್ನಡೆ ಸಾಧಿಸುವ ಮೂಲಕ ಸತತ ಏಳನೇ ಬಾರಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ಗುರುವಾರ (ಡಿಸೆಂಬರ್ 08) ಬೆಳಗ್ಗೆ 8ಗಂಟೆಗೆ ಮತಎಣಿಕೆ ಆರಂಭಗೊಂಡಿದೆ.
ಇದನ್ನೂ ಓದಿ:ಸೋಲಿನ ಮೇಲೆ ಬರೆ: ನಾಯಕ ರೋಹಿತ್ ಸೇರಿ ಮೂವರು ತಂಡದಿಂದ ಔಟ್
182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ 145 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, 9 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸುವ ಮೂಲಕ ತನ್ನ ಛಾಪನ್ನು ಮೂಡಿಸಿದೆ.
ಕಳೆದ 27 ವರ್ಷಗಳಿಂದ ಅಧಿಕಾರದ ಗದ್ದುಗೆಯಲ್ಲಿರುವ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸುವತ್ತ ದಾಪುಗಾಲು ಇಟ್ಟಿದ್ದು, ಏಳನೇ ಬಾರಿ ಆಡಳಿತದ ಚುಕ್ಕಾಣಿ ಹಿಡಿಯಲು ಜನಾದೇಶ ದೊರಕಿದಂತಾಗಿದೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆ ಅಧಿಕಾರದ ಗದ್ದುಗೆ ಏರಲು 92 ಸ್ಥಾನಗಳ ಅಗತ್ಯವಿದೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 150 ಸ್ಥಾನಗಳಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಎರಡನೇ ಸ್ಥಾನಕ್ಕೆ ಕುಸಿದಿದೆ.
ಬಲ ಕಳೆದುಕೊಂಡ ಕಾಂಗ್ರೆಸ್ ಪಡೆ:
2017ರಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 99 ಸ್ಥಾನಗಳಲ್ಲಿ ಜಯಗಳಿಸಿ 6ನೇ ಬಾರಿ ಅಧಿಕಾರದ ಗದ್ದುಗೆ ಏರಿತ್ತು. ಕಾಂಗ್ರೆಸ್ ಪಕ್ಷ 77 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಪ್ರಬಲ ವಿಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 2022ರ ವಿಧಾನಸಭಾ ಚುನಾವಣೆಯಲ್ಲಿ ಬಲವೃದ್ಧಿಸಿಕೊಂಡಿರುವ ಆಡಳಿತಾರೂಢ ಬಿಜೆಪಿ 150 ಸ್ಥಾನಗಳಲ್ಲಿ ಭಾರೀ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೇವಲ 18 ಸ್ಥಾನಗಳಲ್ಲಷ್ಟೇ ಮುನ್ನಡೇ ಸಾಧಿಸಿ ಭಾರೀ ಮುಖಭಂಗ ಅನುಭವಿಸುವಂತಾಗಿದೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ನಡುವೆಯೇ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆ ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡುವಂತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಬಿಜೆಪಿ ದಾಖಲೆಯ ಆಡಳಿತ:
ಪಶ್ಚಿಮಬಂಗಾಳದಲ್ಲಿ ಸಿಪಿಎಂ ನೇತೃತ್ವದ ಎಡಪಕ್ಷಗಳು ಸತತ ಏಳು ಬಾರಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆಗೆ ಏರಿ ದಾಖಲೆ ನಿರ್ಮಿಸಿತ್ತು. ಇದೀಗ ಗುಜರಾತ್ ನಲ್ಲಿಯೂ ಭಾರತೀಯ ಜನತಾ ಪಕ್ಷ ಏಳನೇ ಬಾರಿ ಆಡಳಿತ ನಡೆಸುವ ಮೂಲಕ ದಾಖಲೆ ಬರೆದಂತಾಗಲಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.