ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ: ರೋಹಿತ್ ಬದಲಿಗೆ ಈಶ್ವರನ್?
Team Udayavani, Dec 9, 2022, 6:55 AM IST
ಹೊಸದಿಲ್ಲಿ: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ “ಎ’ ತಂಡ ನಾಯಕ ಅಭಿಮನ್ಯು ಈಶ್ವರನ್ ಅವರನ್ನು ಗಾಯಗೊಂಡಿರುವ ನಾಯಕ ರೋಹಿತ್ ಶರ್ಮ ಅವರ ಬದಲಿಗೆ ತಂಡಕ್ಕೆ ಕರೆಸಿಕೊಳ್ಳುವ ಸಾಧ್ಯತೆಯಿದೆ. ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿ ಚಟ್ಟೊಗ್ರಾಮ್ನಲ್ಲಿ ಡಿ. 14ರಿಂದ ಆರಂಭವಾಗಲಿದೆ.
ನಾಯಕ ರೋಹಿತ್ ಅವರು ಬುಧವಾರ ನಡೆದ ಏಕದಿನ ಸರಣಿಯ ದ್ವಿತೀಯ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರೂ ಅಮೋಘವಾಗಿ ಆಡಿ ರಕ್ಷಿಸುವ ಪ್ರಯತ್ನ ನಡೆಸಿದ್ದರು. ಆದರೆ ಅಂತಿಮವಾಗಿ ತಂಡ ಸೋತು ಸರಣಿಯನ್ನು ಕಳೆದುಕೊಳ್ಳಬೇಕಾಯಿತು. ಗಾಯದಿಂದಾಗಿ ರೋಹಿತ್ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ.
ಬಾಂಗ್ಲಾದಲ್ಲಿಯೇ ಸದ್ಯ ಸಾಗುತ್ತಿರುವ “ಎ’ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಈಶ್ವರನ್ ಬೆನ್ನು ಬೆನ್ನಿಗೆ ಶತಕ ದಾಖಲಿಸಿದ ಸಾಧನೆ ಮಾಡಿದ್ದಾರೆ. ಸಿಲ್ಹೆಟ್ನಲ್ಲಿ ನಡೆಯುವ ಎರಡನೇ “ಎ’ ಟೆಸ್ಟ್ ಪಂದ್ಯದ ಬಳಿಕ ಈಶ್ವರನ್ ಚಟ್ಟೊಗ್ರಾಮ್ನಲ್ಲಿ ಭಾರತ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಕ್ರಿಕೆಟ್ ಮಂಡಳಿಯ ಮೂಲಗಳು ತಿಳಿಸಿವೆ. ಈಶ್ವರನ್ ತಂಡಕ್ಕೆ ಬಂದರೂ ಪ್ರಭಾರ ನಾಯಕ ಕೆಎಲ್ ರಾಹುಲ್ ಮತ್ತು ಶುಭಮನ್ ಗಿಲ್ ಅವರು ಟೆಸ್ಟ್ನಲ್ಲಿ ತಂಡದ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.