ಜಗತ್ತಿನ ಪತ್ರಿಕೆಗಳಲ್ಲಿಯೂ ಗುಜರಾತ್ ಸುದ್ದಿ
Team Udayavani, Dec 10, 2022, 7:20 AM IST
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದ್ದು ಜಗತ್ತಿನ ಪ್ರಮುಖ ಪತ್ರಿಕೆಗಳಲ್ಲಿಯೂ ವರದಿಯಾಗಿದೆ. “ದ ಸ್ಟ್ರಾಟಿಸ್ ಟೈಮ್ಸ್ ಆಫ್ ಸಿಂಗಾಪುರ್’, “ಅಲ್ ಜಜೀರಾ’, “ಇಂಡಿಪೆಂಡೆಂಟ್’, “ಎಬಿಸಿ ನ್ಯೂಸ್’ ಸೇರಿದಂತೆ ಪ್ರಮುಖ ಪತ್ರಿಕೆಗಳಲ್ಲಿ ಗುಜರಾತ್ ಚುನಾವಣೆ ಬಗ್ಗೆ ಸಚಿತ್ರ ವರದಿಗಳು ಪ್ರಕಟವಾಗಿವೆ.
“ದ ಗಾರ್ಡಿಯನ್’ ಪತ್ರಿಕೆಯು “2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವಂತೆಯೇ ಪ್ರಧಾನಿ ಮೋದಿಯವರು ಬಿಜೆಪಿಗೆ ಹೆಚ್ಚಿನ ಸ್ಥಾನ ಗೆದ್ದುಕೊಡುವುದರ ಮೂಲಕ ಹೊಸ ಹುರುಪು ತಂದುಕೊಟ್ಟಿದ್ದಾರೆ’ ಎಂದು ಬರೆದುಕೊಂಡಿದೆ.
ಜಪಾನ್‌ನ ನಿಕ್ಕಿ ಏಷ್ಯಾ ಪತ್ರಿಕೆಯು “ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ. 13 ವರ್ಷಗಳ ಕಾಲ ಅವರು ಅಲ್ಲಿ ಮುಖ್ಯಮಂತ್ರಿಯಾಗಿದ್ದರು.
ಜತೆಗೆ 1995ರಲ್ಲಿ ಅವರು ರಾಜ್ಯದಲ್ಲಿ ನಾಯಕತ್ವ ವಹಿಸಿದ ಬಳಿಕ ಬಿಜೆಪಿ ಸೋತಿಲ್ಲ’ ಎಂದು ವಿಮರ್ಶಾತ್ಮಕವಾಗಿ ವರದಿ ಮಾಡಿದೆ.
ಗುಜರಾತ್‌ನಲ್ಲಿ ಬಿಜೆಪಿಗೆ ಸಿಕ್ಕಿದ ಜಯ 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಅನುಕೂಲವಾಗಲಿದೆ’ ಎಂದು “ದ ಗಾರ್ಡಿಯನ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.