ಪ್ರಧಾನಿ ಮೋದಿ ಜಾತ್ಯತೀತ-ಪಕ್ಷಾತೀತ ನಾಯಕ: ಸಚಿವ ಡಾ.ಕೆ.ಸುಧಾಕರ್

Team Udayavani, Dec 9, 2022, 10:03 PM IST

1-sasada

ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಜಾತ್ಯತೀತ ಮತ್ತು ಪಕ್ಷಾತೀತ ನಾಯಕವೆಂದು ಜನ ಪ್ರೀತಿ ಮತ್ತು ಅಭಿಮಾನದಿಂದ ಒಪ್ಪಿಕೊಂಡಿದ್ದಾರೆ ಎಲ್ಲಡೆ ಅವರ ಅಲೆ ಬೀಸುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಗುಜರಾತಿನಲ್ಲಿ ಸತತ 7 ಬಾರಿ ಗೆಲುವು ಸಾಧಿಸಿರುವುದೊಂದು ದೊಡ್ಡ ದಾಖಲೆಯೆಂದು ಬಣ್ಣಿಸಿ, ಪಶ್ಚಿಮ ಬಂಗಾಲದಲ್ಲಿ 25 ವರ್ಷ ಸಿಪಿಎಂ ಪಕ್ಷ ಆಡಳಿತ ನಡೆಸಿದೆ ಆದರೆ ಒಂದು ವ್ಯತ್ಯಾಸ ಏನೆಂದರೆ ಪಶ್ಚಿಮ ಬಂಗಾಲದಲ್ಲಿ ಬಡತನಕ್ಕೆ ಸಿಪಿಎಂ ದುಡಿದಿದ್ದು ಭಾರತೀಯ ಜನತಾ ಪಕ್ಷದ ಸರ್ಕಾರ ಗುಜರಾತ್‍ನನ್ನು ಒಂದು ಸಮರ್ಥ ರಾಜ್ಯ ಮಾಡುವುದರ ಜೊತೆಗೆ ಸಂಪತ್ತು ಭರಿತ ರಾಜ್ಯವನ್ನಾಗಿ ಮಾಡಿದ್ದಾರೆ ಎಂದರು.

ಗುಜರಾತಿನ ಚುನಾವಣೆಯಲ್ಲಿ 156 ಸ್ಥಾನಗಳನ್ನು ತೆಗೆದುಕೊಂಡಿರುವುದು ಸರ್ವಕಾಲಿಕವಾಗಿರುವ ದಾಖಲೆಯಾಗಿದೆ. ಇದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಅವರು ಪರಿಪಾಲನೆ ಮಾಡುತ್ತಿರುವ ಆಡಳಿತವನ್ನು ಈ ದೇಶದ ಜನ ಮೆಚ್ಚಿದ್ದಾರೆ ಸ್ವಾಭಾವಿಕವಾಗಿ ಗುಜರಾತಿನ ಮಣ್ಣಿನ ಮಗ ಎಂಬ ಭಾವನೆ ಕೂಡ ಅವರಲ್ಲಿದೆ.  ಈಗಿರುವ ಮುಖ್ಯಮಂತ್ರಿಗಳ ಬಗ್ಗೆಯೂ ಒಳ್ಳೆಯ ಅಭಿಪ್ರಾಯಯಿದೆ ಎಂಬುದು ಚುನಾವಣೆಯ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದರು.

ಕಾಂಗ್ರೆಸ್ ಹೀನಾಯ ಸೋಲು
ಗುಜರಾತಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಇದರಿಂದ ಗೊತ್ತಾಗುತ್ತದೆ ಅವರ ಸ್ಪರ್ಧೆಯಲ್ಲೆ ಇಲ್ಲವೆಂಬುದು ಫಲಿತಾಂಶದಿಂದ ಗೋಚರಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ ಸಚಿವರು ದೊಡ್ಡ ರಾಜ್ಯದ ಚುನಾವಣೆಯಲ್ಲಿ ಕೇವಲ 17 ಸ್ಥಾನಗಳಿಗೆ ಸೀಮಿತಗೊಂಡಿರುವ ಕಾಂಗ್ರೆಸ್ ನಾಯಕರು ವಿಚಾರ ಮಾಡಿಕೊಳ್ಳಬೇಕು ಇನ್ನೂ ಹಿಮಾಚಲ್ ಪ್ರದೇಶದ ಚುನಾವಣೆಯಲ್ಲಿ ಐದು ವರ್ಷಕ್ಕೊಮ್ಮೆ ಜನ ಬದಲಾವಣೆಯನ್ನು ಬಯಸುತ್ತಾರೆ ಎಂದರು.

ಹಿಮಾಚಲ್ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಮತಗಳಿಕೆಯಲ್ಲಿ ಕೇವಲ .8 ವ್ಯತ್ಯಾಸವಿದೆ ಆದರೇ ಗುಜರಾತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ 27% ಮತಗಳಿಕೆಯ ವ್ಯತ್ಯಾಸ ಕಂಡುಬಂದಿದೆ ಹಾಗಾಗಿ ಇದು ವ್ಯತ್ಯಾಸ .8% ಕಡಿಮೆ ಮತ ಬಂದಿದ್ದರಿಂದ 6-7 ಸೀಟು ಕಡಿಮೆ ಬಂದಿದೆ ಆದರೂ ಕೂಡ ಮುಂದಿನ ದಿನಗಳಲ್ಲಿ ಹಿಮಾಚಲ್ ಪ್ರದೇಶದಲ್ಲಿ ಯಾವ ರೀತಿಯಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂಬುದರ ಬಗ್ಗೆ ನಮ್ಮ ನಾಯಕರು ನಿರ್ಧರಿಸುತ್ತಾರೆ ಎಂದರು.

ಗುಜರಾತಿನ ಚುನಾವಣೆಯ ಫಲಿತಾಂಶದಿಂದ ಕರ್ನಾಟಕದ ಸರ್ಕಾರ ಸಚಿವರು-ಶಾಸಕರಿಗೆ ಪಕ್ಷದ ಕಾರ್ಯಕರ್ತರಿಗೆ ಮನೋಸ್ಥೈರ್ಯವನ್ನು ಇಮ್ಮಿಡಿ ಮಾಡಿದೆ ಎಂದ ಸಚಿವರು ಗುಜರಾತಿನ ಪ್ರಗತಿಪರ ರಾಜ್ಯ ಹಾಗೆಯೇ ಕರ್ನಾಟವೂ ಪ್ರಗತಿಪರ ರಾಜ್ಯ ಹೀಗಾಗಿ ನಮ್ಮ ಉತ್ಸಾಹ ಹೆಚ್ಚಾಗಿದೆ ಆದರೇ ನಾವು ಕೂಡ ಎಚ್ಚರಿಕೆಯ ಹೆಜ್ಜೆಯನ್ನು ಇಡಬೇಕು ಎಂಬುದು ನನ್ನ ಅಭಿಪ್ರಾಯ ನಮಗೆ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸ ಇರಬೇಕು ಅತಿಯಾದ ಆತ್ಮವಿಶ್ವಾಸ ಇರಬಾರದು ಎಚ್ಚರಿಕೆಯಿಂದ ನಮ್ಮ ಸಂಘಟನೆಯನ್ನು ಮತ್ತಷ್ಟು ಗಟ್ಟಿ ಮಾಡಿಕೊಳ್ಳಬೇಕು ಜನರ ವಿಶ್ವಾಸವನ್ನು ಮತ್ತು ಪ್ರೀತಿಯನ್ನು ಪಡೆಯುವಂತರಾಗಬೇಕು ಮುಂದಿನ ಐದು ತಿಂಗಳ ಅವಧಿಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವಂತಹ ಕೆಲಸವನ್ನು ಮಾಡಿದರೆ ಜನ ಮತ್ತೊಮ್ಮೆ ಬಿಜೆಪಿ ಪಕ್ಷಕ್ಕೆ ಮತ್ತೊಮ್ಮೆ ಅಧಿಕಾರಕ್ಕೆ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಮೋದಿ ಅಲೆ
ಲೋಕಸಭಾ ಚುನಾವಣೆಯಲ್ಲಿ 300 ಕ್ಕೂ ಅಧಿಕ ಸಂಸದರನ್ನು ಆಯ್ಕೆ ಮಾಡುತ್ತಾರೆ ಎಂದರೇ ಅದು ಪ್ರಧಾನಮಂತ್ರಿ ಅವರ ನೇತೃತ್ವದಲ್ಲಿರುವ ಜನರ ವಿಶ್ವಾಸವನ್ನು ತೋರಿಸುತ್ತದೆ ಜನಮನ್ನಣೆ ಇಲ್ಲದೆ ಪ್ರಧಾನಮಂತ್ರಿ ಆಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಸಚಿವರು ಕೆಲವು ರಾಜ್ಯಗಳಲ್ಲಿ ಸ್ಥಳೀಯವಾಗಿರುವ ಸಮಸ್ಯೆಗಳು ಇರುತ್ತದೆ ಅದರ ಪ್ರಭಾವ ಬೀರುತ್ತದೆ ಎಂದು ವಿಶ್ಲೇಷಣೆ ಮಾಡಿದ ಸಚಿವರು ದೇಶದ ಜನರು ಅಭಿಮಾನ ಮತ್ತು ಪ್ರೀತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಜಾತ್ಯಾತೀತ ಮತ್ತು ಪಕ್ಷಾತೀತ ನಾಯಕವೆಂದು ಮೆಚ್ಚುಕೊಂಡಿದ್ದಾರೆ ಮುಂದಿನ 2024ರ ಚುನಾವಣೆಯಲ್ಲಿ ಸಹ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಜೆ.ನಾಗರಾಜ್, ಶಿಡ್ಲಘಟ್ಟ ನಗರಸಭಾ ಸದಸ್ಯ ಕೃಷ್ಣಮೂರ್ತಿ, ಬಿಎಸ್‍ಪಿ ಮೌಲಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.