ಯಾರು ಮುಖ್ಯಮಂತ್ರಿ? ಹಿಮಾಚಲ ಪ್ರದೇಶದಲ್ಲಿ ಸಿಎಂ ಹುದ್ದೆ ಬಿಕ್ಕಟ್ಟು
ಗುಜರಾತ್: ಡಿ. 12ರಂದು ಭೂಪೇಂದ್ರ ಪ್ರಮಾಣ
Team Udayavani, Dec 10, 2022, 7:05 AM IST
ಶಿಮ್ಲಾ/ಅಹ್ಮದಾಬಾದ್: ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿರುವ ಹಿಮಾಚಲ ಪ್ರದೇಶ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ತಲೆನೋವಾಗಿದ್ದು, ಶುಕ್ರವಾರ ಸಂಜೆ ನಡೆದ ಶಾಸಕಾಂಗ ಸಭೆಯಲ್ಲಿ ಯಾವುದೇ ನಿರ್ಧಾರಕ್ಕೆ ಬರಲಾಗಲಿಲ್ಲ. ಹೀಗಾಗಿ ಈ ವಿಚಾರವನ್ನು ಹೈಕಮಾಂಡ್‌ಗೆ ಬಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಿಎಂ ಹುದ್ದೆಯ ಸ್ಪರ್ಧೆಯಲ್ಲಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್, ಮಾಜಿ ಅಧ್ಯಕ್ಷ ಸುಖ್‌ವಿಂದರ್ ಸಿಂಗ್ ಸುಖು ಮತ್ತು ವಿಪಕ್ಷ ನಾಯಕರಾಗಿದ್ದ ಮುಕೇಶ್ ಅಗ್ನಿಹೋತ್ರಿ ನಡುವೆ ತೀವ್ರ ಪೈಪೋಟಿ ಉಂಟಾಗಿದೆ. ಈ ಮೂವರು ನಾಯಕರೂ ಶುಕ್ರವಾರ ತಮ್ಮ ತಮ್ಮ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ಅಲ್ಲದೆ ಶುಕ್ರವಾರ ಸಂಜೆ ಕೇಂದ್ರ ವೀಕ್ಷಕರಾದ ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ಹಿಮಾಚಲ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಾಜೇಶ್ ಶುಕ್ಲಾ ಅವರ ಉಪಸ್ಥಿತಿಯಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರ ಸಭೆ ನಡೆಯಿತಾದರೂ ಯಾವುದೇ ನಿರ್ಧಾರ ಹೊರಬರಲಿಲ್ಲ. ಹೀಗಾಗಿ ಮುಂದಿನ ಸಿಎಂ ಯಾರು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂಬ ಒಂದು ಸಾಲಿನ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
ದಿ| ವೀರಭದ್ರ ಸಿಂಗ್ ಅವರ ಹೆಸರಿನಲ್ಲೇ ಈ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗಿದ್ದು, ಅವರ ಕುಟುಂಬಸ್ಥರನ್ನು ಕಡೆಗಣನೆ ಮಾಡುವಂತಿಲ್ಲ ಎಂಬುದು ಪ್ರತಿಭಾ ಸಿಂಗ್ ಅವರ ಒತ್ತಾಯ. ಬೆಳಗ್ಗೆಯಿಂದಲೇ ಸ್ಪರ್ಧೆಯಲ್ಲಿ ಇರುವುದಾಗಿ ಹೇಳಿದ್ದ ಸುಖ್‌ವಿಂದರ್ ಸಿಂಗ್ ಸುಖು ಸಂಜೆ ವೇಳೆಗೆ ವರಸೆ ಬದಲಿಸಿದ್ದು, ಹೈಕಮಾಂಡ್ ಹೇಳಿದಂತೆ ಕೇಳುವೆ ಎಂದಿದ್ದಾರೆ.
ಭೂಪೇಂದ್ರ ಪ್ರಮಾಣ ವಚನ ಸಮಾರಂಭಕ್ಕೆ ಬಿಎಸ್‌ವೈ
ಗುಜರಾತ್‌ನಲ್ಲಿ ಹೊಸ ಸರಕಾರ ರಚನೆಯ ಪ್ರಯತ್ನಗಳು ಸದ್ದಿಲ್ಲದೆ ಸಾಗಿವೆ. ಹಾಲಿ ಸಿಎಂ ಭೂಪೇಂದ್ರ ಪಟೇಲ್ ರಾಜೀನಾಮೆ ನೀಡಿದ್ದು, ಡಿ. 12ರಂದು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಶನಿವಾರ ಬೆಳಗ್ಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರ ಸಭೆ ನಡೆಯಲಿದ್ದು, ಇದರಲ್ಲಿ ಹೊಸ ಶಾಸಕಾಂಗ ನಾಯಕರ ಆಯ್ಕೆ ನಡೆಯಲಿದೆ. ಚುನಾವಣ ವೀಕ್ಷಕರಾಗಿ ರಕ್ಷಣ ಸಚಿವ ರಾಜನಾಥ್ ಸಿಂಗ್, ಕರ್ನಾಟಕದ ಹಿರಿಯ ಬಿಜೆಪಿ ನಾಯಕ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅರ್ಜುನ್ ಮುಂಡಾ ಶುಕ್ರವಾರ ಸಂಜೆಯೇ ಅಹ್ಮದಾಬಾದ್‌ಗೆ ಆಗಮಿಸಿದ್ದಾರೆ.
ಯಡಿಯೂರಪ್ಪ ಅವರು ಈ ಸಭೆಯಲ್ಲಿ ಭಾಗಿಯಾದ ಬಳಿಕ ಭೂಪೇಂದ್ರ ಪಟೇಲ್ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿಯೂ ಭಾಗಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.