ಸಲಾಂ ಆರತಿ: ಪೂಜೆಯ ಹೆಸರಿನಲ್ಲಿ ಮಾತ್ರ ಬದಲಾವಣೆ; ಪೂಜೆ ರದ್ದುಪಡಿಸುವ ಯಾವುದೇ ಚಿಂತನೆ ಇಲ್ಲ

Team Udayavani, Dec 10, 2022, 3:42 PM IST

shashikala jolle

ಬೆಂಗಳೂರು: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ “ದೀವಟಿಗೆ ಸಲಾಂ” “ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಎಂಬ ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನ ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಕೆಲವು ದೇವಾಲಯಗಳಲ್ಲಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಸಂಧರ್ಭಗಳಲ್ಲಿ ದೀವಟಿಗೆ ಹಿಡಿದು ದೇವಾಲಯಕ್ಕೆ ಮತ್ತು ದೇವರಿಗೆ ಆರತಿಯಂತೆ ನಡೆಸುವ ಕಾರ್ಯಕ್ಕೆ ದೀವಟಿಗೆ ಸಲಾಂ, ಸಲಾಂ ಮಂಗಳಾರತಿ ಮತ್ತು ಸಲಾಂ ಆರತಿ ಎಂದು ಕೆಲವು ದೇವಾಲಯಗಳಲ್ಲಿ ಕರೆಯಲಾಗುತ್ತಿದೆ. ಇದನ್ನ ಬದಲಾಯಿಸಬೇಕು ಎನ್ನುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಕ್ತಾದಿಗಳಿಂದ ಸಾಕಷ್ಟು ಒತ್ತಾಯ ಇರುವ ಬಗ್ಗೆ, ಧಾರ್ಮಿಕ ಪರಿಷತ್ತಿನ ಸದಸ್ಯರು ಸಭೆಯ ಗಮನಕ್ಕೆ ತಂದರು. ಇದರ ಹಿನ್ನಲೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತ ಚರ್ಚೆಯನ್ನು ನಡೆಸಲಾಯಿತು.

ಈ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಆಗಮ ಪಂಡಿತರ ಅಭಿಪ್ರಾಯದಂತೆ ದೇವಾಲಯಗಳಲ್ಲಿ ಇನ್ನು ಮುಂದೆ “ದೀವಟಿಗೆ ಸಲಾಂ” ಎಂಬ ಪದದ ಬದಲಾಗಿ “ದೀವಟಿಗೆ ನಮಸ್ಕಾರ” ಎಂದು, “ಸಲಾಂ ಆರತಿ” ಎಂಬ ಪದದ ಬದಲಾಗಿ “ಆರತಿ ನಮಸ್ಕಾರ” ಎಂದು ಹಾಗೂ ʼಸಲಾಂ ಮಂಗಳಾರತಿ” ಎಂಬ ಪದದ ಬದಲಾಗಿ “ಮಂಗಳಾರತಿ ನಮಸ್ಕಾರ” ಎಂದು ಹೆಸರನ್ನು ಬದಲಾಯಿಸಿಕೊಂಡು ಸೇವೆಗಳನ್ನು ಮತ್ತು ಸೇವಾಕಾರ್ಯಗಳನ್ನು ಮುಂದುವರೆಸಲು ಸುತ್ತೋಲೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ರದ್ದುಪಡಿಸಲಾಗಿಲ್ಲ: ಕೇವಲ ಬೇರೆ ಭಾಷೆಯ ಪದಗಳನ್ನು ಬದಲಾಯಿಸಿ, ನಮ್ಮ ಭಾಷೆಯ ಪದವನ್ನು ಅಳವಡಿಸಿ ಈ ಹಿಂದಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಮತ್ತು ಪೂಜೆಗಳನ್ನು ಮುಂದುವರೆಸಲಾಗುವುದು. ಪೂಜಾ ಕಾರ್ಯಗಳನ್ನು ರದ್ದುಪಡಿಸಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಹಿಂದೂ ಧಾರ್ಮಿಕ ಹಾಗೂ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ಎ ಮತ್ತು ಬಿ ವರ್ಗದ ದೇವಸ್ಥಾನಗಳು ಪ್ರತಿವರ್ಷ ಆಡಿಟ್‌ ಮಾಡಿಸುವುದು ಕಡ್ಡಾಯ. ಆದರೆ, ಹಲವಾರು ದೇವಸ್ಥಾನಗಳಲ್ಲಿ ಹಲವಾರು ವರ್ಷಗಳಿಂದ ಆಡಿಟ್‌ ಮಾಡಿಸಿರಲಿಲ್ಲ. ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಜವಾಬ್ದಾರಿ ತಗೆದುಕೊಂಡ ನಂತರ ದೇವಸ್ಥಾನಗಳ ಆಡಳಿತದಲ್ಲಿ, ಭಕ್ತರು ನೀಡುವ ಕಾಣಿಕೆಯ ಬಳಕೆಯ ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಡಿಟ್‌ ವರದಿಯನ್ನ ಆಯಾ ವರ್ಷವೇ ಸಲ್ಲಿಸುವುದರ ಬಗ್ಗೆ ಕಟ್ಟುನಿಟ್ಟು ಆದೇಶ ನೀಡಲಾಗಿತ್ತು. ದೇವಸ್ಥಾನಗಳು ತಮ್ಮ ಆಡಿಟ್‌ ವರದಿಯನ್ನ ಸರ್ಕಾರಿ ಲೆಕ್ಕಪತ್ರ ಇಲಾಖೆಯಿಂದಲೇ ಆಡಿಟ್‌ ಮಾಡಿಸಿ ವರದಿ ಸಲ್ಲಿಸಿದ್ದಾರೆ. ಖಾಸಗಿ ಸಂಸ್ಥೆಗಳಿಗೆ ಆಡಿಟ್‌ ಹೊಣೆಯನ್ನು ನೀಡಲಾಗಿದೆ ಎನ್ನುವ ಕೆಲವರ ಆರೋಪ ಸತ್ಯಕ್ಕೆ ದೂರವಾಗಿದೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.