ಏರ್ ಇಂಡಿಯಾ ವಿಮಾನದಲ್ಲಿ ಹಾವು ಪತ್ತೆ! ; ಘಟನೆಯ ಬಗ್ಗೆ ತನಿಖೆಗೆ ಆದೇಶ
Team Udayavani, Dec 10, 2022, 7:53 PM IST
ದುಬೈ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಬಂದಿಳಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಕಾರ್ಗೋ ಹೋಲ್ಡ್ನಲ್ಲಿ ಹಾವು ಪತ್ತೆಯಾಗಿದ್ದು, ಘಟನೆಯ ಕುರಿತು ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿ737-800 ವಿಮಾನ ಕೇರಳದ ಕ್ಯಾಲಿಕಟ್ನಿಂದ ಬಂದಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ದುಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ವಿಮಾನದ ಕಾರ್ಗೋ ಹೋಲ್ಡ್ನಲ್ಲಿ ಹಾವು ಕಂಡುಬಂದಿದ್ದು, ವಿಮಾನ ನಿಲ್ದಾಣದ ಅಗ್ನಿಶಾಮಕ ಸೇವೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಇದು ನೆಲ-ನಿರ್ವಹಣೆಯ ಲೋಪವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಸೂಕ್ತ ಜಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
ಪ್ರತಿಕ್ರಿಯೆಗಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಕ್ತಾರರನ್ನು ಸಂಪರ್ಕಿಸಲಾಗಲಿಲ್ಲ. ಪ್ರಯಾಣಿಕರ ಸಂಖ್ಯೆಯ ಬಗ್ಗೆ ವಿವರಗಳು ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.