ಯುಸಿಸಿ ಜಾರಿಯತ್ತ ಹೆಜ್ಜೆ; ಗುಜರಾತ್‌ನಲ್ಲಿ ಸಮಾನ ನಾಗರಿಕ ಸಂಹಿತೆ ಶೀಘ್ರ ಅನುಷ್ಠಾನ


Team Udayavani, Dec 11, 2022, 6:30 AM IST

ಯುಸಿಸಿ ಜಾರಿಯತ್ತ ಹೆಜ್ಜೆ; ಗುಜರಾತ್‌ನಲ್ಲಿ ಸಮಾನ ನಾಗರಿಕ ಸಂಹಿತೆ ಶೀಘ್ರ ಅನುಷ್ಠಾನ

ಅಹ್ಮದಾಬಾದ್‌/ಶಿಮ್ಲಾ: ಸತತ 2ನೇ ಬಾರಿಗೆ ಗುಜರಾತ್‌ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್‌ ಅವರು ರಾಜ್ಯದಲ್ಲಿ ಶೀಘ್ರವೇ ಸಮಾನ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನ ಮಾಡುವು ದಾಗಿ ಘೋಷಿಸಿದ್ದಾರೆ.

ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಮಾತನಾಡಿದ ಅವರು, ಸಮಾನ ನಾಗರಿಕ ಸಂಹಿತೆ ರೂಪಿಸುವ ಸಂಬಂಧ ಸಮಿತಿಯೊಂದನ್ನು ರಚಿಸಿದ್ದೇವೆ. ಸಮಿತಿಯ ಶಿಫಾರಸು ಆಧರಿಸಿ ಶೀಘ್ರವೇ ಯುಸಿಸಿ ಜಾರಿ ಮಾಡುತ್ತೇವೆ ಎಂದಿದ್ದಾರೆ.

ಪಕ್ಷ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಬಿಜೆಪಿ ವಾಗ್ಧಾನ ನೀಡಿತ್ತು. ಅದನ್ನು ಈಡೇರಿಸುವ ನಿಟ್ಟಿನಲ್ಲಿ ಸಿಎಂ ಪಟೇಲ್‌ ಹೆಜ್ಜೆಯಿಟ್ಟಿದ್ದಾರೆ. ಇನ್ನು, ಶುಕ್ರವಾರ ಸಂಜೆ ಪಟೇಲ್‌ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಉಲ್ಲಂಘನೆಯಲ್ಲ ಎಂದ ಆಯೋಗ: ಇದೇ ವೇಳೆ, ಗುಜ ರಾತ್‌ ಚುನಾವಣೆ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನೀಡಿದ್ದ ಹೇಳಿಕೆಗೆ ಸಂಬಂಧಿಸಿ ಚುನಾ ವಣ ಆಯೋಗ ಶನಿವಾರ ಅವರಿಗೆ ಕ್ಲೀನ್‌ಚಿಟ್‌ ನೀಡಿದೆ. “2002ರಲ್ಲಿ ಅವರಿಗೆ ನಾವು ಪಾಠ ಕಲಿಸಿದ್ದೆವು’ ಎಂದು ಶಾ ನೀಡಿದ್ದ ಹೇಳಿಕೆಯು ಚುನಾವಣ ನೀತಿ ಸಂಹಿತೆಯ ಉಲ್ಲಂಘನೆ ಆಗುವುದಿಲ್ಲ ಎಂದು ಆಯೋಗ ಹೇಳಿದೆ.

ರಾತೋರಾತ್ರಿ ಕಾಂಗ್ರೆಸ್‌ ಕೌನ್ಸಿಲರ್‌ಗಳ ಘರ್‌ವಾಪ್ಸಿ!
ಶುಕ್ರವಾರ ಸಂಜೆಯಷ್ಟೇ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆ ಯಾಗಿದ್ದ ದಿಲ್ಲಿಯ ಮೂವರು ಕಾಂಗ್ರೆಸ್‌ ಕೌನ್ಸಿಲರ್‌ಗಳು ರಾತೋರಾತ್ರಿ ವಾಪಸ್‌ ಕಾಂಗ್ರೆಸ್‌ಗೆ ಮರಳಿದ್ದಾರೆ! ರಾತ್ರಿ 2 ಗಂಟೆಗೆ ವೀಡಿಯೋ ಸಂದೇಶ ಹರಿಯಬಿಟ್ಟ ದಿಲ್ಲಿ ಕಾಂಗ್ರೆಸ್‌ ಉಪಾಧ್ಯಕ್ಷ ಅಲಿ ಮೆಹಿª, “ನಾನು ಹಾಗೂ ಇಬ್ಬರು ಕೌನ್ಸಿಲರ್‌ಗಳು ಆಪ್‌ಗೆ ಸೇರಿದ್ದೆವು. ನನ್ನ ತಂದೆ ಕಳೆದ 40 ವರ್ಷ ಗಳಿಂದಲೂ ಕಾಂಗ್ರೆಸ್‌ನಲ್ಲಿದ್ದರು. ಆದರೆ ನಾವು ದೊಡ್ಡ ತಪ್ಪು ಮಾಡಿದೆವು. ನಮ್ಮನ್ನು ಕ್ಷಮಿಸಿ, ತಪ್ಪಿನ ಅರಿವಾಗಿ ವಾಪಸ್‌ ಬಂದಿದ್ದೇವೆ’ ಎಂದು ಹೇಳಿದ್ದಾರೆ. ಈ ನಡುವೆ, ದಿಲ್ಲಿಯಲ್ಲಿ ಎಂಸಿಡಿ ಕೌನ್ಸಿಲರ್‌ಗಳಿಗೆ ಹಣದ ಆಮಿಷವೊಡ್ಡಿ ಪಕ್ಷಾಂತರಕ್ಕೆ ಒತ್ತಡ ಹೇರಲಾಗುತ್ತಿದೆ ಎಂದು ಬಿಜೆಪಿ ಮತ್ತು ಆಪ್‌ ಎರಡೂ ಪಕ್ಷಗಳು ಪರಸ್ಪರ ಆರೋಪ ಮಾಡಿವೆ.

ಹಾಲು ಮಾರುತ್ತಿದ್ದ ಮುಖ್ಯಮಂತ್ರಿ ಸುಖು
ಕಳೆದ 40 ವರ್ಷಗಳಿಂದಲೂ ಪಕ್ಷಕ್ಕೆ ನಿಷ್ಠರಾಗಿ ದುಡಿಯುತ್ತಾ, ಕಾಂಗ್ರೆಸ್‌ನ ಮಾಸ್‌ ಲೀಡರ್‌ ಆಗಿ ಗುರುತಿಸಿಕೊಂಡಿರುವ ಸುಖ್‌ವಿಂದರ್‌ ಸಿಂಗ್‌ ಸುಖು (58) ಈಗ ಹಿಮಾಚಲಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. 2003ರಿಂದ ನದೌನ್‌ ಅಸೆಂಬ್ಲಿ ಕ್ಷೇತ್ರದ ಶಾಸಕರಾಗಿರುವ ಅವರು, ಮಾಜಿ ಸಿಎಂ ವೀರಭದ್ರ ಸಿಂಗ್‌ ಅವರ ಟೀಕಾಕಾರನೆಂದೇ ಗುರುತಿಸಿಕೊಂಡವರು.

ಸಿಎಂ ಹುದ್ದೆಯ ಪೈಪೋಟಿಯಲ್ಲಿದ್ದ ಪ್ರತಿಭಾ ಸಿಂಗ್‌ ಹಾಗೂ ಮುಕೇಶ್‌ ಅಗ್ನಿಹೋತ್ರಿ ಅವರು ದಿವಂಗತ “ರಾಜಾ’ ವೀರಭದ್ರ ಸಿಂಗ್‌ ಅವರ ನೆರಳಲ್ಲೇ ರಾಜಕೀಯಕ್ಕೆ ಪ್ರವೇಶ ಪಡೆದವರು. ಆದರೆ ಸುಖ್‌ವಿಂದರ್‌ ಅವರು ಸ್ವಸಾಮರ್ಥ್ಯ ದಿಂದಲೇ ಬೆಳೆದವರು. ಒಂದು ಕಾಲದಲ್ಲಿ ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಸುಖ್‌, ಎನ್‌ಎಸ್‌ಯುಐಯಲ್ಲಿ ಸಕ್ರಿಯರಾಗಿದ್ದರು. ವಿದ್ಯಾರ್ಥಿ ನಾಯಕನಾಗಿ, ಅನಂತರ ಪಾಲಿಕೆ ಚುನಾವಣೆಯಲ್ಲಿ ಗೆದ್ದು, ರಾಜ್ಯ ರಾಜಕೀಯ ಪ್ರವೇಶಿಸಿದ ಅವರು, ಹಿಮಾಚಲದಲ್ಲಿ ಪಕ್ಷದ ಎಲ್ಲ ಹಂತಗಳಲ್ಲೂ ಅನುಭವ ಗಳಿಸುತ್ತಾ ಬಂದವರು. ವಿದ್ಯಾರ್ಥಿ ನಾಯಕನಾಗಿದ್ದಾಗಲೇ ಅವರಿಗೆ “ಫೈರ್‌ಬ್ರ್ಯಾಂಡ್‌’ ಎಂಬ ಹೆಸರಿತ್ತು.

ಪಕ್ಷದ ಕಾರ್ಯಕರ್ತರ ಮೇಲಿನ ಹಿಡಿತ, ಸ್ಥಳೀಯ ರೊಂದಿಗಿನ ಅವರ ಆತ್ಮೀಯ ನಂಟಿ ನಿಂದಾಗಿಯೇ ಹಮೀರ್ಪುರದ 5 ಕ್ಷೇತ್ರಗಳ ಪೈಕಿ 4ರಲ್ಲಿ ಕಾಂಗ್ರೆಸ್‌ ಗೆಲ್ಲಲು ಸಾಧ್ಯವಾಯಿತು ಎಂದು ಹೇಳಲಾಗಿದೆ. ಏಕೆಂದರೆ, ಇದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರ ಪ್ರಭಾವವಿರುವ ಬಿಜೆಪಿಯ ಭದ್ರಕೋಟೆ.

ಹೀಗಿದ್ದರೂ ತಮ್ಮ ಸಂಘಟನ ಸಾಮರ್ಥ್ಯದಿಂದಾಗಿ ಸುಖು ಅವರು ಎಲ್ಲ “ಅಲೆ’ಗಳನ್ನೂ ದಾಟಿ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿ ದ್ದರು. ಸಿಎಂ ಸ್ಥಾನಕ್ಕೆ ಸುಖ್‌ರನ್ನು ಆಯ್ಕೆ ಮಾಡುವ ಮೂಲಕ ಬೇರುಮಟ್ಟದ ಕಾರ್ಯಕರ್ತರಿಗೂ ಉನ್ನತ ಹುದ್ದೆ ನೀಡಲಾಗುತ್ತದೆ ಎಂಬ ಸಂದೇಶ ವನ್ನು ರಾಹುಲ್‌ ಗಾಂಧಿ ರವಾನಿಸಿದ್ದಾರೆ.

 

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.