ವೈಎಸ್ ಶರ್ಮಿಳಾ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬ್ರೇಕ್ ಹಾಕಿದ ಪೊಲೀಸರು
Team Udayavani, Dec 12, 2022, 6:30 AM IST
ಹೈದರಾಬಾದ್: ಪಾದಯಾತ್ರೆಗೆ ಅನುಮತಿ ನೀಡಿದ್ದನ್ನು ನಿರಾಕರಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದ ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್. ಶರ್ಮಿಳಾರನ್ನು ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ರವಿವಾರ ಈ ಬೆಳವಣಿಗೆ ನಡೆದಿದೆ. ಶುಕ್ರವಾರದಿಂದ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.
ರವಿವಾರ ಬೆಳಗ್ಗಿನ ಜಾವ ಪೊಲೀಸರು ಹೈದರಾಬಾದ್ನಲ್ಲಿ ಇರುವ ಅವರ ಪಕ್ಷದ ಕಚೇರಿಯ ಆವರಣಕ್ಕೆ ಆಗಮಿಸಿ ಬಲವಂತವಾಗಿ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಪರೀಕ್ಷೆ ನಡೆಸಿದ್ದ ವೈದ್ಯರು ರಕ್ತದ ಒತ್ತಡ ಗಣನೀಯ ಪ್ರಮಾಣದಲ್ಲಿ ಕುಸಿದು ಹೋಗಿರುವುದಾಗಿ ತಿಳಿಸಿದ್ದರು. ಸದ್ಯ ಅವರ ಸ್ಥಿತಿ ಸುಧಾರಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.