ಮೈಸೂರು: ಚಾಲಾಕಿ ಚಿರತೆ ಸೆರೆಗೆ ಥರ್ಮಲ್ ಡ್ರೋನ್!
ಸೇನಾ ಕಾರ್ಯಾಚರಣೆಯ ಉಪಕರಣ ಮೊದಲ ಬಾರಿಗೆ ಬಳಕೆ
Team Udayavani, Dec 12, 2022, 8:00 AM IST
ಮೈಸೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವನ್ಯಜೀವಿ ಸೆರೆ ಕಾರ್ಯಾಚರಣೆಗೆ ಗಡಿ ರಕ್ಷಣೆ ಮತ್ತು ಸೇನಾ ಕಾರ್ಯಾಚರಣೆಯಲ್ಲಿ ಬಳಕೆ ಮಾಡುವ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಥರ್ಮಲ್ ಡ್ರೋನ್ ಕೆಮರಾವನ್ನು ಅರಣ್ಯ ಇಲಾಖೆ ಬಳಕೆ ಮಾಡುತ್ತಿದೆ.
ಎರಡು ವಾರಗಳಿಂದ ಚಳ್ಳೆಹಣ್ಣು ತಿನ್ನಿಸುತ್ತಿರುವ ತಿ.ನರಸೀಪುರದ ಚಾಲಾಕಿ ಚಿರತೆಯನ್ನು ಸೆರೆ ಹಿಡಿಯಲು ಪಣತೊಟ್ಟಿರುವ ಅಧಿಕಾರಿಗಳು, ಈ ಕೆಮರಾದ ಮೂಲಕ ಅದು ಅಡಗಿರುವ ಪ್ರದೇಶವನ್ನು ಗುರುತಿಸಿದ್ದಾರೆ.
ಆದರೆ ಚಿರತೆ ಸೆರೆಗೆ ಆಳೆತ್ತರ ಬೆಳೆದಿರುವ ಕಬ್ಬಿನ ಗದ್ದೆಗಳೇ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಥರ್ಮಲ್ ಡ್ರೋನ್ ಕೆಮರಾ ಬಳಕೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏನಿದು ಥರ್ಮಲ್ ಡ್ರೋನ್ ?
ಹಗಲು, ರಾತ್ರಿ ವೇಳೆ ಯಾವುದೇ ಚಲನವಲನವನ್ನು ಸ್ಪಷ್ಟವಾಗಿ ಗುರುತಿಸಲ್ಪಡುವ ಹಾಗೂ ಎಲ್ಲ ರೀತಿಯ ವಾತಾವರಣದಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಕೆಮರಾ ಇದು. ಆದರೆ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಥರ್ಮಲ್ ಡ್ರೋನ್ ಬಳಕೆ ಮಾಡುತ್ತಿರುವುದು ಇದೇ ಮೊದಲು ಮತ್ತು ವಿಶೇಷವಾಗಿದೆ.
ಐವರು ನುರಿತ ತಜ್ಞರ ತಂಡ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದು, ಚಿರತೆ ಅಡಗಿ ಕುಳಿತಿರುವ ಸ್ಥಳದ ಬಗ್ಗೆ ನಿಖರ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.