ರೊನಾಲ್ಡೊ ಫೋಟೊ ಹಾಕಿ ಭಾವನಾತ್ಮಕ ಪೋಸ್ಟ್ ಬರೆದ ವಿರಾಟ್ ಕೊಹ್ಲಿ
Team Udayavani, Dec 12, 2022, 11:57 AM IST
ಮುಂಬೈ: ಸದ್ಯ ಕತಾರ್ ನಲ್ಲಿ ನಡೆಯುತ್ತಿರುವ ಫಿಫಾ ಫುಟ್ಬಾಲ್ ವಿಶ್ವಕಪ್ 2022ರಲ್ಲಿ ಪೋರ್ಚುಗಲ್ ತಂಡವು ಕ್ವಾರ್ಟರ್ ಫೈನಲ್ ನಲ್ಲಿ ಸೋಲನುಭವಿಸಿದೆ. ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಕಣ್ಣೀರಿಡುತ್ತಲೇ ಮೈದಾನದಿಂದ ಹೊರ ನಡೆದಿದ್ದರು.
ಇದೀಗ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಅವರು ತಮ್ಮ ನೆಚ್ಚಿನ ಫುಟ್ಬಾಲ್ ಆಟಗಾರನಿಗೆ ಭಾವನಾತ್ಮಕ ಪೋಸ್ಟೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
“ಯಾವುದೇ ಟ್ರೋಫಿ ಅಥವಾ ಯಾವುದೇ ಬಿರುದು ನೀವು ಈ ಕ್ರೀಡೆಯಲ್ಲಿ ಮತ್ತು ಪ್ರಪಂಚದಾದ್ಯಂತದ ಕ್ರೀಡಾಭಿಮಾನಿಗಳಿಗೆ ಏನು ಮಾಡಿದ್ದೀರಿ ಎಂಬುದರ ಬಗ್ಗೆ ಏನನ್ನೂ ತೆಗೆದುಕೊಳ್ಳುವುದಿಲ್ಲ. ಯಾವುದೇ ಶೀರ್ಷಿಕೆಯು ನೀವು ಜನರ ಮೇಲೆ ಬೀರಿದ ಪ್ರಭಾವವನ್ನು ವಿವರಿಸುವುದಿಲ್ಲ. ನಾನು ಸೇರಿದಂತೆ ಪ್ರಪಂಚದಾದ್ಯಂತದ ಅಭಿಮಾನಿಗಳು ನೀವು ಆಡುವುದನ್ನು ಬಯಸುತ್ತಾರೆ” ಎಂದು ವಿರಾಟ್ ಕೊಹ್ಲಿ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
“ಇದು ದೇವರ ಕೊಡುಗೆಯಾಗಿದೆ. ಪ್ರತಿ ಬಾರಿಯೂ ತನ್ನ ಹೃದಯದಿಂದ ಆಡುವ, ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದ ಪ್ರತಿರೂಪ. ಯಾವುದೇ ಕ್ರೀಡಾಪಟುವಿಗೆ ನೀವು ನಿಜವಾದ ಸ್ಫೂರ್ತಿ ಮತ್ತು ನೀವು ನನಗೆ ಸಾರ್ವಕಾಲಿಕ ಶ್ರೇಷ್ಠರು,” ಎಂದು ವಿರಾಟ್ ಕೊಹ್ಲಿ ಬರೆದುಕೊಂಡಿದ್ದಾರೆ.
(1/2) No trophy or any title can take anything away from what you’ve done in this sport and for sports fans around the world. No title can explain the impact you’ve had on people and what I and so many around the world feel when we watch you play. That’s a gift from god. pic.twitter.com/inKW0rkkpq
— Virat Kohli (@imVkohli) December 12, 2022
ಸೋಲಿನ ನಂತರ, ರೊನಾಲ್ಡೊ ತಮ್ಮ ಭಾವನೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಕ್ತಪಡಿಸಿದ್ದಾರೆ.
“ಪೋರ್ಚುಗಲ್‌ಗಾಗಿ ವಿಶ್ವಕಪ್ ಗೆಲ್ಲುವುದು ನನ್ನ ವೃತ್ತಿಜೀವನದ ಅತ್ಯಂತ ದೊಡ್ಡ ಮತ್ತು ಮಹತ್ವಾಕಾಂಕ್ಷೆಯ ಕನಸಾಗಿತ್ತು. ಅದೃಷ್ಟವಶಾತ್ ನಾನು ಪೋರ್ಚುಗಲ್ ಸೇರಿದಂತೆ ಅಂತಾರಾಷ್ಟ್ರೀಯ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದೇನೆ. ನಾನು ವಿಶ್ವಕಪ್ ಗಾಗಿ ತುಂಬಾ ಕಷ್ಟಪಟ್ಟಿದ್ದೇನೆ. ಸುಮಾರು 16 ವರ್ಷಗಳಲ್ಲಿ ಐದು ವಿಶ್ವಕಪ್ ಗಳಲ್ಲಿ ಗೋಲು ಹೊಡೆದಿದ್ದೇನೆ. ನಾನು ಹೋರಾಟಕ್ಕೆ ಎಂದೂ ಬೆನ್ನು ತೋರಿಸಿಲ್ಲ. ಪ್ರತಿ ಬಾರಿಯೂ ನಾನು ಕನಸಿಗಾಗಿ ಹೋರಾಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್‌ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.