ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಮೋಸ ಮಾಡುವ ಜಾಲ ನಿಯಂತ್ರಣಕ್ಕೆ ಪ್ರತ್ಯೇಕ ನಿಗಾ ಘಟಕ: ಅಶೋಕ್
Team Udayavani, Dec 12, 2022, 4:21 PM IST
ಬೆಂಗಳೂರು: ರಾಜ್ಯಾದ್ಯಂತ ಹೆಚ್ಚಿನ ಬಡ್ಡಿ ದರದ ಆಮಿಷವೊಡ್ಡಿ ಬಡ-ಮಧ್ಯಮ ವರ್ಗದ ಜನರನ್ನು ಮೋಸ ಮಾಡುವ ಜಾಲವನ್ನು ಸದೆ ಬಡಿಯಲು ಪ್ರತ್ಯೇಕ ನಿಗಾ ಘಟಕವನ್ನು ಸ್ಥಾಪಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರಲ್ಲದೆ, ಹೆಚ್ಚು ಬಡ್ಡಿಯ ಆಸೆ ತೋರಿಸಿ ಹಣ ಸಂಗ್ರಹಿಸುವ ಎಲ್ಲ ರೀತಿಯ ಚಟುವಟಿಕೆಗಳನ್ನು ಹತ್ತಿಕ್ಕುವುದು ಅನಿವಾರ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಪ್ರತ್ಯೇಕ ನಿಗಾಘಟಕ ಸ್ಥಾಪನೆಯಾಗಲಿದೆ ಎಂದರು.
ಚೈನ್ ಲಿಂಕ್ ನಂತಹ ವಹಿವಾಟುಗಳ ಮೇಲೂ ಹದ್ದುಗಣ್ಣಿಡುವ ಅನಿವಾರ್ಯತೆ ಸೃಷ್ಟಿಯಾಗಿದ್ದು, ಇದು ಮೋಸವೆಂದು ಗೊತ್ತಿದ್ದರೂ ಇದರಲ್ಲಿ ಭಾಗಿಯಾಗುವುದು ಅನಿವಾರ್ಯವೆನ್ನುವಂತಹ ಪರಿಸ್ಥಿತಿಯನ್ನು ಹಲವರು ಎದುರಿಸುತ್ತಿದ್ದಾರೆ ಎಂದರು.
ಹೆಚ್ಚಿನ ಬಡ್ಡಿಯ ಆಸೆಗೆ ಬಡ-ಮಧ್ಯಮ ವರ್ಗದವರು ಖಾಸಗಿಯವರ ಬಳಿ ಬಂಡವಾಳ ಹೂಡಿಕೆ ಮಾಡುತ್ತಿದ್ದು ಬಹುತೇಕ ಪ್ರಕರಣಗಳಲ್ಲಿ ಹಾಕಿದ ಬಂಡವಾಳವೂ ಅವರ ಕೈ ಸೇರದ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂದು ವಿಷಾದಿಸಿದರು.
ಇನ್ನು ಮಳೆಗೆ ಸಿಲುಕಿ ಕುಸಿಯುವ ಮನೆಗಳಿಗೆ ಪರಿಹಾರ ನೀಡುವ ವಿಷಯದಲ್ಲಿ ಮಾರ್ಗಸೂಚಿಯನ್ನು ಬದಲಿಸುವುದಾಗಿ ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.
ಮಳೆಗೆ ಸಿಲುಕಿ ತಮ್ಮ ಮನೆ ಕುಸಿದಿದೆ ಎಂದು ಹಲವು ತಿಂಗಳುಗಳ ನಂತರ ಹೇಳುವವರು ಹೆಚ್ಚಿದ್ದಾರೆ. ಆದರೆ ಮಳೆಗೆ ಮನೆ ಕುಸಿದ ಕೂಡಲೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಗಮನಕ್ಕೆ ಅದು ಬರಬೇಕು. ಮತ್ತು ಮಳೆಯಿಂದ ಮನೆ ಕಳೆದುಕೊಂಡವರು ಗರಿಷ್ಟ ಒಂದು ತಿಂಗಳ ಒಳಗಾಗಿ ಸರ್ಕಾರದ ಗಮನಕ್ಕೆ ತರಬೇಕು. ಹಾಗಾದಾಗ ಮಾತ್ರ ಸರ್ಕಾರ ಪರಿಹಾರದ ಧನವನ್ನು ಒದಗಿಸುತ್ತದೆ ಎಂದರು.
ಕಬಿನಿ ಆಣೆಕಟ್ಟಿನ ನಿರ್ಮಾಣ ಕಾರ್ಯದಿಂದ ಅರಣ್ಯದಲ್ಲಿದ್ದ ನೂರಾರು ಕುಟುಂಬಗಳು ನಿರಾಶ್ರಿತವಾಗಿದ್ದು,ಈ ಕುಟುಂಬಗಳಿಗೆ ಭೂಮಿ ನೀಡಲು 1070 ಎಕರೆ ಭೂಮಿಯನ್ನು ಅರಣ್ಯ ಪ್ರದೇಶದ ವ್ಯಾಪ್ತಿಯಿಂದ ಕಂದಾಯ ಇಲಾಖೆ ವ್ಯಾಪ್ತಿಗೆ ಪಡೆಯಲು ಸರ್ಕಾರ ಬಯಸಿದೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.
ಕಬಿನಿ ಆಣೆಕಟ್ಟು ನಿರ್ಮಾಣದ ಸಮಯದಲ್ಲಿ ನಿರಾಶ್ರಿತರಾದವರಿಗೆ ಏಳು ನೂರು ಎಕರೆ ಭೂಮಿಯನ್ನು ಒದಗಿಸಲು ತೀರ್ಮಾನಿಸಲಾಯಿತು.ಆದರೆ ಆ ಭೂಮಿಯನ್ನು ಪಡೆದವರಿಗೆ ಅರಣ್ಯ ಇಲಾಖೆ ಇದುವರೆಗೆ ಪೋಡಿ ಮಾಡಿಕೊಡಲು ಒಪ್ಪಿಗೆ ನೀಡಿಲ್ಲ. ಸದರಿ ಭೂಮಿಯನ್ನು ಅರಣ್ಯ ಪ್ರದೇಶದ ವ್ಯಾಪ್ತಿಯಿಂದ ಕೈ ಬಿಡದೆ ತಾವು ಪೋಡಿ ಮಾಡಿಕೊಡಲು ಬರುವುದಿಲ್ಲ ಎಂದು ಅರಣ್ಯ ಇಲಾಖೆ ಪಟ್ಟು ಹಿಡಿದಿದ್ದು, ಇತ್ತೀಚೆಗೆ ಆ ಭಾಗದಲ್ಲಿ ನಡೆಸಿದ ಗ್ರಾಮವಾಸ್ತವ್ಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ. ಈಗಾಗಲೇ ನೀಡಿರುವ ಏಳುನೂರು ಎಕರೆ ಮತ್ತು ಬಾಕಿ ಉಳಿದ ಭೂಮಿಯನ್ನು 211 ಕುಟುಂಬಗಳಿಗೆ ನೀಡಲು ಇರುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದರು.
ಇದನ್ನೂ ಓದಿ:ವಿಡಿಯೋ…: ಸಾಕು ನಾಯಿಗೆ ಸೀಮಂತ ಮಾಡಿದ ಮಹಿಳೆ: ಮನೆಯಲ್ಲಿ ಸಂಭ್ರಮದ ಛಾಯೆ
ಈಗಾಗಲೇ ಮಂಜೂರು ಮಾಡಿರುವ ಏಳು ನೂರು ಎಕರೆ ಭೂಮಿಯನ್ನು ಅರಣ್ಯ ಪ್ರದೇಶದ ವ್ಯಾಪ್ತಿಯಿಂದ ಕೈ ಬಿಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಒಪ್ಪಿದ್ದಾರೆ. ಇದೇ ರೀತಿ ಮುನ್ನೂರಾ ಎಪ್ಪತ್ತು ಎಕರೆ ಭೂಮಿಯನ್ನು ಅರಣ್ಯ ಪ್ರದೇಶದ ವ್ಯಾಪ್ತಿಯಿಂದ ಕೈ ಬಿಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ ಎಂದು ವಿವರ ನೀಡಿದರು.
ಸದರಿ ಭೂಮಿಗಾಗಿ ಜೇನುಕುರುಬರು ಮತ್ತು ಹಾಡಿಯ ಜನ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದು ಇತ್ತೀಚೆಗೆ ಒಬ್ಬಾತನ ಕೊಲೆಯೂ ಆಗಿದೆ.ಮತ್ತು ಈ ಸಂಬಂಧ ಸಿಓಡಿ ತನಿಖೆ ನಡೆಸಲಾಗುತ್ತಿದೆ ಎಂದು ನುಡಿದರು.
ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಪೂರ್ಣಗೊಳಿಸುವ ಕುರಿತು ಕಾನೂನಿಗೆ ತಿದ್ದುಪಡಿ ತರಲಾಗಿದ್ದು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವುದಾಗಿ ಇದೇ ಸಂದರ್ಭದಲ್ಲಿ ಅವರು ಹೇಳಿದರು.
ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದ್ದು,ಈ ಹಿನ್ನೆಲೆಯಲ್ಲಿ ಅವರಿಗೆ ತಾವಿರುವ ಜಾಗದ ಹಕ್ಕನ್ನು ನೀಡುವ ಪ್ರಕ್ರಿಯೆ ನಡೆಯುತ್ತಿದೆ.
ಇದಕ್ಕೆ ಪೂರಕವಾಗಿ ಸದ್ಯದಲ್ಲೇ ಯಾದಗಿರಿಯಲ್ಲಿ ಲಂಬಾಣಿ ಸಮಾವೇಶ ನಡೆಯಲಿದ್ದು,ಈ ಸಮಾವೇಶದಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಕೋರಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.