ಇಡಿ ಮುಖ್ಯಸ್ಥರಿಗೆ ಮೂರನೇ ಅವಧಿಯ ವಿಸ್ತರಣೆ: ಕೇಂದ್ರದ ಬಳಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ
ವಿಸ್ತರಣೆಯು ನಮ್ಮ ದೇಶದ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನಾಶಪಡಿಸುತ್ತಿದೆ.....
Team Udayavani, Dec 12, 2022, 4:07 PM IST
ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ನೀಡಲಾದ ಮೂರನೇ ಅವಧಿಯ ವಿಸ್ತರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರಕಾರ ಮತ್ತು ಇತರರಿಂದ ಪ್ರತಿಕ್ರಿಯೆ ಕೇಳಿದೆ.
ಕಾಂಗ್ರೆಸ್ ನಾಯಕ ಜಯಾ ಠಾಕೂರ್ ಅವರು ಸಲ್ಲಿಸಿದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ಕೇಂದ್ರ ಸರಕಾರ, ಸೆಂಟ್ರಲ್ ವಿಜಿಲೆನ್ಸ್ ಕಮಿಷನ್ ಮತ್ತು ಇಡಿ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.ಆರು ವಾರಗಳಲ್ಲಿ ನೋಟಿಸ್ ಗೆ ಪ್ರತಿಕ್ರಿಯಿಸಬಹುದು ಎಂದು ಪೀಠ ಹೇಳಿದೆ.
ಕೇಂದ್ರ ಸರಕಾರವು ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಜಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಮೂಲ ರಚನೆಯನ್ನು ನಾಶಪಡಿಸುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
“ಪ್ರತಿವಾದಿ ನಂ.2 ಮಿಶ್ರಾ ಅವರ ಅಧಿಕಾರಾವಧಿಯ ವಿಸ್ತರಣೆಯು ನಮ್ಮ ದೇಶದ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನಾಶಪಡಿಸುತ್ತಿದೆ, ಆದ್ದರಿಂದ ಅರ್ಜಿದಾರರಿಂದ ಪ್ರಸ್ತುತ ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ, ಇದನ್ನು ನ್ಯಾಯದ ಹಿತಾಸಕ್ತಿಯಲ್ಲಿ ದಯೆಯಿಂದ ಅನುಮತಿಸಬಹುದು” ಎಂದು ವಕೀಲರಾದ ವರುಣ್ ಠಾಕೂರ್ ಮತ್ತು ಶಶಾಂಕ್ ರತ್ನೂ ಮೂಲಕ ಮನವಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.