ಕಬ್ಬು ಕಟಾವು, ಸಾಗಣೆ ವೆಚ್ಚ ಕಡಿತಕ್ಕೆ ಸಮಿತಿ ರಚನೆ: ಮುನೇನಕೊಪ್ಪ
Team Udayavani, Dec 12, 2022, 9:52 PM IST
ಬೆಂಗಳೂರು: ಕಬ್ಬಿನ ಕಟಾವು ಮತ್ತು ಸಾಗಣೆ ವೆಚ್ಚ ಕಡಿತದ ಕುರಿತಂತೆ ಒಂದು ತಿಂಗಳಲ್ಲಿ ಸಮಿತಿ ರಚಿಸಿ ವರದಿ ಪಡೆಯಲಾಗುವುದು. ಅದರ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶಗಳನ್ನು ಕಬ್ಬು ಬೆಳೆಗಾರರಿಗೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಮೊದಲ ಕಂತಿನಲ್ಲಿ ತಲಾ 50 ರೂ.ನಂತೆ 202 ಕೋಟಿ ರೂ.ಗಳನ್ನು ರೈತರ ಖಾತೆಗೆ ಹಾಕಲು ನಿರ್ಧರಿಸಲಾಗಿದೆ. ಹೀಗೆ ಲಾಭಾಂಶ ನೀಡುತ್ತಿರುವ ರಾಜ್ಯಗಳಲ್ಲಿ ಉತ್ತರಪ್ರದೇಶ, ಮಹಾರಾಷ್ಟ್ರದ ಬಳಿಕ ಕರ್ನಾಟಕ ಮೂರನೇ ರಾಜ್ಯವಾಗಿದೆ ಎಂದರು.
ಕಬ್ಬು ಬೆಳೆಗಾರರಿಗೆ ನೀಡಬೇಕಿದ್ದ 19,624 ಕೋಟಿ ರೂ. ಅನ್ನು ಈಗಾಗಲೆ ಪಾವತಿಸಲಾಗಿದೆ. ಮೈಶುಗರ್ ಸಹಿತ ಎಲ್ಲ ಕಾರ್ಖಾನೆಗಳ ಪುನಃಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಬ್ಬಿನ ಉಪ ಉತ್ಪನ್ನವಾದ ಎಥೆನಾಲ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ. ಅದಕ್ಕಾಗಿ ಹೊಸ ಎಥೆನಾಲ್ ನೀತಿ ಜಾರಿಗೆ ಇಲಾಖೆ ಮುಂದಾಗಿದೆ.
44 ಸಕ್ಕರೆ ಕಾರ್ಖಾನೆಗಳಿಂದ ಎಥೆನಾಲ್ ಉತ್ಪಾದನೆಗೆ ಅರ್ಜಿ ಬಂದಿವೆ. ಕಳೆದ ಬಾರಿ 6.22 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯಲಾಗಿದ್ದು, ಈ ಬಾರಿ ಆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.