ಹೆಚ್ ಡಿಕೆ ವಿಚಾರದಲ್ಲಿ ಶಿಷ್ಟಾಚಾರ ಲೋಪ: ಕಾರ್ಯಪಾಲಕ ಇಂಜಿನಿಯರ್ ಅಮಾನತು
Team Udayavani, Dec 12, 2022, 10:15 PM IST
ರಾಮನಗರ : ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ (KRIDL) ವತಿಯಿಂದ ಹಮ್ಮಿಕೊಂಡಿದ್ದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿಷಯದಲ್ಲಿ ಶಿಷ್ಟಾಚಾರ ಲೋಪ ಎಸಗಿದ ಅಧಿಕಾರಿ ವಿರುದ್ಧ ರಾಜ್ಯ ಬಿಜೆಪಿ ಸರ್ಕಾರ ಕೊನೆಗೂ ಶಿಸ್ತು ಕ್ರಮ ಕೈಗೊಂಡಿದೆ.
ಮಾಜಿ ಮುಖ್ಯಮಂತ್ರಿಗಳ ವಿಷಯದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಕಾರಣಕ್ಕೆ ರಾಮನಗರ ವಿಭಾಗದ ಪ್ರಭಾರಿ ಕಾರ್ಯಪಾಲಕ ಇಂಜಿನಿಯರ್ ವಿ.ಶ್ರೀಧರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಈ ಬಗ್ಗೆ ಇಂದು ಆದೇಶ ಹೊರಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಜೆ.ಹಿರೇಮಠ್ ಅವರು, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ.
2022 ಅಕ್ಟೋಬರ್ 1ರಂದು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡದೆ ಹಾಗೂ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ವತಿಯಿಂದ ಕೈಗೆತ್ತಿಕೊಳ್ಳಲಾಗಿದ್ದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಪೂಜೆ ಮಾಡಲಾಗಿತ್ತು.ಅಲ್ಲದೆ, ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಅಧಿಕಾರಿಗಳ ಬೆಂಬಲದೊಂದಿಗೆ ಕಾಮಗಾರಿಗಳಿಗೆ ಸಾವಿರಾರು ಪೊಲೀಸರ ರಕ್ಷಣೆಯೊಂದಿಗೆ ಪೂಜೆ ಮಾಡಲು ಹೊರಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು ಹಕ್ಕು ಚ್ಯುತಿ ಆಗಿದೆ ಎಂದು ಸ್ಪೀಕರ್ ಅವರಿಗೆ ದೂರು ನೀಡಿದ್ದರು. ಅಲ್ಲದೆ ಜೆಡಿಎಸ್ ಪಕ್ಷವು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.