ಅಯೋಧ್ಯೆ ರಾಮಮಂದಿರಕ್ಕೆ ಬೆಳ್ಳಿ ಇಟ್ಟಿಗೆ ಸಮರ್ಪಣೆ

Team Udayavani, Dec 13, 2022, 12:22 PM IST

tdy-9

ರಾಮನಗರ: ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬೆಳ್ಳಿ ಇಟ್ಟಿಗೆ ಸಮರ್ಪಿಸಲಿದ್ದೇವೆ ಎಂದು ಕೆಎಸ್‌ಐಸಿ ಅಧ್ಯಕ್ಷ ಗೌತಮ್‌ಗೌಡ ತಿಳಿಸಿದರು.

ಕೆಂಗಲ್‌ ಆಂಜನೇಯಸ್ವಾಮಿ ದೇವಾಲಯದಲಿ ಬೆಳ್ಳಿ ಇಟ್ಟಿಗೆಗೆ ಪೂಜೆ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯ ಪವಿತ್ರ ಸ್ಥಳಗಳಾದ ಶ್ರೀರಾಮದೇವರ ಬೆಟ್ಟ, ಕೆಂಗಲ್‌ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಈ ಬೆಳ್ಳಿ ಇಟ್ಟಿಗೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮಮಂದಿರ ಕಾರ್ಯಕ್ಕೆ ಸಮರ್ಪಣೆ ಮಾಡಲಾಗುವುದು ಎಂದು ಹೇಳಿದರು.

ಜನರ ಕಾಣಿಕೆಯೂ ಸೇರಿದೆ: ಶ್ರೀರಾಮ, ಲಕ್ಮಣ ಮತ್ತು ಸೀತೆ ಅರ್ಕಾವತಿ ನದಿಯ ದಂಡೆಯಲ್ಲಿ ನೆಲೆಸಿದ್ದು, ಧಾರ್ಮಿಕ ಸ್ಥಳವಾಗಿ ಮಾರ್ಪಟ್ಟಿದೆ. ಹೀಗಾಗಿ ಈ ಪುಣ್ಯ ಸ್ಥಳದಿಂದಲೇ ಬೆಳ್ಳಿ ಇಟ್ಟಿಗೆಗೆ ಪೂಜೆ ಪ್ರಾರಂಭಿಸಿದ್ದೇವೆ. ದೇವಾಲಯ ನಿರ್ಮಾಣಕ್ಕೆ ಜಿಲ್ಲಾ ಬಿಜೆಪಿ ಮತ್ತು ಸಾರ್ವಜನಿಕವಾಗಿ ನಾಲ್ಕು ತಾಲೂಕುಗಳ ಸಾರ್ವಜನಿಕರಿಂದ ಸೇರಿ ತಂದಿರುವ ಕಾಣಿಕೆ ಇದಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್ತು ಸದಸ್ಯ ಸಿ.ಪಿ.ಯೋಗೇಶ್ವರ್‌ ಮಾತನಾಡಿ, ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಮುಗಿಯುವ ಹಂತಕ್ಕೆ ಬಂದಿದ್ದು, ರಾಮನಗರದಿಂದ ಭಕ್ತರ ಪರವಾಗಿ ದೇಗುಲಗಳಲ್ಲಿ ಸಾಂಕೇತಿಕವಾಗಿ ಪೂಜೆ ಸಲ್ಲಿಸಿ, ಈ ಬೆಳ್ಳಿ ಇಟ್ಟಿಗೆಯನ್ನು ಸಮರ್ಪಿಸಲಾಗುತ್ತಿದೆ. ಇದೊಂದು ಭಾವನಾತ್ಮಕವಾದ ವಿಚಾರವಾಗಿದ್ದು, ಆದಷ್ಟು ಬೇಗ ದೇವಸ್ಥಾನ ನಿರ್ಮಾಣ ಕಾರ್ಯ ಮುಗಿದು, ಭಕ್ತರಿಗೆ ಶ್ರೀರಾಮರ ದರ್ಶನವಾಗಲಿ ಎಂದು ಆಶಿಸಿದರು.

ಮಂದಿರ ಬಿಜೆಪಿಯ ಬದ್ಧತೆ: ರಾಮ ರಾಜ್ಯ ಹಾಗೂ ಮಂದಿರ ನಿರ್ಮಾಣ ಬಿಜೆಪಿಯ ಬದ್ಧತೆಯಾಗಿದ್ದು, ಈ ಎರಡನ್ನೂ ಸಾಕಾರ ಮಾಡುವ ದಿಕ್ಕಿನಲ್ಲಿ ಈಗಾಗಲೇ ಹೆಜ್ಜೆ ಇಡಲಾಗಿದೆ. ಈ ನಿಟ್ಟಿನಲ್ಲಿ ಜನತೆ ಬಿಜೆಪಿಯ ಬದ್ಧತೆ, ನುಡಿದಂತೆ ನಡೆಯುವ ಬಗ್ಗೆ ಅರಿತಿದ್ದಾರೆ ಎಂದು ಹೇಳಿದರು.

ಮುಂಬರುವ ಚುನಾವಣೆಯಲ್ಲಿ ರಾಜ್ಯ, ತಾಲೂಕಿನಲ್ಲಿ ಮತ್ತೆ ಕಮಲ ಅರಳಿಸಲು ಜನರು ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.

ಕೆಎಸ್‌ಐಸಿ ಅಧ್ಯಕ್ಷ ಗೌತಮ್‌ ಮರಿಲಿಂಗೇಗೌಡ ಮಾತನಾಡಿದರು. ಬಿಜೆಪಿ ಮುಖಂಡರಾದ ರವೀಶ್‌, ನಗರಸಭೆ ಮಾಜಿ ಸದಸ್ಯ ನಾಗೇಶ್‌, ಮಂಜು, ಗೋಪಾಲ್‌, ಲಿಂಗೇಶ್‌ಕುಮಾರ್‌, ಕುಳ್ಳಪ್ಪ, ಜಯರಾಮು, ರಾಜೇಶ್‌ ಸೇರಿದಂತೆ ಜಿಲ್ಲೆಯ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.