ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ
ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕಾಮಗಾರಿ ಕುಂಠಿತ; ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
Team Udayavani, Dec 13, 2022, 3:53 PM IST
ರಬಕವಿ-ಬನಹಟ್ಟಿ: ತೇರದಾಳ ಮತಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ತೆಗೆದುಕೊಂಡು ಬರಲಾಗಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಮಗಾರಿಗಳು ಕುಂಠಿತಗೊಂಡಿವೆ. ಈ ಎಲ್ಲ ವಿಷಯಗಳನ್ನು ಬರುವ ಬೆಳಗಾವಿ ಅಧಿ ವೇಶನದಲ್ಲಿ ಚರ್ಚೆ ಮಾಡಲಾಗುವುದು. ಈ ಕಾಮಗಾರಿಗಳ ಪರಿಶೀಲನೆ ಮತ್ತು ಅವುಗಳಿಗೆ ವೇಗ ನೀಡುವುದರ ಜತೆಗೆ ಆದಷ್ಟು ಬೇಗನೆ ಕಾಮಗಾರಿ ಮುಕ್ತಾಯಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವ ನಿಟ್ಟಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿವೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಸೋಮವಾರ ಸ್ಥಳೀಯ ನಗರಸಭೆಯ ಕಾರ್ಯಾಲಯದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಗಳು ಮತ್ತು ಕಾರ್ಯ ನಿರ್ವಾಹಕ ಅಧಿಕಾರಿಗಳು ವಿವಿಧ ಇಲಾಖೆಗಳ ಪ್ರಗತಿ ಮುಂಚಿತವಾಗಿ ಪರಿಶೀಲನೆ ಮಾಡಿದ ನಂತರ ಶಾಸಕರ ಗಮನಕ್ಕೆ ತರಬೇಕು. ಇದರಿಂದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ರಸ್ತೆ ಕಾಮಗಾರಿಯ ಅಭಿವೃದ್ದಿಯ ನಿಟ್ಟಿನಲ್ಲಿ ಜಮಖಂಡಿಯ ಲೋಕೋಪಯೋಗಿ ಅಧಿಕಾರಿಗಳು ತೇರದಾಳ ಮತಕ್ಷೇತ್ರಕ್ಕೆ ತಾರತಮ್ಯ ಎಸಗುತ್ತಿದ್ದಾರೆ ಎಂದರು.
ತೇರದಾಳ ಮತಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆಗೆ ಹೆಚ್ಚು ಗಮನ ನೀಡಬೇಕು. ಕಾಮಗಾರಿಗಳನ್ನು ಆರಂಭ ಮಾಡದ ಗುತ್ತಿಗೆದಾರರಿಗೆ ನೋಟಿಸ್ ನೀಡಿ ಪುನಃ ಟೆಂಡರ್ ಮಾಡುವಂತೆ ತಿಳಿಸಿದರು.
ಜಮಖಂಡಿ ತಾಲೂಕು ಆರೋಗ್ಯಾಧಿಕಾರಿ ಡಾ| ಜಿ.ಎಚ್.ಗಲಗಲಿ ಮಾತನಾಡಿ, ರಬಕವಿ ಬನಹಟ್ಟಿ ತಾಲೂಕಿನಲ್ಲಿ ಶೇ. 33 ಮಕ್ಕಳಿಗೆ ಮೆದುಳು ಜ್ವರದ ವ್ಯಾಕ್ಸಿನ್ ನೀಡಲಾಗಿದೆ. ಇದುವರೆಗೆ ತಾಲೂಕಿನಲ್ಲಿ ಯಾವುದೆ ಪ್ರಕರಣಗಳು ಪತ್ತೆಯಾಗಿಲ್ಲ. ತಾಲ್ಲೂನಲ್ಲಿ 11 ಸಂಶಾಯಸ್ಪದ ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಐದು ಖಚಿತಗೊಂಡಿವೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸನ್ನವರ ಮಾತನಾಡಿ, ವಿವೇಕ ಯೋಜನೆ ಅಡಿಯಲ್ಲಿ ರಬಕವಿ ಬನಹಟ್ಟಿ ತಾಲೂಕಿನ 18 ಶಾಲೆಗಳಿಗೆ 30 ಕೋಣೆಗಳು ಮಂಜೂರಾಗಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಾಗಿ ತಾಲ್ಲೂಕಿನಲ್ಲಿ ವಿಶೇಷ ಗಮನ ನೀಡಲಾಗುತ್ತಿದೆ ಎಂದರು.
ಅಧಿಕಾರಿಗಳು ಶಾಸಕರ ಸಮಯವನ್ನು ತೆಗೆದುಕೊಂಡು ಅವರ ಕಾರ್ಯಾಲಯಕ್ಕೆ ಬಂದು ಇಲಾಖೆಗಳ ಪ್ರಗತಿಯ ಕುರಿತು ಚರ್ಚೆ ಮಾಡಬೇಕು ಎಂದರು.
ತಾಪಂ ಆಡಳಿತಾಧಿಕಾರಿ ಎಂ.ಜಿ.ಕೊಣ್ಣೂರ, ಕಾರ್ಯ ನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ, ತಹಶೀಲ್ದಾರ್ ಎಸ್.ಬಿ.ಇಂಗಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.