‘ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ’ಕ್ಕಾಗಿ ಸಲಹೆ ನೀಡಿ: ಅನಿವಾಸಿ ಕನ್ನಡಿಗರಲ್ಲಿ ಡಿಕೆ‌ಶಿ ಮನವಿ


Team Udayavani, Dec 13, 2022, 7:00 PM IST

‘ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ’ಕ್ಕಾಗಿ ಅನಿವಾಸಿ ಕನ್ನಡಿಗರಿಂದ ಸಲಹೆ ಆಹ್ವಾನಿಸಿದ ಡಿಕೆ‌ಶಿ

ಬೆಂಗಳೂರು: ಅನಿವಾಸಿ ಕನ್ನಡಿಗರಿಂದ ಪಕ್ಷದ ಪ್ರಣಾಳಿಕೆ ‘ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ’ಕ್ಕಾಗಿ ಸಲಹೆಗಳನ್ನು ಆಹ್ವಾನಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಈ ಕುರಿತಾದ ವಿಡಿಯೋವನ್ನು ಮಂಗಳವಾರದಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸಿದ್ದಾರೆ.

“ಜಾಗತಿಕ ಮಟ್ಟದಲ್ಲಿ ಕನ್ನಡಿಗರು ಸೇವೆ ಸಲ್ಲಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ವಿಶ್ವದ ಅನೇಕ ನಾಯಕರು ಬೆಂಗಳೂರು ಮತ್ತು ಕರ್ನಾಟಕದ ಮುಖಾಂತರ ಭಾರತವನ್ನು ಗುರುತಿಸುತ್ತಿದ್ದಾರೆ. ಆದರೆ ಇವತ್ತು ಕರ್ನಾಟಕಕ್ಕೆ ಒಂದು ಕಳಂಕ ಕೂಡ ಬಂದಿದೆ. ಅದನ್ನು ತಪ್ಪಿಸಿ ನಮ್ಮ ರಾಜ್ಯ ಹಾಗೂ ಅಸ್ತಿತ್ವದ ಘನತೆಯನ್ನು ಕಾಪಾಡಬೇಕಿದೆ” ಎಂದು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಡಿ‌.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ,

“ರಾಜ್ಯದ ಒಳಿತಿಗಾಗಿ ಹಾಗೂ ಉತ್ತಮ ಆಡಳಿತಕ್ಕಾಗಿ ಅನಿವಾಸಿ ಕನ್ನಡಿಗರು ಸಲಹೆ ನೀಡಬೇಕು. ಗ್ಲೋಬಲ್ ಕರ್ನಾಟಕ, ಬೆಟರ್ ಕರ್ನಾಟಕಕ್ಕಾಗಿ ನಿಮ್ಮ ಸಲಹೆ-ಸೂಚನೆಗಳನ್ನು ನೀಡಬೇಕು” ಎಂದವರು ವಿನಂತಿಸಿಕೊಂಡಿದ್ದಾರೆ.

ರಾಜ್ಯವು ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಅಭಿಪ್ರಾಯ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಆಗಬೇಕಿರುವ ಕೆಲಸಕಾರ್ಯಗಳ ಕುರಿತು ಸಲಹೆ ಸೂಚನೆಯ ಜೊತೆಗೆ ರಾಜ್ಯದಲ್ಲಿ ಅಳವಡಿಸಬೇಕಿರುವ ವಿಷಯಗಳ ಕುರಿತು ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಜಗತ್ತಿನಾದ್ಯಂತ ನೆಲೆಸಿರುವ ಕನ್ನಡಿಗರಲ್ಲಿ ಕೇಳಿಕೊಂಡಿದ್ದಾರೆ‌ .

“ಡಾ.ಜಿ.ಪರಮೇಶ್ವರ್ ಅವರು ಪ್ರಣಾಳಿಕಾ ಸಮಿತಿಯ ಅಧ್ಯಕ್ಷರಾಗಿದ್ದು, ಪ್ರಣಾಳಿಕೆಯ ಕರಡನ್ನು ಅಂತಿಮಗೊಳಿಸಲಿದ್ದಾರೆ. ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿರುವ ನನಗೆ ಪ್ರತಿಯೊಂದು ವಿಷಯಕ್ಕೆ ಸಂಬಂಧಿಸಿದಂತೆ ನಿಮ್ಮೆಲ್ಲರ ಸಹಕಾರ, ಸಲಹೆ ಸೂಚನೆಗಳ ಅಗತ್ಯವಿದೆ. ಕರ್ನಾಟಕದ ಅಭಿವೃದ್ಧಿಗಾಗಿ ನಿಮ್ಮ ಸಲಹೆಗಳನ್ನು ಆಹ್ವಾನಿಸುತ್ತಿದ್ದೇನೆ” ಎಂದವರು ಹೇಳಿದ್ದಾರೆ.

ಪ್ರಣಾಳಿಕೆಗಾಗಿ ಜನರು ತಮ್ಮ ಸಲಹೆ-ಸೂಚನೆಗಳನ್ನು ಹಂಚಿಕೊಳ್ಳಲು ಡಿ.ಕೆ ಶಿವಕುಮಾರ್ ಅವರು [email protected] ಇಮೇಲ್ ಐಡಿಯನ್ನು ಬಿಡುಗಡೆಗೊಳಿಸಿದ್ದು, ಮುಕ್ತವಾಗಿ ಇದರಲ್ಲಿ ತೊಡಗಿಸಿಕೊಳ್ಳಲು ಜನರಿಗೆ ಕರೆ ನೀಡಿದ್ದಾರೆ. “ನಮ್ಮ ಗ್ಲೋಬಲ್ ವಿಶನ್ ಕರ್ನಾಟಕ, ಬೆಟರ್ ಕರ್ನಾಟಕಕ್ಕಾಗಿ, ಮುಂದಿನ ಭವಿಷ್ಯಕ್ಕೋಸ್ಕರ ನಿಮ್ಮ ಸಲಹೆಯನ್ನು ನಮ್ಮ ಪ್ರಣಾಳಿಕೆಯಲ್ಲಿ ಸೇರಿಸಲಿದ್ದೇವೆ” ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಸಲಹೆ-ಸೂಚನೆಗಳನ್ನು ವಿಡಿಯೋ, ಟೆಕ್ಸ್ಟ್ ಮೆಸೇಜ್ ಹಾಗೂ ವಿವರವಾದ ವರದಿಗಳ ಮೂಲಕ ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡು ತಮ್ಮನ್ನು ಟ್ಯಾಗ್ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದು, ಈ ಮೂಲಕ ವೈಯಕ್ತಿಕವಾಗಿ ಜನರ ಸಲಹೆ-ಸೂಚನೆಗಳನ್ನು ಓದಿ, ಅಧ್ಯಯನ ಮಾಡಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರಾಮನಗರದ ರೇಷ್ಮೆ ಸೀರೆ, ಶಲ್ಯ ಕೊಡುಗೆ: ಅಶ್ವತ್ಥನಾರಾಯಣ

 

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.