12 ವರ್ಷದ ಬಳಿಕ ತಂಡಕ್ಕೆ ಆಯ್ಕೆಯಾದರೂ ಮೊದಲ ಟೆಸ್ಟ್ ಪಂದ್ಯಕ್ಕೆ ಉನಾದ್ಕಟ್ ಅಲಭ್ಯ
Team Udayavani, Dec 14, 2022, 8:27 AM IST
ನವದೆಹಲಿ: ಸೌರಾಷ್ಟ್ರ ತಂಡದ ನಾಯಕ ಎಡಗೈ ವೇಗಿ ಜಯ್ದೇವ್ ಉನಾದ್ಕಟ್ ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿದ್ದರೂ, ಅವರು ಮೊದಲ ಟೆಸ್ಟ್ ಆಡಲು ಅಲಭ್ಯವಾಗಿರಲಿದ್ದಾರೆ ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಬಾಂಗ್ಲಾ ಪ್ರವಾಸದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಅವರ ಜಾಗದಲ್ಲಿ ಆಡಲು ಅವಕಾಶ ಪಡೆದುಕೊಂಡಿದ್ದಾರೆ. ಮೊದಲ ಪಂದ್ಯ ಆರಂಭಕ್ಕೂ ಮುನ್ನ ಉನಾದ್ಕಟ್ ಅವರು ಇಲ್ಲಿಗೆ ತಲುಪುದಿಲ್ಲ. ಒಂದು ವೇಳೆ ಅವರ ವೀಸಾ ಪೇಪರ್ ನ ಸಮಸ್ಯೆಗಳು ಸರಿಯಾಗಿ ಅವರು ಇಲ್ಲಿಗೆ ತಲುಪಿದರೂ ಆದಾಗಲೇ ಟೆಸ್ಟ್ ಆರಂಭವಾಗಿರುತ್ತದೆ ಎಂದು ಬಿಸಿಸಿಐ ಮೂಲಗಳನ್ನು ಆಧಾರಿಸಿ ವರದಿ ಹೇಳಿದೆ.
ವೀಸಾ ಸಮಸ್ಯೆಯ ಕಾರಣದಿಂದ ಉನಾದ್ಕತ್ ಸೂಕ್ತ ಸಮಯಕ್ಕೆ ತಲುಪಲು ಆಗಿಲ್ಲ. ಅವರಿನ್ನೂ ಭಾರತದಲ್ಲೇ ಉಳಿದಿದ್ದಾರೆ ಎಂದು ವರದಿ ತಿಳಿಸಿದೆ.
31 ವರ್ಷ ವಯಸ್ಸಿನ ಎಡಗೈ ವೇಗಿ ಉನಾದ್ಕತ್ 2010 ರಲ್ಲಿ ಸೆಂಚುರಿಯನ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಏಕೈಕ ಟೆಸ್ಟ್ ಆಡಿದ್ದರು. ಅಲ್ಲಿಂದೀಚೆಗೆ, ಅವರು ಏಳು ಏಕದಿನ ಮತ್ತು 10 ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ದೇಶಿಯ ಕ್ರಿಕೆಟ್ ನಲ್ಲಿ ಉನಾದ್ಕಟ್ ಸೌರಾಷ್ಟ್ರ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.