ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ 1.25 ಕೋ.ರೂ. ವಂಚನೆ
Team Udayavani, Dec 15, 2022, 6:05 AM IST
ಮಂಗಳೂರು : ನಕಲಿ ದಾಖಲೆಗಳನ್ನು ಸೃಷ್ಟಿಸಿ 1 ಕೋ.ರೂ. ಮೌಲ್ಯದ ಚಿನ್ನಾಭರಣ ಹಾಗೂ 25 ಲ.ರೂ. ಗೃಹ ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೀಟಾ ಪೇರಿಸ್ ದೂರು ನೀಡಿದವರಾಗಿದ್ದು ಅವರ ಪುತ್ರಿ ನಿಖೀತಾ ಪೇರಿಸ್ ಮತ್ತು ಗೋಡ್ವಿನ್ ಫೆರ್ನಾಂಡಿಸ್ ಆರೋಪಿಗಳಾಗಿದ್ದಾರೆ.
ರೀಟಾ ಪೇರಿಸ್ ಮತ್ತು ಅವರ ಪುತ್ರ ಅಮಿತ್ ಪೇರಿಸ್ ವಿದೇಶದಲ್ಲಿದ್ದು ರೀಟಾ ಪೇರಿಸ್ ಅವರ ಪುತ್ರಿ ನಿಕಿತಾ ಪೇರಿಸ್ ಮುದರಂಗಡಿಯ ಗೋಡ್ವಿನ್ ಫೆರ್ನಾಂಡಿಸ್ನ ಜತೆ ಸೇರಿಕೊಂಡು ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ನಕಲಿ ಜಿಪಿಎ ಸೃಷ್ಟಿ
ಉಡುಪಿಯ ವಕೀಲರಿಂದ ನಕಲಿ ಜಿಪಿಎ ತಯಾರಿಸಲಾಗಿದೆ. ರೀಟಾ ಪೇರಿಸ್ ಮತ್ತು ಅಮಿತ್ ಪೇರಿಸ್ ಅವರ ನಕಲಿ ಸಹಿ ಮಾಡಿ ಬ್ಯಾಂಕ್ ಮ್ಯಾನೇಜರ್ಗೆ ದಾಖಲಾತಿ ನೀಡಿ ಫ್ಲ್ಯಾಟಿನ ಮೇಲೆ 25 ಲ.ರೂ. ಗೃಹಸಾಲ ಪಡೆದಿದ್ದಾರೆ. ಅನಂತರ ನಕಲಿ ಸಹಿ ಮಾಡಿದ ದಾಖಲೆಯನ್ನು ನೀಡಿ ವಾಮಂಜೂರಿನ ಬ್ಯಾಂಕ್ ಖಾತೆಯ ಲಾಕರ್ನಲ್ಲಿದ್ದ ರೀಟಾ ಪೇರಿಸ್ ಅವರಿಗೆ ಸೇರಿದ 1 ಕೋ.ರೂ. ಮೌಲ್ಯದ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಅಲ್ಲದೆ ನಕಲಿ ಸಹಿ ಮಾಡಿ ರೀಟಾ ಪೇರಿಸ್ ಅವರ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತೆಗೆದುಕೊಂಡು ಹೋಗಿ ವಂಚಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.