ನನಗೆ ನನ್ನದೇ ಶಕ್ತಿಯಿದೆ; ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ: ಯಡಿಯೂರಪ್ಪ
Team Udayavani, Dec 15, 2022, 10:07 AM IST
ಬೆಂಗಳೂರು: ನನಗೆ ನನ್ನದೇ ಆದ ಶಕ್ತಿಯಿದೆ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೇ ಮುಂದುವರೆಸುತ್ತೇನೆ. ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕೊಪ್ಪಳಕ್ಕೆ ತೆರಳುವುದಕ್ಕೆ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ನಡ್ಡಾ ಅವರು ಕೊಪ್ಪಳಕ್ಕೆ ಬರ್ತಿದ್ದಾರೆ. ಅವರ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಬೇರೆ ಕಾರಣಕ್ಕೆ ನಾನು ಇವತ್ತು ಕಾರ್ಯಕ್ರಮಕ್ಕೆ ಹೋಗದೇ ಇರುವ ಸ್ಥಿತಿಯಿತ್ತು. ಹೋಗಲೇ ಬೇಕೆಂಬ ಸ್ಥಿತಿ ಬಂತು. ಹೀಗಾಗಿ ಹೋಗುತ್ತಿದ್ದೇನೆ ಎಂದರು.
ಸಿಎಂ ಕೂಡಾ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಇಬ್ಬರು ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಗೊಂದಲಗಳಿಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನು ಸೃಷ್ಟಿ ಮಾಡಲು ಹೋಗಬೇಡಿ. ನಾವೆಲ್ಲ ಒಟ್ಟಾಗಿ ಇದ್ದೇವೆ. ಒಂದಾಗಿ ಇದ್ದೇವೆ ನಮ್ಮದು ಒಂದೇ ಅಜೆಂಡಾ. ಮುಂದೆ ಚುನಾವಣೆ ಇದೆ, ಪಕ್ಷವನ್ನ ಅಧಿಕಾರಕ್ಕೆ ತರುವುದು. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕುತ್ತೇನೆ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಮೋದಿ, ಅಮಿತ್ ಶಾ, ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತದೆ. ಇದೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ನನ್ನನ್ನು ಪಕ್ಷ ಕಡೆಗಣನೆ ಮಾಡುತ್ತಿಲ್ಲ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲಾ ಕಾರ್ಯಕ್ರಮಗಳಿಗೆ ನಾನು ಹೋಗುತ್ತಿದ್ದೇನೆ. ಸರ್ಕಾರಿ ಕಾರ್ಯಕ್ರಮಕ್ಕೆ ನಾನು ಹೋಗೋದು ಸರಿಯಲ್ಲವೆಂದು ಹೋಗಿಲ್ಲ ಅಷ್ಟೆ. ಆದರೆ ಸಾರ್ವಜನಿಕ ಸಭೆ ಸಮಾರಂಭಗಳಿಗೆ ನನ್ನನ್ನ ಯಾರು ಕರೆಯಬೇಕಾಗಿಲ್ಲ. ನನ್ನ ಕರ್ತವ್ಯ ನಾನು ಮಾಡುತ್ತೇನೆ ಎಂದರು.
ಇದನ್ನೂ ಓದಿ:ಅಸಾಮಾನ್ಯ ಆಟವಾಡಿದ ಫ್ರಾನ್ಸ್ ಫೈನಲ್ ಗೆ; ಇನ್ನು ಮೆಸ್ಸಿ ವರ್ಸಸ್ ಎಂಬಪ್ಪೆ ಕಾಳಗ
ಈ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಆಹ್ವಾನ ಬಂದಿಲ್ಲ. ನಾನು ಹೋಗುವ ಸ್ಥಿತಿಯಲ್ಲಿ ಇರಲಿಲ್ಲ ಅದಕ್ಕೆ ಹೋಗಿರಲಿಲ್ಲ. ನಡ್ಡಾ ಬರುತ್ತಿದ್ದಾರೆಂದು ಹೋಗುತ್ತಿದ್ದೇನೆ ಎಂದರು.
ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂಬ ಮಾತಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಆರೋಪದಲ್ಲಿ ಸತ್ಯಾಂಶ ಇಲ್ಲ.ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.