ಮದ್ಯ ಸೇವಿಸಿದ್ರೆ ನೀವೂ ಸಾಯ್ತೀರಾ… : ಬಿಹಾರ ಜನತೆಗೆ ಎಚ್ಚರಿಕೆ ನೀಡಿದ ಸಿಎಂ ನಿತೀಶ್ ಕುಮಾರ್
Team Udayavani, Dec 15, 2022, 4:12 PM IST
ಬಿಹಾರ : ನೀವು ಮದ್ಯ ಸೇವಿಸಿದ್ರೆ ಸಾಯ್ತೀರಿ… ಎಚ್ಚರ ವಹಿಸಿದರೆ ಒಳ್ಳೆಯದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜನತೆಗೆ ಎಚ್ಚರಿಕೆ ನೀಡಿದ್ದಾರೆ.
ಬಿಹಾರದಲ್ಲಿ ಅಕ್ರಮ ಮದ್ಯ ಸೇವಿಸಿ ಇದುವರೆಗೆ 38 ಮಂದಿ ಸಾವನ್ನಪ್ಪಿದ್ದು, ಇದರ ವಿರುದ್ಧ ಬಿಜೆಪಿ ಸಾಕಷ್ಟು ಬಾರಿ ಪ್ರತಿಭಟನೆಯನ್ನೂ ಮಾಡಿದೆ, ಅಲ್ಲದೆ ಬುಧವಾರ ನಡೆದ ಘಟನೆ ಸದನದಲ್ಲೂ ಭಾರಿ ಸದ್ದು ಮಾಡಿದ್ದು ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಮದ್ಯ ಸೇವಿಸಿದರೆ ನೀವು ಸಾಯುತ್ತೀರಾ, ನಿಮ್ಮ ಜೀವದ ಮೇಲೆ ನಿಮಗೆ ಎಚ್ಚರವಿರಲಿ ಎಂದು ಜನರಿಗೆ ಹೇಳಿದ್ದಾರೆ.
ಬಿಹಾರದಲ್ಲಿ ಈಗಾಗಲೇ ಮದ್ಯ ಮಾರಾಟಕ್ಕೆ ನಿಷೇಧ ಇದ್ದರೂ ದುಷ್ಕರ್ಮಿಗಳು ಕೆಲವೊಂದು ಕಡೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ, ಈ ರೀತಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಿ ಎಂದು ಜನರಲ್ಲಿ ಮನವಿ ಮಾಡಿದರು.
ಬುಧವಾರ ಬಿಹಾರದ ಸರನ್ ಜಿಲ್ಲೆಯ ಛಾಪ್ರಾ ಪ್ರದೇಶದಲ್ಲಿ ಅಕ್ರಮ ಮದ್ಯ ಸೇವಿಸಿ 17 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಕುರಿತು ವಿಧಾನ ಸಭೆಯಲ್ಲಿ ಬಿಜೆಪಿ ಶಾಸಕರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ್ದು ಈ ವೇಳೆ ತಾಳ್ಮೆ ಕಳೆದುಕೊಂಡ ಮುಖ್ಯಮಂತ್ರಿ ಬಿಜೆಪಿ ಶಾಸಕರನ್ನು ನೀವು ಕುಡಿದಿದ್ದೀರಿ ಎಂದು ಕಲಾಪದಲ್ಲೇ ಹೇಳಿದ ಮಾತು ಬಾರಿ ಕೋಲಾಹಲಕ್ಕೆ ಕಾರಣವಾಗಿತ್ತು ಅಲ್ಲದೆ ಸಿಎಂ ಹೇಳಿಕೆ ವಿರುದ್ಧ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ: ಮೆಹ್ರೌಲಿ ಅರಣ್ಯದಲ್ಲಿ ಸಿಕ್ಕ ಮೂಳೆಗಳು ಶ್ರದ್ಧಾಳದ್ದೆ… ಡಿಎನ್ಎ ಪರೀಕ್ಷೆಯಲ್ಲಿ ಸಾಬೀತು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.