ವೈದ್ಯರಾಗುವುದು ಹಣ ಗಳಿಸಲು ಮಾತ್ರವಲ್ಲ: ಡಾ|ಡಿ.ವೀರೇಂದ್ರ ಹೆಗ್ಗಡೆ

ಧಾರವಾಡ ಎಸ್ ಡಿಎಂ ವಿವಿ ಘಟಿಕೋತ್ಸವ : ಪದವಿ ಪ್ರದಾನ

Team Udayavani, Dec 15, 2022, 9:55 PM IST

1-asdsadsad

ಧಾರವಾಡ : ಇಲ್ಲಿಯ ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಘಟಿಕೋತ್ಸವವು ಎಸ್‌ಡಿಎಂ ಆಸ್ಪತ್ರೆ ಆವರಣದ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಗುರುವಾರ ಸಂಜೆ ಜರುಗಿತು.

ಈ ಘಟಿಕೋತ್ಸವದಲ್ಲಿ ಎಸ್‌ಡಿಎಂ ವಿಶ್ವವಿದ್ಯಾಲಯದ ಕುಲಪತಿ, ರಾಜ್ಯಸಭಾ ಸದಸ್ಯರಾದ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು, ಎಸ್‌ಡಿಎಂ ಮೆಡಿಕಲ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ 160, ಎಸ್‌ಡಿಎಂ ದಂತ ಮಹಾವಿದ್ಯಾಲಯದ 109, ಎಸ್‌ಡಿಎಂ ಪಿಸಿಯೋಥೆರೆಪಿ ವಿಭಾಗದ 47 ಹಾಗೂ ನರ್ಸಿಂಗ್ ವಿಭಾಗದ 95 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 411 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ಡಾ|ಹೆಗ್ಗಡೆ ಅವರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಪದವೀಧರರು ವಿಶ್ವವಿದ್ಯಾಲಯದ ರಾಯಭಾರಿಗಳಾಗಿದ್ದು, ವೃತ್ತಿ ಜೀವನದಲ್ಲಿ ಸಾಧನೆ ಮಾಡುವ ಮೂಲಕ ವಿಶ್ವವಿದ್ಯಾಲಯದ ಕೀರ್ತಿ ಹೆಚ್ಚಿಸಬೇಕು. ಈ ಪದವಿ ಪಡೆಯುವ ಮೂಲಕ ಪಾಲಕರ ಕನಸು ನನಸಾಗಿಸಿದ್ದೀರಿ. ಮುಂದೆ ವೃತ್ತಿ ಜೀವನದಲ್ಲಿ ತಜ್ಞತೆ ಗಳಿಸಿಕೊಂಡು ರೋಗಿಗಳಿಗೆ ಉತ್ತಮ ಸೇವೆ ನೀಡಬೇಕು ಎಂದರು.

ಇಂದಿನ ದಿನಮಾನದಲ್ಲಿ ಬಹಳಷ್ಟು ಶಾಲಾ ವಿದ್ಯಾರ್ಥಿಗಳು ವೈದ್ಯರಾಗಬಯಸುತ್ತಾರೆ. ಇದಕ್ಕೆ ಮುಖ್ಯ ಕಾರಣ ಈ ವೃತ್ತಿ ಕುರಿತು ಸಮಾಜದಲ್ಲಿರುವ ಗೌರವ. ವೈದ್ಯರಾಗುವುದು ಹಣ ಗಳಿಸಲು ಮಾತ್ರವಲ್ಲ, ತಮ್ಮಲ್ಲಿ ನಂಬಿಕೆ ಇಟ್ಟು ಬರುವ ರೋಗಿಗಳನ್ನು ಗುಣಪಡಿಸುವುದೇ ಪರಮೋಚ್ಛ ಗುರಿಯಾಗಿರಬೇಕು ಎಂದರು.

ನಮ್ಮನ್ನು ನಾವು ಅರ್ಥ ಮಾಡಿಕೊಳ್ಳಬೇಕು. ನಮ್ಮ ಸಾಮರ್ಥ್ಯ ಹಾಗೂ ದೌರ್ಬಲ್ಯಗಳನ್ನು ಅರಿತುಕೊಂಡು ಸಾಧನಾ ಪಥದಲ್ಲಿ ಸಾಗಬೇಕು.ವೈಯಕ್ತಿಕ ಸಾಧನೆಗೆ ಸಮಯ ಮೀಸಲಾಗಿಡಬೇಕು. ಹಣ ಗಳಿಕೆಯೊಂದೇ ವೈದ್ಯಕೀಯ ಜೀವನದ ಉದ್ದೇಶವಾಗದೇ ಆರೋಗ್ಯ ಸಮಸ್ಯೆಯಿಂದ ಬಳಲುವವರಿಗೆ ಉತ್ತಮ ಸೇವೆ ನೀಡುವುದಕ್ಕೆ ಆದ್ಯತೆ ನೀಡಬೇಕು. ವೈದ್ಯಕೀಯ ಕ್ಷೇತ್ರದ ಕೌಶಲ್ಯ, ತಂತ್ರಜ್ಞಾನ ಕಲಿತು ಉತ್ತಮ ಸೇವೆ ನೀಡಬೇಕು ಎಂದು ಸಲಹೆ ನೀಡಿದರು.

ಇನ್ನು ಘಟಿಕೋತ್ಸವ ಭಾಷಣ ಮಾಡಿದ ಮಂಗಳೂರಿನ ಎನಪೋಯಾ ಡೀಮ್ಡ ವಿಶ್ವವಿದ್ಯಾಲಯದ ಕುಲಪತಿ ಡಾ|ಎಂ.ವಿಜಯಕುಮಾರ್ ಮಾತನಾಡಿ, ದೇಶದಲ್ಲಿ ಪ್ರತಿವರ್ಷ 1.30 ಲಕ್ಷ ನರ್ಸಿಂಗ್, 90 ಸಾವಿರ ಎಂಬಿಬಿಎಸ್, 30 ಸಾವಿರ ಬಿಡಿಎಸ್ ಪದವೀಧರು ಹೊರ ಬರುತ್ತಾರೆ. ಹೀಗಾಗಿ ಪದವಿ ಪಡೆದವರಿಗೆ ಕೆಲಸವೂ ಇಲ್ಲಿ ಖಾತ್ರಿಯಿಲ್ಲ. ಆದರೆ ಬದುಕಿನ ಯಶಸ್ಸಿನ ಹಾದಿಯಲ್ಲಿ ಇದೊಂದು ಮಹತ್ವದ ಮೈಲಿಗಲ್ಲು ಎಂಬುದಾಗಿ ಪಾಲ್ಗೊಂಡು, ಹೊಸ ಮಜಲಿಗೆ ಪದವೀಧರರು ತಮ್ಮನ್ನು ಸಜ್ಜುಗೊಳಿಸಿಕೊಳ್ಳಬೇಕು ಎಂದರು.

ಹೊಸತನ್ನು ಕಲಿಯುವುದು ಇಂದಿನ ಜಗತ್ತಿನಲ್ಲಿ ಅಗತ್ಯವಾಗಿದೆ. ಪ್ರತಿಯೊಬ್ಬರೂ ಜೀವನದಲ್ಲಿ ಯಶಸ್ಸು ಗಳಿಸಲು ಬಯಸುತ್ತಾರೆ. ಆದರೆ ಆ ಗುರಿ ತಲುಪಲು ಎಂತಹ ಸೂಕ್ತ ಯೋಜನೆ ಸಿದ್ಧಪಡಿಸಿದ್ದಾರೆ ಎನ್ನುವುದು ಮುಖ್ಯವಾಗಿರುತ್ತದೆ ಎಂದ ಅವರು, ಪಡೆದ ಪದವಿಯೊಂದೇ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ ಎಂದರು.

ವೃತ್ತಿ ಬದುಕಿನ ಪ್ರತಿ ಹಂತದಲ್ಲೂ ಎದುರಾಗುವ ಸವಾಲು, ಪಡೆದ ಕೌಶಲ್ಯದ ಮೂಲಕ ಯಶಸ್ಸಿನ ದಾರಿಯಲ್ಲಿ ಸಾಗಲು ಸಾಧ್ಯ. ಬೇಕೋ ಅಥವಾ ಬೇಡವೋ ಒಬ್ಬರು ಮಾಡಿದ್ದನ್ನೇ ಹಲವರು ಅನುಸರಿಸಲು ಬಯಸುತ್ತಾರೆ. ಪಾಲಕರೂ ಅದನ್ನೇ ಉತ್ತೇಜಿಸುತ್ತಾರೆ. ಆದರೆ ಸಮಾಜಕ್ಕೆ ಏನು ಬೇಕು ಅಥವಾ ಯಾವುದು ಸರಿ ಎನ್ನುವುದು ಅರಿತು ಮಾಡುವುದೇ ಶ್ರೇಷ್ಠ. ಪದವಿ ಪಡೆಯುವದಷ್ಟೇ ಕೊನೆಯಲ್ಲ ಎಂದರು.

ಎಸ್‌ಡಿಎಂ ವಿಶ್ವವಿದ್ಯಾಲಯದ ಉಪಕುಲಪತಿ ಡಾ|ನಿರಂಜನಕುಮಾರ ಮಾತನಾಡಿ, ವೃತ್ತಿಯಲ್ಲಿ ಸಾಧನೆ ಮಾಡುವ ವ್ಯಾಕುಲತೆ ಹೊಂದಿರಬೇಕು. ಇದು ಹೊಸ ಸಂಗತಿಗಳ ಕಲುಕೆಗೆ ಪ್ರೇರೇಪಿಸುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರು ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ಬಿಡುಗಡೆಗೊಳಿಸಿದರು. ಎಂಬಿಬಿಎಸ್ ಪದವೀಧರೆ ಪ್ರಿಯಾಂಕಾ ತಮ್ಮ ಅನುಭವ ಹಂಚಿಕೊಂಡರು. ಕುಲಸಚಿವ ಡಾ|ಚಿದೇಂದ್ರ ಶೆಟ್ಟರ, ಡಾ|ಶ್ರೀನಿವಾಸ ಪೈ, ಡಾ|ಸತ್ಯಬೋಧ ಗುತ್ತಲ, ಡಾ|ರಘುನಾಥ ಶಾನಭಾಗ, ಡಾ|ಎಸ್.ಕೆ. ಜೋಶಿ ಇದ್ದರು.

ವೃತ್ತಿ ಕೌಶಲ್ಯದೊಂದಿಗೆ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ. ಕಲಿಕೆ ನಿರಂತರ ಪ್ರಕ್ರಿಯೆ. ಪದವಿ ಪಡೆದರೆ ಕಲಿಕೆ ಮುಗಿಯುವುದಿಲ್ಲ. ವೈದ್ಯಕೀಯ ಕ್ಷೇತ್ರದಲ್ಲಿನ ಹೊಸ ಸಂಶೋಧನೆ, ನೂತನ ತಂತ್ರಜ್ಞಾನ ಅಳವಡಿಸಿಕೊಂಡು ವೃತ್ತಿ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು.
-ಡಾ|ಎಂ.ವಿಜಯಕುಮಾರ, ಕುಲಪತಿ ಎನಪೋಯಾ ಡೀಮ್ಡ ವಿಶ್ವವಿದ್ಯಾಲಯ, ಮಂಗಳೂರು.

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.