‘ಧರಣಿ ಮಂಡಲ’ ಮೆಚ್ಚಿದ ಪ್ರೇಕ್ಷಕ
Team Udayavani, Dec 16, 2022, 3:09 PM IST
ಇದೇ ಡಿಸೆಂಬರ್ 2ರಂದು ತೆರೆಗೆ ಬಂದಿರುವ “ಧರಣಿ ಮಂಡಳ ಮಧ್ಯದೊಳಗೆ…’ ಸಿನಿಮಾ ಯಶಸ್ವಿಯಾಗಿ ಎರಡು ವಾರಗಳ ಪ್ರದರ್ಶನವನ್ನು ಪೂರೈಸಿದ್ದು, ಇದೀಗ ಮೂರನೇ ವಾರಕ್ಕೆ ಕಾಲಿಟ್ಟಿದೆ.
ಸುಮಾರು 80ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ “ಧರಣಿ ಮಂಡಳ ಮಧ್ಯದೊಳಗೆ’ ಸಿನಿಮಾ ಬಿಡುಗಡೆಯಾಗಿದ್ದು, ಮೊದಲ ದಿನದಿಂದಲೇ ಬಹುತೇಕ ಎಲ್ಲ ಕೇಂದ್ರಗಳಲ್ಲೂ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಎರಡನೇ ವಾರದ ಬಳಿಕ ಚಿತ್ರಮಂದಿರಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವಲ್ಲಿಯೂ ಚಿತ್ರ ಯಶಸ್ವಿಯಾಗಿದೆ.
ಸಿನಿಮಾ ಬಿಡುಗಡೆಯ ಬಳಿಕ ಸಿಗುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಮಾತನಾಡುವ ಚಿತ್ರತಂಡ, “ಇದೊಂದು ಹೈಪರ್ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಸಿನಿಮಾ. ನಮ್ಮ ನಡುವಿನ ವಿಷಯಗಳನ್ನೇ ಸಿನಿಮಾದಲ್ಲಿ ಹೇಳಿರುವುದರಿಂದ, ಎಲ್ಲ ವರ್ಗದ ಆಡಿಯನ್ಸ್ಗೂ ಸಿನಿಮಾ ಕನೆಕ್ಟ್ ಆಗುತ್ತಿದೆ. ಸಿನಿಮಾ ಬಿಡುಗಡೆಯ ನಂತರ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾದ ಡಿಜಿಟಲ್ ಮತ್ತು ಸ್ಯಾಟಲೈಟ್ ರೈಟ್ಸ್ ಕೂಡ ಒಳ್ಳೆಯ ಮೊತ್ತಕ್ಕೆ ಸೇಲ್ ಆಗಿದೆ. ಒಂದು ಒಳ್ಳೆಯ ಸಿನಿಮಾವನ್ನು ಪ್ರೇಕ್ಷಕರು ಕೈ ಹಿಡಿದು ಗೆಲ್ಲಿಸಿದ್ದಾರೆ’ ಎಂಬ ಖುಷಿ ಹಂಚಿಕೊಂಡಿದೆ.
“ಗುಲ್ಟಾ’ ಖ್ಯಾತಿಯ ನಟ ನವೀನ್ ಶಂಕರ್, ಐಶಾನಿ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಬಾಕ್ಸ್ ಆ μàಸ್ ಸಿನಿ ಕ್ರಿಯೇಷನ್ಸ್’ ಬ್ಯಾನರ್ನಡಿ ಓಂಕಾರ್ ನಿರ್ಮಿಸಿರುವ ಈ ಚಿತ್ರಕ್ಕೆ ವೀರೇಂದ್ರ ಕಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಶ್ರೀಧರ್ ಶಿಕಾರಿಪುರ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pani movie: ಕನ್ನಡದಲ್ಲಿ ಜೋಜು ಜಾರ್ಜ್ ಪಣಿ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.