ಪ್ರಧಾನಿ ಮೋದಿ- ವ್ಲಾದಿಮಿರ್ ಪುಟಿನ್ ಮಾತುಕತೆ
ಇಂಧನ, ವ್ಯಾಪಾರ, ರಕ್ಷಣಾ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಚರ್ಚೆ
Team Udayavani, Dec 16, 2022, 7:51 PM IST
ನವದೆಹಲಿ: ಇಂಧನ, ವ್ಯಾಪಾರ ಮತ್ತು ರಕ್ಷಣಾ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ದೂರವಾಣಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶುಕ್ರವಾರ ಮಾತುಕತೆ ನಡೆಸಿದ್ದಾರೆ.
ಉಕ್ರೇನ್-ರಷ್ಯಾ ಯುದ್ಧದ ಕುರಿತೂ ಚರ್ಚಿಸಲಾಗಿದ್ದು, ಸಮಸ್ಯೆ ಪರಿಹಾರಕ್ಕೆ ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಉತ್ತಮ ಮಾರ್ಗ ಎಂದು ಮೋದಿ ಪುನರುಚ್ಚರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಸಮರ್‌ಖಂಡ್‌ದಲ್ಲಿ ನಡೆದ ಸಹಕಾರ ಒಕ್ಕೂಟ(ಎಸ್‌ಸಿಒ)ದ ಶೃಂಗಸಭೆಯಲ್ಲಿನ ಮಾತುಕತೆಯ ಮುಂದುವರಿದ ಭಾಗವಾಗಿ ಉಭಯ ನಾಯಕರು ದ್ವಿಪಕ್ಷೀಯ ಸಹಕಾರದ ಹಲವು ಆಯಾಮಗಳನ್ನು ಪರಾಮರ್ಶಿಸಿದ್ದಾರೆ. ಭಾರತದ ಅಧ್ಯಕ್ಷತೆಯಲ್ಲಿ ನಡೆಯುವ ಜಿ-20 ಶೃಂಗದಲ್ಲಿ ಒಟ್ಟಾಗಿ ಕೆಲಸ ಮಾಡಲು ಉಭಯ ದೇಶಗಳು ಸಮ್ಮತಿ ಸೂಚಿಸಿವೆ,’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತ-ರಷ್ಯಾ ವಾರ್ಷಿಕ ಶೃಂಗ ಹಿನ್ನೆಲೆಯಲ್ಲಿ ರಷ್ಯಾಗೆ ಪ್ರಧಾನಿ ಮೋದಿ ಅವರು ತೆರಳುತ್ತಿಲ್ಲ ಎಂಬ ಸುದ್ದಿ ಹೊರಬಿದ್ದ ಕೆಲವು ದಿನಗಳಲ್ಲೇ ಉಭಯ ನಾಯಕರ ನಡುವೆ ದೂರವಾಣಿ ಮೂಲಕ ಮಾತುಕತೆ ನಡೆದಿದೆ. ಕಳೆದ ವರ್ಷ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.