ಆದ್ಯತೆ ಮೇಲೆ ಅನುದಾನ ಬಳಸಿ: ಸಚಿವ ಕೋಟ
ಸಾಮಾಜಿಕ ಸಾಮರಸ್ಯ ಮೂಡಿಸಲು ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ
Team Udayavani, Dec 17, 2022, 7:30 AM IST
ಬೆಂಗಳೂರು: ಎಸ್‌ಸಿ/ಎಸ್‌ಪಿ-ಟಿಎಸ್‌ಪಿ ಯೋಜನೆಯಡಿ 2022-23ನೇ ಸಾಲಿನಲ್ಲಿ ಒಟ್ಟು 29,165.81 ಕೋಟಿ ರೂ.ಅನುದಾನ ಒದಗಿಸಲಾಗಿದೆ. ಇದುವರೆಗೆ 19,009.71 ಕೋಟಿ ರೂ. ಬಿಡುಗಡೆ ಯಾಗಿದ್ದು, 14,166.72 ಕೋಟಿ ರೂ. ವ್ಯಯಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪ್ರಸಕ್ತ ಸಾಲಿನಲ್ಲಿ ಎಸ್‌ಸಿಎಸ್‌ಪಿ ಯೋಜನೆ ಯಡಿ 20,843.03 ಕೋಟಿ ಹಾಗೂ ಟಿಎಸ್‌ಪಿ ಯೋಜನೆಯಡಿ 8,322.78 ಕೋಟಿ ರೂ. ಸೇರಿ ಒಟ್ಟು 29,165.81 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದರಲ್ಲಿ ಎಸ್‌ಸಿಎಸ್‌ಪಿ ಅಡಿ 13,483.79 ಕೋಟಿ ರೂ. ಬಿಡುಗಡೆಯಾಗಿದ್ದು, 10,783.47 ಕೋಟಿ ರೂ. ವೆಚ್ಚ ವಾಗಿದೆ. ಇದು ಹಂಚಿಕೆಯ ಶೇ.52ರಷ್ಟು ಮತ್ತು ಬಿಡುಗಡೆಯ ಶೇ.80ರಷ್ಟು ಆಗಿದೆ ಎಂದರು.
ಅದೇ ರೀತಿ ಟಿಎಸ್‌ಪಿ ಅಡಿ ಯಲ್ಲಿ 5,165.92 ಕೋಟಿ ರೂ. ಬಿಡು ಗಡೆಯಾಗಿದ್ದು, 3,383.25 ಕೋಟಿ ವೆಚ್ಚವಾಗಿದೆ. ಇದು ಹಂಚಿಕೆಯ ಶೇ.41 ಹಾಗೂ ಬಿಡು ಗಡೆಯ ಶೇ.65ರಷ್ಟು ಆಗಿದೆ. ಎಸ್‌ಸಿ/ಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯ ಅನುದಾನವನ್ನು ಆದ್ಯತೆ ಮೇಲೆ ಬಳಕೆ ಮಾಡುವಂತೆ ವಿವಿಧ ಇಲಾ ಖೆಗಳ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ತಿಳಿಸಿದರು.
ಎಸ್ಸಿ, ಎಸ್ಟಿ, ಹಿಂದುಳಿದ ಮತ್ತು ಅಲ್ಪಸಂಖ್ಯಾಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ ಮೂಡಿಸಲು ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ ಎಂಬ ಹೊಸ ಯೋಜನೆಯಡಿ ಬೆಳಗಾವಿ, ಹುಬ್ಬಳ್ಳಿ – ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ ಒಂದು ಸಾವಿರ ಸಾಮರ್ಥ್ಯದ ಬಹುಮ ಹಡಿಯ ವಿದ್ಯಾರ್ಥಿ ನಿಲಯ ಸಮುಚ್ಚಯಗಳನ್ನು 250 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಾಡಿಗೆ ಕಟ್ಟಡಗಳಲ್ಲಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಇ-ಕಾಮರ್ಸ್ ಅಡಿ ಉದ್ಯೋಗ
ಎಸ್ಸಿ, ಎಸ್ಟಿ ನಿರುದ್ಯೋಗಿಗಳು ಇ-ಕಾಮರ್ಸ್ ಅಡಿ ಆಹಾರ ಮತ್ತು ಇತರ ವಸ್ತುಗಳನ್ನು ಗ್ರಾಹಕರಿಗೆ ತಲುಪಿ ಸಲು ವಾಹನ ಸೌಲಭ್ಯಕ್ಕಾಗಿ ವಿದ್ಯುತ್, ಇತರ ದ್ವಿಚಕ್ರ ವಾಹನಗಳಿಗೆ ಗರಿಷ್ಠ 50 ಸಾ. ರೂ.ಸಹಾಯಧನ ಮತ್ತು 20 ಸಾ.ರೂ. ಸಾಲ ನೀಡ ಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ರಂತೆ ಒಟ್ಟು 22,400 ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಬಾಕಿ ಪಾವತಿಗೆ ಕ್ರಮ
ರಾಜ್ಯ ಅಕ್ಕಿ ಗಿರಣಿ ಮಾಲಕರಿಗೆ ಸರಕಾರದಿಂದ ಬಾಕಿ ಇರುವ 7 ಕೋಟಿ ರೂ. ಪಾವತಿ ವಿಷಯ ಕುರಿತು ಮೂರ್‍ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ವಿಕಾಸಸೌಧದಲ್ಲಿ ಶುಕ್ರವಾರ ಅಕ್ಕಿ ಗಿರಣಿ ಮಾಲಿಕರ ಸಂಘದ ವಿವಿಧ ಜಿಲ್ಲೆಗಳ ಅಧ್ಯಕ್ಷರ ಜತೆ ಪಡಿತರದಾರರಿಗೆ ಕುಚಲಕ್ಕಿ ವಿತರಣೆ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ನಡೆದ ಸಭೆಯಲ್ಲಿ ಅವರು ಈ ಭರವಸೆ ನೀಡಿದರು.
33 ಸಾವಿರ ಅರ್ಜಿಗಳು
2022-23ನೆ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗಾಗಿ 17 ಸಾವಿರ ಅರ್ಜಿಗಳು, ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ 15-16 ಸಾವಿರ ಅರ್ಜಿಗಳು ಬಂದಿವೆ. ಅವುಗಳನ್ನು ಶಾಸಕರ ಅಧ್ಯಕ್ಷತೆಯ ಸಮಿತಿಗಳಿಗೆ ಕಳು ಹಿಸಿಕೊಡಲಾಗಿದ್ದು, ಅವರು ಆಯ್ಕೆ ಮಾಡಿ ಕಳುಹಿಸಿದ ಬಳಿಕ ಕೊಳವೆ ಬಾವಿ ಕೊರೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
23 ಲಕ್ಷ ಕುಟುಂಬಗಳಿಗೆ ಉಚಿತ ವಿದ್ಯುತ್
2022-23ನೆ ಸಾಲಿನಿಂದ ಎಸ್ಸಿ, ಎಸ್ಟಿ ಬಿಪಿಎಲ್ ಕುಟುಂಬಗಳಿಗೆ 75 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ. ಇದರಿಂದ ರಾಜ್ಯದ 23 ಲಕ್ಷ ಕುಟುಂಬಗಳಿಗೆ 75 ಯುನಿಟ್ ಉಚಿತ ವಿದ್ಯುತ್ ಸಿಗಲಿದೆ. ಎಸ್ಸಿ-ಎಸ್ಟಿ ಒಟ್ಟು ಜನಸಂಖ್ಯೆಯ ಶೇ.82ರಷ್ಟು ಮಂದಿಗೆ 75 ಯುನಿಟ್ ವಿದ್ಯುತ್ ಸೌಲಭ್ಯ ದೊರಕಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ಡಾ| ಬಿ.ಆರ್. ಅಂಬೇಡ್ಕರ್ ಅವರು ಕರ್ನಾಟಕದಲ್ಲಿ ಭೇಟಿ ನೀಡಿರುವ 10 ಪ್ರಮುಖ ಸ್ಥಳಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿಪಡಿಸಲು ಪ್ರಸಕ್ತ ಸಾಲಿನಲ್ಲಿ 20 ಕೋಟಿ ರೂ. ಅನುದಾನ ಒದಗಿಸಲಾಗುತ್ತಿದೆ.
- ಕೋಟ ಶ್ರೀನಿವಾಸ ಪೂಜಾರಿ, ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.