ಬಿಲಾವ್ ಭುಟ್ಟೋ ಹೇಳಿಕೆಯಿಂದ ಪಾಕ್ ಕೀಳು ಮನಸ್ಥಿತಿ ಬಯಲಾಗಿದೆ: ಯಡಿಯೂರಪ್ಪ
Team Udayavani, Dec 17, 2022, 11:03 AM IST
ಬೆಂಗಳೂರು: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾಡಿರುವ ಟೀಕೆಯನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಖಂಡಿಸಿದ್ದಾರೆ.
ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಮಾಡಿರುವ ಟೀಕೆಯು ಅವರ ಕೀಳು ಮನೋಸ್ಥಿತಿಯನ್ನು ಬಯಲು ಮಾಡಿದೆ. ಪಾಕಿಸ್ಥಾನದ ವಿದೇಶಾಂಗ ಸಚಿವರಾಗಿ ಅವರ ಹೇಳಿಕೆಯು ಪಾಕಿಸ್ಥಾನ ಸರ್ಕಾರದ ನೀಚ ಮನೋಸ್ಥಿತಿಯನ್ನು ಪ್ರತಿಬಿಂಬಿಸಿದೆ. ಇಡೀ ವಿಶ್ವದಲ್ಲಿಯೇ ಶಾಂತಿ ನೆಲೆಸುವಂತಾಗಲು ಭಾರತದ ಪ್ರಧಾನ ಮಂತ್ರಿಯವರು ನೇತೃತ್ವ ವಹಿಸಬೇಕೆಂದು ವಿಶ್ವದ ಎಲ್ಲಾ ಪ್ರಮುಖ ದೇಶಗಳು ಕೋರುತ್ತಿರುವ ಇಂತಹ ಸಂದರ್ಭದಲ್ಲಿ ಪಾಕಿಸ್ಥಾನದ ವಿದೇಶಾಂಗ ಸಚಿವರಿಂದ ಇಂತಹ ಹೇಳಿಕೆ ನಾಯಿಬಾಲ ಡೊಂಕು ಎಂಬಂತಹ ಪ್ರವೃತ್ತಿಯನ್ನು ಸಾಬೀತು ಪಡಿಸುತ್ತಿದೆ ಎಂದು ಹೇಳಿದ್ದಾರೆ.
ವಿಶ್ವದ ಅತ್ಯುಗ್ರ ಒಸಾಮ ಬಿನ್ ಲಾಡೆನ್ ಎಲ್ಲಿ ಅಡಗಿ ಕುಳಿತಿದ್ದ, ಮತ್ತು ಅವನನ್ನು ಪೋಷಿಸುತ್ತಿದ್ದವರು ಯಾರು ಹಾಗೂ ವಿಶ್ವದ ಬಹುತೇಕ ಉಗ್ರ ಸಂಘಟನೆಗಳಿಗೆ ತವರು ನೆಲೆ ಪಾಕಿಸ್ಥಾನ ಎಂದು ಇಡೀ ಜಗತ್ತಿಗೆ ತಿಳಿದಿರುವಾಗನರೆಂದ್ರ ಮೋದಿಯಂತಹ ವಿಶ್ವ ನಾಯಕರ ಬಗ್ಗೆ ಟೀಕೆ ಮಾಡಿದರೆ ಜಗತ್ತಿನ ಕಣ್ಣಿನಲ್ಲಿ ತಾನು ದೊಡ್ಡ ವ್ಯಕ್ತಿಯಾಗುತ್ತೇನೆಂದು ಭಾವಿಸಿರುವಂತೆ ಕಾಣುತ್ತಿದೆ. 2018ರಲ್ಲಿ ಫೆಬ್ರವರಿ 18ರಂದು ಅಮೆರಿಕದ ವಾಷಿಂಗ್ಟನ್ ನಲ್ಲಿ ‘ಪಾಕಿಸ್ಥಾನದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತಿದೆ’ ಎಂದು ಹಾಗೂ 2019ರ ಮಾರ್ಚ್ 7ರಲ್ಲಿ ‘ಪಾಕಿಸ್ಥಾನದ ಮೂರು ಸಚಿವರು ಉಗ್ರ ಸಂಘಟನೆಗಳ ಜೊತೆಗೆ ಸಂಬಂದ ಹೊಂದಿದ್ದಾರೆ’ ಎಂದು ಹೇಳಿಕೆ ನೀಡಿರುವುದನ್ನು ಮರೆತಂತೆ ಕಾಣುತ್ತಿದೆ ಎಂದು ಟೀಕಿಸಿದ್ದಾರೆ.
ಮೋದಿಯವರ ಕುರಿತಾದ ಕೀಳು ಮಟ್ಟದ ಇಬ್ಬಗೆತನದ ಅವರ ಹೇಳಿಕೆ ಭಾರತ ದೇಶಕ್ಕೆ ಮಾಡಿದ ಅವಮಾನ, ದೇಶಪ್ರೇಮಿ ಭಾರತೀಯರು ಇದನ್ನು ಖಂಡಿಸಿ ಇದರ ವಿರುದ್ದ ಹೋರಾಟ ಮಾಡಬೇಕಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!
Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್ ಗಂಭೀರ್ ಭಾರತಕ್ಕೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.