ಪ್ರತಿವಾರ ರಾಜಕೀಯ ಮುಖಂಡರ ಸಭೆ
Team Udayavani, Dec 17, 2022, 10:44 AM IST
ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಮಾಹಿತಿ ಯನ್ನು ರಾಜಕೀಯ ಪಕ್ಷಗಳಿಗೆ ನೀಡುವ ಉದ್ದೇಶದಿಂದ ಪ್ರತಿ ವಿಧಾನಸಭಾ ಕ್ಷೇತ್ರವಾರು ವಾರಕ್ಕೊಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿ ವಾರಕ್ಕೊಮ್ಮೆ ಮತದಾರ ಪಟ್ಟಿ ಪರಿಷ್ಕರಣೆ ಮಾಹಿತಿಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮತ್ತು ಬೆಂಗಳೂರು ನಗರ ಜಿಲ್ಲೆ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗ ಆದೇಶದ ಮೇರೆಗೆ ಕೆಲ ಬಿಎಲ್‌ಒಗಳನ್ನು ಬೇರೆ ಕಡೆ ವರ್ಗಾಯಿಸಲಾಗಿದೆ. ಜತೆಗೆ ಅಗತ್ಯಕ್ಕೆ ಅನುಗುಣ ವಾಗಿ ಹೊಸ ಬಿಎಲ್‌ಒಗಳನ್ನು ನೇಮಿಸಲಾಗಿದೆ. ಬಿಎಲ್‌ಒಗಳ ಹೆಸರು, ದೂರವಾಣಿ ಸಂಖ್ಯೆ ಸೇರಿ ಸಂಪೂರ್ಣ ಮಾಹಿತಿಯನ್ನು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ, ರಾಜಕೀಯ ಪಕ್ಷದ ಸದಸ್ಯರಿಗೆ ಬಿಎಲ್‌ಒಗಳ ಮಾಹಿತಿ ಸಮರ್ಪಕವಾಗಿ ದೊರೆಯಲಿದೆ ಎಂದು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿವಾಜಿ ನಗರ, ಚಿಕ್ಕಪೇಟೆ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿನ ಉಳಿದ 25 ಕ್ಷೇತ್ರಗಳ ಪರಿಷ್ಕರಣೆ ಪರಿಶೀಲನೆಗೆ 12 ಕೆಎಎಸ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಮತದಾರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಾಕಷ್ಟು ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣೆ ಆಯೋಗ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರ ಪಟ್ಟಿಯನ್ನು ವಿಶೇಷ ಪರಿಶೀಲನೆಗೆ ಸೂಚಿಸಿತ್ತು. ಅದಕ್ಕಾಗಿ ಮೂವರು ಐಎಎಸ್ ಅಧಿಕಾರಿಗಳನ್ನು ವಿಶೇಷಾಧಿ ಕಾರಿಗಳನ್ನಾಗಿ ನೇಮಿಸಿದೆ. ಅದೇ ಮಾದರಿಯಲ್ಲಿ ಬೆಂಗಳೂರು ನಗರ ಹಿಲ್ಲೆ ವ್ಯಾಪ್ತಿಯ ಉಳಿದ 25 ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿ ಷ್ಕರಣೆಗೆ 12 ಕೆಎಎಸ್ ಅಧಿಕಾರಿಯನ್ನು ನೇಮಿಸಲಾಗಿದೆ. 2022ರ ಜನವರಿಯಿಂದ ಈವರೆಗಿನ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕಿರುವ ಪ್ರಕ್ರಿಯೆಯನ್ನು ಪರಿಶೀಲಿಸಲಾ ಗುತ್ತದೆ ಎಂದು ತಿಳಿಸಿದರು.
ಡಿ.24ಕ್ಕೆ ವರದಿ: ಕೇಂದ್ರ ಚುನಾವಣಾ ಆಯೋಗ ವಿಶೇಷ ಪರಿಶೀಲನೆಗೆ ನೇಮಿಸಿದ ಅಧಿಕಾರಿಗಳು ಡಿ.24ಕ್ಕೆ ಚಿಕ್ಕಪೇಟೆ, ಶಿವಾಜಿನಗರ ಮತ್ತು ಮಹ ದೇವಪುರಕ್ಕೆ ಸಂಬಂಧಿಸಿದಂತೆ ವರದಿ ನೀಡಲಿ ದ್ದಾರೆ. ಉಳಿದ 25 ಕ್ಷೇತ್ರಗಳ ವರದಿಯೂ ಅಷ್ಟ ರೊಳಗೆ ಸಲ್ಲಿಕೆಯಾಗಲಿವೆ. ಅದಾದ ನಂತರ ಮತ ದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಗಿರುವ ಸಮಸ್ಯೆಗಳು ಬಹಿರಂಗವಾಗಲಿದೆ. ಜತೆಗೆ ಮತದಾರರ ಸಂಖ್ಯೆ ನಿಖರವಾಗಿ ತಿಳಿಯಲಿದೆ ಎಂದರು.
ಅರ್ಜಿ ಸಲ್ಲಿಕೆ ಬಗ್ಗೆ ಜಾಗೃತಿ : ಮತದಾರರು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ಮನೆ ಬದಲಾವಣೆ ಮಾಡಿರುತ್ತಾರೆ. ಅಲ್ಲಿ ಮತ್ತೆ ಹೊಸದಾಗಿ ತಮ್ಮ ಹೆಸರುಗಳನ್ನು ಮತದಾರ ಪಟ್ಟಿಗೆ ಸೇರಿಸಿಕೊಳ್ಳುತ್ತಾರೆ. ಇದರಿಂದ ಎರಡೆರಡು ಕಡೆ ಮತದಾರರ ಹೆಸರುಗಳು ಪಟ್ಟಿಯಲ್ಲಿ ಬರಲಿದೆ. ಈ ರೀತಿ ಮಾಡದೇ ನಮೂನೆ-8ರಲ್ಲಿ ಸ್ಥಳ ಬದಲಾವಣೆ ಅರ್ಜಿ ಸಲ್ಲಿಸಬೇಕು. ಇದರಿಂದ ಮತದಾರರ ಪಟ್ಟಿಯಲ್ಲಿನ ಹೆಸರು ವರ್ಗಾವಣೆ ಮಾಡಲು ಸುಲಭವಾಗಲಿದೆ. ಈ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಆಯುಕ್ತರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.