![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 17, 2022, 7:50 PM IST
ಮಂಗಳೂರು: ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಪ್ರಯಾಣಿಕರೊಬ್ಬರಿಂದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಡಿ.16ರಂದು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯನ್ನು ಕೋಝಿಕ್ಕೋಡ್ ನಿವಾಸಿ ಫಿರೋಜ್ ಪದವತ್ (38) ಎಂದು ಗುರುತಿಸಲಾಗಿದೆ.
ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಪ್ರಯಾಣಿಕರೊಬ್ಬರ ಬ್ರಾಸ್ಲೆಟ್ ಮತ್ತು ಚಿನ್ನದ ಸರವನ್ನು ಫಿರೋಜ್ ಕದ್ದಿದ್ದ. ಈ ಸಂಬಂಧ ಮಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳ್ಳತನವಾದ ಆಭರಣಗಳ ಒಟ್ಟು ತೂಕ 48 ಗ್ರಾಂ ಆಗಿದ್ದು, ಮೌಲ್ಯ 2.37 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಕಣ್ಣೂರು-ಮಂಗಳೂರು ಮೆಮು ರೈಲಿನ ಮೂಲಕ ಮಂಗಳೂರು ಸೆಂಟ್ರಲ್ ರೈಲ್ವೆ ಠಾಣೆಗೆ ಆಗಮಿಸಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಕದ್ದ ಎರಡೂ ಚಿನ್ನಾಭರಣಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.