ನವೀನ್ ಮೂಲತಃ ನಮ್ಮವರೇ!
Team Udayavani, Dec 18, 2022, 3:50 PM IST
ನವನಟ ನವೀನ್ ಶಂಕರ್ ಹೊಸ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರದ ಟೈಟಲ್ ಕೂಡಾ ವಿಭಿನ್ನವಾಗಿದ್ದು, “ಮೂಲತಃ ನಮ್ಮವರೇ’ ಎಂದು ಟೈಟಲ್ ಇಡಲಾಗಿದೆ. ಕಿರಣ್ ಗೋವಿಂದರಾಜ್ ನಿರ್ಮಿಸಿ, ಚೇತನ್ ಭಾಸ್ಕರಯ್ಯ ನಿರ್ದೇಶಿಸಿರುವ ಈ ಚಿತ್ರದ ಶೀರ್ಷಿಕೆ ಅನಾವರಣ ಇತ್ತೀಚೆಗೆ ನಡೆಯಿತು.
“ರಂಗಭೂಮಿ ನಂಟಿರುವ ನನಗೆ ಸಿನಿಮಾ ನಿರ್ದೇಶನದಲ್ಲಿ ಆಸಕ್ತಿ.ಹಿಂದೆ ಕೆಲವು ಕಿರುಚಿತ್ರಗಳನಿರ್ದೇಶಿಸಿದ್ದೇನೆ. ಹಿರಿತೆರೆಯಲ್ಲಿಇದು ಮೊದಲ ಚಿತ್ರ. ಕಥೆ ಸಿದ್ಧವಾದ ನಂತರ, ನಾಯಕನ ಹುಡುಕಾಟದಲ್ಲಿದ್ದಾಗ ನವೀನ್ ಸಿಕ್ಕರು.ಆಗಷ್ಟೇ ಅವರ ಗುಲ್ಟಾ ಚಿತ್ರ ಬಿಡುಗಡೆಯಾಗಿತ್ತು. ಮೂಲತ: ನಮ್ಮವರೇ ಇದೊಂದು ಕೌಟುಂಬಿಕ ಚಿತ್ರ. ಅಪ್ಪ-ಮಗನ ಬಾಂಧವ್ಯದ ಸನ್ನಿವೇಶಗಳೇ ಚಿತ್ರದ ಹೈಲೈಟ್. ಬೆಂಗಳೂರು ಹಾಗೂ ಕರಾವಳಿಯಲ್ಲಿ ಚಿತ್ರೀಕರಣ ಮಾಡಿದ್ದೇವೆ. ನವೀನ್ ಶಂಕರ್ ಬಿಟ್ಟರೆ ಬಹುತೇಕರಿಗೆ ಇದು ಮೊದಲ ಸಿನಿಮಾ’ ಎಂದು ಚಿತ್ರದ ಬಗ್ಗೆ ವಿವ ನೀಡಿದರು.
ಚಿತ್ರದ ಬಗ್ಗೆ ಮಾತನಾಡುವ ನವೀನ್, “ಈ ತಂಡದವರು ಎಲ್ಲವನ್ನೂ ಸಿದ್ಧಮಾಡಿಕೊಂಡು, ನಾಯಕನ ಹುಡುಕಾಟದಲ್ಲಿದ್ದರು. ಕೆಲವು ನಾಯಕರನ್ನು ಸಂಪರ್ಕ ಕೂಡ ಮಾಡಿದ್ದರು. ಆ ನಂತರ ಇವರಿಗೆ ನಾನು ಸಿಕ್ಕಿದೆ. ಕಥೆ ತುಂಬಾ ಚೆನ್ನಾಗಿದೆ. ನಾನು ಇಲ್ಲಿಯವರೆಗೂ ಮಾಡಿರದ ಕಥೆ ಎನ್ನಬಹುದು. ಅಪ್ಪ – ಮಗನ ಸೆಂಟಿಮೆಂಟ್ ಸನ್ನಿವೇಶಗಳು ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ. ಶೋಭರಾಜ್ ನನ್ನ ತಂದೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಮುಂಬೈನ ತಾನ್ಯ ಈ ಚಿತ್ರದ ನಾಯಕಿ. ಅವಿನಾಶ್, ಮಾಳವಿಕ ಅವಿನಾಶ್, ತೆಲುಗಿನ ಸತ್ಯಪ್ರಕಾಶ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ನನ್ನ ಈ ಹಿಂದಿನ ಚಿತ್ರಗಳಲ್ಲಿ ಆ್ಯಕ್ಷನ್, ಡ್ಯಾನ್ಸ್‌ಗಳಿಗೆ ಅಷ್ಟು ಅವಕಾಶವಿರಲಿಲ್ಲ. ಈ ಚಿತ್ರದಲ್ಲಿ ಎಲ್ಲವೂ ಇದೆ’ ಎಂದು ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.
ಕೇರಳದ ಚಂತು ಛಾಯಾಗ್ರಹಣ, ಏಕ್ ಕ್ಯಾಬ್ ದಿ ಬ್ಯಾಂಡ್ ಸಂಗೀತ ನಿರ್ದೇಶನ ಹಾಗೂ ಜುವೀನ್ ಸಿಂಗ್ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.