ಮೈಸೂರು: ಸಹಾಯಕ ಸಬ್ ಇನ್ಸ್ಪೆಕ್ಟರ್ ಮಗಳು ಆತ್ಮಹತ್ಯೆಗೆ ಶರಣು… ಕಾರಣ ನಿಗೂಢ
Team Udayavani, Dec 18, 2022, 8:12 PM IST
ಮೈಸೂರು: ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊರಹೋಗಿದ್ದ ಮನೆಯವರು ಸಂಜೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಆಕೆಯನ್ನು ಸಮೀಪದ ಗೋಪಾಲಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದರೂ, ಅಷ್ಟರ ವೇಳೆಗೆ ಪ್ರಾಣ ಹೋಗಿತ್ತು.
ಗಿರಿಜಾಲಕ್ಷ್ಮಿ ನಗರದ ಟೆರೇಷಿಯನ್ ಕಾಲೇಜಿನಲ್ಲಿ ಪ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಗಿರಿಜಾ ಮೃತದೇಹ ಕೆ.ಆರ್.ಆಸ್ಪತ್ರೆಯಲ್ಲಿ ಇದ್ದು, ನಾಳೆ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪ್ರಕರಣ ಕುರಿತು ನಜರ್ ಬಾದ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಸಂಸತ್ ಸ್ಫೋಟಿಸುವ ಬೆದರಿಕೆ ಒಡ್ಡಿದ ಮಾಜಿ ಶಾಸಕನಿಗೆ ಜಾಮೀನು ಮಂಜೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.