ಮೂರು ರಾಜ್ಯಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲನ ಎನ್ಕೌಂಟರ್
Team Udayavani, Dec 18, 2022, 9:41 PM IST
ಬಾಲಾಘಾಟ್ : ತನ್ನ ತಲೆಯ ಮೇಲೆ 12 ಲಕ್ಷ ರೂಪಾಯಿ ಇನಾಮು ಹೊತ್ತಿದ್ದ ಮತ್ತು ಕನಿಷ್ಠ ಮೂರು ರಾಜ್ಯಗಳಲ್ಲಿ ಬೇಕಾಗಿದ್ದ ನಕ್ಸಲ್ ಒಬ್ಬನನ್ನು ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯ ಅರಣ್ಯದಲ್ಲಿ ಪೊಲೀಸರು ಭಾನುವಾರ ಎನ್ಕೌಂಟರ್ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಕ್ಸಲೀಯರು ಇರುವ ಬಗ್ಗೆ ಸುಳಿವಿನ ಮೇರೆಗೆ ಬೆಳಗ್ಗೆ ರೂಪ್ಜರ್ ಪೊಲೀಸ್ ಠಾಣಾ ವ್ಯಾಪ್ತಿಯ ಹರಟೋಲಾ ಅರಣ್ಯದಲ್ಲಿ ಹಾಕ್ ಫೋರ್ಸ್ ಸಿಬಂದಿ ಮತ್ತು ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು ಎಂದು ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಸಂಜಯ್ ತಿಳಿಸಿದ್ದಾರೆ.
ನಕ್ಸಲೀಯರನ್ನು ಶರಣಾಗುವಂತೆ ಕೇಳಲಾಯಿತು ಆದರೆ ಅವರು ಗುಂಡು ಹಾರಿಸಿದ್ದು, ಚಕಮಕಿ ನಡೆದಿದೆ ಎಂದು ಅವರು ಹೇಳಿದರು.
ಎನ್ಕೌಂಟರ್ ಆದ ನಕ್ಸಲೀಯನನ್ನು ಭೋರಮ್ದೇವ್ ದಲಂ ಸದಸ್ಯ ರೂಪೇಶ್ ಅಕಾ ಹೂಂಗಾ ಎಂದು ಗುರುತಿಸಲಾಗಿದೆ. ಆತನ ತಲೆಯ ಮೇಲೆ 12 ಲಕ್ಷ ರೂಪಾಯಿ ಇನಾಮು ಇದ್ದು, ಮಹಾರಾಷ್ಟ್ರ, ಮಧ್ಯ ಪ್ರದೇಶ ಮತ್ತು ಛತ್ತೀಸ್ಗಢದ ಪೊಲೀಸರಿಗೆ ಬೇಕಾಗಿದ್ದ ಎಂದು ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.