ಕೋವಿಡ್ : ಚೀನದಲ್ಲಿ ಪುನಃ ಆನ್‌ಲೈನ್ ತರಗತಿ
Team Udayavani, Dec 19, 2022, 7:25 AM IST
ಶಾಂಘೈ: ಚೀನದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಶಾಂಘೈ ಸೇರಿದಂತೆ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದು, ಪುನಃ ಆನ್‌ಲೈನ್ ತರಗತಿಗಳನ್ನು ಆರಂಭಿಸಲಾಗಿದೆ.
ಕೊರೊನಾ ನಿಯಂತ್ರಣಕ್ಕೆ ಸರಕಾರದ ಎಲ್ಲ ಕ್ರಮಗಳ ಹೊರತಾಗಿಯೂ ಕೊರೊನಾ ಸೋಂಕು ಹರಡುವುದು ಅಧಿಕವಾಗಿದೆ. ನರ್ಸರಿ ಮತ್ತು ಶಿಶುಪಾಲನಾ ಕೇಂದ್ರಗಳನ್ನು ಸೋಮವಾರದಿಂದ ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳ ಸಂಖ್ಯೆ ಅಧಿಕಗೊಳಿಸಲಾಗಿದೆ.
ಶಾಂಘೈ ನಗರ ಒಂದರಲ್ಲೇ ಹೆಚ್ಚುವರಿಯಾಗಿ 2.3 ಲಕ್ಷ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.
ಶವ ಹೂಳಲು 3 ದಿನ ಕಾಯಬೇಕು: ಇನ್ನೊಂದೆಡೆ, ನಾಗರಿ ಕರ ಪ್ರತಿರೋಧದ ಹಿನ್ನೆಲೆಯಲ್ಲಿ ಚೀನದಲ್ಲಿ ಕೊರೊನಾ ನಿರ್ಬಂಧ ತೆರವುಗೊಳಿಸಿದ ನಂತರ ಅಲ್ಲಿನ ಆರೋಗ್ಯ ಸಚಿವಾಲಯ ಕೊರೊನಾ ಸಾವಿನ ಪ್ರಕರಣಗಳ ಸಂಖ್ಯೆಯ ವರದಿಯನ್ನೇ ಬಿಡುಗಡೆಗೊಳಿಸುತ್ತಿಲ್ಲ.
ದಿನೇ ದಿನೆ ಕೊರೊನಾ ಸಾವುಗಳು ಅಧಿಕವಾಗುತ್ತಿದ್ದು, ಸ್ಮಶಾನಗಳಲ್ಲಿ ಶವಗಳನ್ನು ಹೂಳಲು ಮೂರು ದಿನ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.