ಡಿ.ಕೆ. ಶಿವಕುಮಾರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ
ದೇವರು ಎಲ್ಲವನ್ನೂ ನೋಡಿಕೊಳ್ಳುತ್ತಾನೆ.... ಎಂದ ಕೆಪಿಸಿಸಿ ಅಧ್ಯಕ್ಷ
Team Udayavani, Dec 19, 2022, 4:52 PM IST
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸೋಮವಾರ ಸಿಬಿಐ ದಾಳಿ ನಡೆಸಲಾಗಿದ್ದು, ದಾಖಲೆ ಪತ್ರಗಳ ಶೋಧ ನಡೆದಿದೆ.
ಸೋಮವಾರ ಬೆಳಗ್ಗೆಯಿಂದಲೇ ರಾಜರಾಜೇಶ್ವರಿನಗರದಲ್ಲಿರುವ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದ್ದು, ಐಟಿ, ಇಡಿ ದಾಳಿ ಬಳಿಕ ಇದೀಗ ಸಿಬಿಐ ದಾಳಿಯನ್ನು ಶಿವಕುಮಾರ್ ಎದುರಿಸಬೇಕಾಗಿದೆ.ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿರುವ ಶಿವಕುಮಾರ್ ”ನನ್ನ ಮೇಲೆ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ. ದೇವರು ಎಲ್ಲವನ್ನೂ ನೋಡಿಕೊಳ್ಳುತ್ತಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
”ನನ್ನ ಶಿಕ್ಷಣ ಸಂಸ್ಥೆಯಲ್ಲಿ ಎಲ್ಲವೂ ಕಾನೂನು ಬದ್ಧವಾಗಿದೆ. ಯಾವುದೇ ಅವ್ಯವಹಾರ ನಡೆದಿಲ್ಲ. ಬಿಜೆಪಿಗೆ ಅವರ ಪಕ್ಷದವರು ಮಾಡಿದ ತಪ್ಪುಗಳು ಕಾಣುವುದಿಲ್ಲ” ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.