ಉಭಯ ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ತೀರ್ಮಾನ
Team Udayavani, Dec 19, 2022, 10:43 PM IST
ಬೆಳಗಾವಿ: ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಸ್ತ್ರವಾಗಿರಿಸಿಕೊಂಡು ವಿಧಾನ ಮಂಡಲದ ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷ ತೀರ್ಮಾನಿಸಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ನಲವತ್ತು ಪರ್ಸೆಂಟ್ ಭ್ರಷ್ಟಾಚಾರ, ಬೆಳಗಾವಿ ಗಡಿ ವಿವಾದ, ವೋಟರ್ ಐಡಿ ಹಗರಣ, ಅಂತಾರಾಜ್ಯ ಗಡಿ ವಿವಾದ ಮತ್ತಿತರ ವಿಚಾರಗಳನ್ನು ಪ್ರಮುಖವಾಗಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.
ಕಬ್ಬು, ಅಡಿಕೆ, ತೊಗರಿ ಮತ್ತಿತರ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು, ಜಾನುವಾರುಗಳಿಗೆ ಅಂಟಿರುವ ಕಾಯಿಲೆ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲಾಗುವುದು. ಸದಸ್ಯರೆಲ್ಲರೂ ಸದನದಲ್ಲಿ ಕಡ್ಡಾಯವಾಗಿ ಹಾಜರಿದ್ದು ಕಲಾಪದಲ್ಲಿ ಭಾಗವಹಿಸಬೇಕೆಂದು ಸಿದ್ದರಾಮಯ್ಯ ಅವರು ಸಭೆಯಲ್ಲಿ ಹೇಳಿದರು.
ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗದ ಬಗ್ಗೆ, ಸರ್ಕಾರ ಬಡವರ ಮನೆಗಳ ನಿರ್ಮಾಣಕ್ಕೆ ಮುಂದಾಗದಿರುವ ಕುರಿತು ಸದಸ್ಯರು ಸಭೆಯ ಗಮನ ಸೆಳೆದರು. ಈ ಬಗ್ಗೆಯೂ ಸದನದಲ್ಲಿ ಚರ್ಚೆ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಲಿರುವ ಯಾತ್ರೆ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ವಿವರ ನೀಡಿದರು.
ಬೂತ್ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಲಹೆ ಸೂಚನೆ ನೀಡಿದರು.
ಜನವರಿ 11ರಿಂದ 26 ರವರೆಗೆ ಎಲ್ಲ ನಾಯಕರನ್ನು ಒಳಗೊಂಡ ಬಸ್ ಯಾತ್ರೆ ನಡೆಯಲಿದೆ. ಜನವರಿ 30ರಿಂದ ಸಿಎಲ್ ಪಿ ನಾಯಕರು ಉತ್ತರ ಕರ್ನಾಟಕದಲ್ಲಿ, ಪಿಸಿಸಿ ಅಧ್ಯಕ್ಷರು ದಕ್ಷಿಣ ಕರ್ನಾಟಕದಲ್ಲಿ ಪ್ರತ್ಯೇಕವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಸರ್ಜೇವಾಲಾ ಹೇಳಿದರು.
ಇದನ್ನೂ ಓದಿ: ಕೇರಳ: ಆರ್ಜೆಂಟೀನಾ ಗೆದ್ದ ಸಂಭ್ರಮದಲ್ಲಿ 1500 ಪ್ಲೇಟ್ ಉಚಿತ ಬಿರಿಯಾನಿ ವಿತರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.