ಅಂಬಾಗಿಲು-ಕಲ್ಸಂಕ ರಸ್ತೆ: ಮಾಸಾಂತ್ಯಕ್ಕೆ ಕಾಮಗಾರಿ ಆರಂಭ

Team Udayavani, Dec 20, 2022, 5:10 AM IST

ಅಂಬಾಗಿಲು-ಕಲ್ಸಂಕ ರಸ್ತೆ: ಮಾಸಾಂತ್ಯಕ್ಕೆ ಕಾಮಗಾರಿ ಆರಂಭ

ಉಡುಪಿ: ಹಲವಾರು ತಿಂಗಳಿಂದ ವಾಹನ ಸವಾರ ರಿಗೆ ಸವಾಲಿನ ರಸ್ತೆಯಾಗಿ ಪರಿಣಮಿಸಿರುವ ಅಂಬಾಗಿಲು- ಕಲ್ಸಂಕ ರಸ್ತೆ ಅಭಿವೃದ್ಧಿ ಯೋಜನೆಗೆ ಕಾಲ ಕೂಡಿ ಬಂದಿದೆ.
ಪ್ರಸ್ತುತ ಹದಗೆಟ್ಟ ರಸ್ತೆಯಲ್ಲಿ ಸವಾರರ ಸಂಕಷ್ಟ ಹೇಳತೀರದು. 1.90 ಕೋ. ರೂ. ಮತ್ತು 1.04 ಕೋ. ರೂ. ವೆಚ್ಚದಲ್ಲಿ ಅಂಬಾಗಿಲು-ತಾಂಗದಗಡಿ-ಗುಂಡಿಬೈಲು-ಕಲ್ಸಂಕ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ.

ಮಳೆ ಸಂಪೂರ್ಣ ಬಿಟ್ಟ ಕೂಡಲೇ ಕಾಮಗಾರಿ ಶುರು ಮಾಡುವ ಬಗ್ಗೆ ನಗರಸಭೆ ಆಡಳಿತ ಭರವಸೆ ನೀಡಿತ್ತು. ಮೊದಲ ಹಂತದಲ್ಲಿ ಅಂಬಾಗಿಲಿನಿಂದ ನಿಟ್ಟೂರು ಶಾಲೆ ಸಮೀಪ ತಾಂಗದಗಡಿವರೆಗೆ 1.90 ಕೋ. ರೂ. ವೆಚ್ಚದಲ್ಲಿ ಎರಡು ಬದಿಯಲ್ಲಿ ಡಾಮರಿನಿಂದ ವ್ಯವಸ್ಥಿತ ರಸ್ತೆ ನಿರ್ಮಿಸುವುದು. ಇಲ್ಲಿಂದ ಮುಂದುವರಿದು, ಗುಂಡಿಬೈಲು-ಕಲ್ಸಂಕ ವೃತ್ತದ ವರೆಗೆ 1.04 ಕೋ.ರೂ. ವೆಚ್ಚದಲ್ಲಿ ಡಾಮರು ಹಾಕುವ ಪ್ರಸ್ತಾವನೆ ಸಿದ್ಧಪಡಿಸಲಾಗಿತ್ತು. ಇದೀಗ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ತಿಂಗಳಾಂತ್ಯಕ್ಕೆ ಕಾಮಗಾರಿ ಶುರುವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಬಾಗಿಲು-ಕಲ್ಸಂಕ ರಸ್ತೆಯು ಚತುಷ್ಪಥಗೊಂಡು ಸವಾರರಿಗೆ ಅನುಕೂಲಕರವಾಗಿತ್ತು. ಆದರೆ, ಇತ್ತೀಚಿನ ಕೆಲವು ವರ್ಷಗಳಲ್ಲಿ ರಸ್ತೆ ಎರಡು ಬದಿ ಅಲ್ಲಲ್ಲಿ ಹದಗೆಟ್ಟಿದೆ. ವಿವಿಧ ಕೇಬಲ್‌, ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆ ಪರಿಸ್ಥಿತಿ ಸಾಕಷ್ಟು ದುಸ್ಥಿತಿಗೆ ತಲುಪಿದೆ. ರಸ್ತೆ ಅವ್ಯವಸ್ಥೆಯಿಂದ ಈ ಭಾಗದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿದ್ದವು. ರಸ್ತೆ ಮೇಲ್ಭಾಗದ ಪದರಗಳು ಎದ್ದು ಅಲ್ಲಲ್ಲಿ ಹರಡಿಕೊಂಡ ಪುಡಿಯಾದ ಕಲ್ಲು ತುಂಡುಗಳು ಸುಗಮ ಸಂಚಾರಕ್ಕೆ ಕಿರಿಕಿರಿಯಾಗುತ್ತಿವೆ. ಅಂಬಾಗಿಲು- ಗುಂಡಿಬೈಲು- ಕಲ್ಸಂಕ ರಸ್ತೆಯಲ್ಲಿ ಗುಂಡಿಗಳೇ ರಾರಾಜಿಸುತ್ತಿತ್ತು. ಈ ವರ್ಷದ ಮಳೆಗಾಲದಲ್ಲಿ ಸಾರ್ವಜನಿಕರು ಸಾಕಷ್ಟು ಕಷ್ಟಪಡುವಂತಾಗಿತ್ತು. ಮಳೆಗಾಲದಲ್ಲಿ ಗುಂಡಿಗಳಿಂದಲೇ ನಿಯಂತ್ರಣ ತಪ್ಪಿ ಸಾಕಷ್ಟು ಮಂದಿ ದ್ವಿಚಕ್ರ ವಾಹನ ಸವಾರರು ಮೈಕೈಗೆ ಪೆಟ್ಟು ಮಾಡಿಕೊಂಡಿದ್ದರು. ಇತ್ತೀಚೆಗೆ ಗುಂಡಿಗಳಿಗೆ ತೇಪೆ ಹಚ್ಚಲಾಗಿದ್ದು, ಮುಂದಿನ ಮಳೆಗಾಲದ ಒಳಗೆ ವ್ಯವಸ್ಥಿತವಾಗಿ ರಸ್ತೆ ನಿರ್ಮಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ಪೂರ್ಣ
ಅಂಬಾಗಿಲಿನಿಂದ ಕಲ್ಸಂಕವರೆಗೆ ಎರಡು ಹಂತಗಳಲ್ಲಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಶುರುವಾಗಲಿದೆ.
-ಸುಮಿತ್ರಾ ನಾಯಕ್‌, ಅಧ್ಯಕ್ಷರು, ನಗರಸಭೆ

ಟಾಪ್ ನ್ಯೂಸ್

Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್‌ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್

Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್‌ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್

ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್

ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್

Tollywood: ಚಳಿಗಾಲದಲ್ಲಿ ಈ ದಿನ ನೆರವೇರಲಿದೆ ನಾಗಚೈತನ್ಯ – ಶೋಭಿತಾ ವಿವಾಹ

Tollywood: ಚಳಿಗಾಲದಲ್ಲಿ ಈ ದಿನ ನೆರವೇರಲಿದೆ ನಾಗಚೈತನ್ಯ – ಶೋಭಿತಾ ವಿವಾಹ

6

Home made food ನಿಜವಾಗಿಯೂ ಪೋಷಕಾಂಶದಿಂದ ತುಂಬಿದೆಯೇ…?

1-eqwew

Rajyotsava Award: ಅರುಣ್‌ ಯೋಗಿರಾಜ್‌ ಸೇರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

firing

Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8(2)

Udupi: ನಗರದ ಎಲ್ಲೆಡೆ ಖರೀದಿ ಭರಾಟೆ; ಬೆಳಕಿನ ಹಬ್ಬ ದೀಪಾವಳಿಗೆ ಇನ್ನು ಒಂದೇ ದಿನ ಬಾಕಿ

5

Udupi: ಸಿಗುತ್ತಿಲ್ಲ ಡಾಮರು ಮಿಶ್ರಣ!; ಹಾನಿಗೊಂಡ ರಸ್ತೆಗಳ ದುರಸ್ತಿಗೆ ಕೂಡಿಬರದ ಕಾಲ

1-sports

Sports; ಕುಚ್ಚೂರು: ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Ajekar:ಪ್ರಿಯಕರನೊಂದಿಗೆ ಸೇರಿ ಪತಿಯ ಹ*ತ್ಯೆ ಪ್ರಕರಣ:ಪೊಲೀಸರ ತಂಡದಿಂದ ಸಾಕ್ಷ್ಯಗಳ ಹುಡುಕಾಟ

Ajekar:ಪ್ರಿಯಕರನೊಂದಿಗೆ ಸೇರಿ ಪತಿಯ ಹ*ತ್ಯೆ ಪ್ರಕರಣ:ಪೊಲೀಸರ ತಂಡದಿಂದ ಸಾಕ್ಷ್ಯಗಳ ಹುಡುಕಾಟ

Udupi: ಇಂದ್ರಾಳಿ ಮೇಲ್ಸೇತುವೆ: ಜ. 15 ರೊಳಗೆ ಮುಗಿಸಲು ಗಡುವು

Udupi: ಇಂದ್ರಾಳಿ ಮೇಲ್ಸೇತುವೆ: ಜ. 15 ರೊಳಗೆ ಮುಗಿಸಲು ಗಡುವು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್‌ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್

Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್‌ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್

10

Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು

ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್

ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.