ಅಮರಾವತಿ ಉಮೇಶ್ ಹತ್ಯೆ ಮಾಡಿದ್ದು ತೀವ್ರಗಾಮಿ ಇಸ್ಲಾಮಿಸ್ಟ್ ಗಳು: ಎನ್ಐಎ ವರದಿ
Team Udayavani, Dec 20, 2022, 11:55 AM IST
ಮುಂಬೈ: ಬಿಜೆಪಿ ನಾಯಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಮಹಾರಾಷ್ಟ್ರದ ಅಮರಾವತಿಯ ಫಾರ್ಮಸಿಸ್ಟ್ ಉಮೇಶ್ ಕೋಲ್ಹೆ ಅವರನ್ನು ಪ್ರವಾದಿ ಮೊಹಮ್ಮದ್ ನ ಅವಮಾನದ ಪ್ರತೀಕಾರಕ್ಕಾಗಿ ತಬ್ಲಿಘಿ ಜಮಾತ್ ನ ತೀವ್ರಗಾಮಿ ಇಸ್ಲಾಮಿಸ್ಟ್ ಗಳು ಹತ್ಯೆ ಮಾಡಿದ್ದಾರೆ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಸಲ್ಲಿಸಿದೆ.
ಇದನ್ನು ತೀವ್ರಗಾಮಿಗಳ ಗುಂಪಿನಿಂದ ಭಯೋತ್ಪಾದಕ ಕೃತ್ಯ ಎಂದು ಕರೆದಿರುವ ಎನ್ಐಎ, ಕೋಲ್ಹೆ ಕೊಲೆಯ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವವರಿಗೆ ಒಂದು ಉದಾಹರಣೆಯನ್ನು ಸೆಟ್ ಮಾಡಲು ಬಯಸಿದ್ದರು ಎಂದು ಹೇಳಿದೆ.
ಔಷಧ ಮಾರಾಟಗಾರರಾಗಿದ್ದ ಉಮೇಶ್ ಕೊಲ್ಹೆ ಅವರು ಜೂನ್ 21ರಂದು ಅಮರಾವತಿ ನಗರದಲ್ಲಿ ತಮ್ಮ ಅಂಗಡಿಯಿಂದ ಮನೆಗೆ ಮರಳಿ ಬರುತ್ತಿದ್ದ ಸಂದರ್ಭದಲ್ಲಿ, ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಕುತ್ತಿಗೆ ಕತ್ತರಿಸಿ ಹತ್ಯೆ ಮಾಡಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಈ ಭಯಾನಕ ಘಟನೆ ನಡೆದಿತ್ತು. ಅವರ 27 ವರ್ಷದ ಮಗ ಮತ್ತು ಹೆಂಡತಿ ಬೇರೆ ವಾಹನದಲ್ಲಿ ಇದ್ದ ಕಾರಣ ಇವರನ್ನು ಕಾಪಾಡಲು ಸಾಧ್ಯವಾಗಿರಲಿಲ್ಲ.
ಡಿಸೆಂಬರ್ 11ರಂದು ಈ ಕುರಿತು ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಸಿದ್ದು, “ತಬ್ಲಿಘಿ ಜಮಾತ್ ನ ತೀವ್ರಗಾಮಿ ಇಸ್ಲಾಮಿಸ್ಟ್ ಗಳು ಉಮೇಶ್ ಕೋಲ್ಹೆಯನ್ನು ಹತ್ಯೆ ಮಾಡಿದ್ದಾರೆʼʼ ಎಂದು ಪ್ರತಿಪಾದಿಸಿದೆ.
ಇದನ್ನೂ ಓದಿ:1,20,000 ರೂ. ಮ್ಯಾಕ್ಬುಕ್ ಪ್ರೊ ಆರ್ಡರ್ ಮಾಡಿದಾತನಿಗೆ ಬಂದದ್ದು ನಾಯಿಗೆ ಹಾಕುವ ಪೆಡಿಗ್ರಿ.!
ಈ ಭಯೋತ್ಪಾದಕ ಗ್ಯಾಂಗ್ (11 ಆರೋಪಿಗಳ ಗುಂಪು) “ಗುಸ್ತಾಖ್ -ಇ- ನಬಿ ಕಿ ಐಕ್ ಸಾಜಾ, ಸಾರ್ ತಾನ್ ಸೆ ಜುದಾ” ಎಂಬ ಸಿದ್ಧಾಂತದಿಂದ ಪ್ರಭಾವಿತರಾಗಿದ್ದರು ಎಂದು ಎನ್‌ಐಎ ತನ್ನ ಆರೋಪಪಟ್ಟಿಯಲ್ಲಿ ತಿಳಿಸಿದೆ. ರಾಜಸ್ಥಾನದ ಉದಯಪುರದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದ ಮಾಡುವ ಒಂದು ವಾರದ ಮೊದಲು ಕೊಲೆ ನಡೆದಿತ್ತು. ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ ಕಾರಣಕ್ಕೆ ಈ ಹತ್ಯೆ ನಡೆದಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ 11 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಅವರೆಲ್ಲರನ್ನೂ ಬಂಧಿಸಲಾಗಿದೆ.
ಯಾವುದೇ ಆಸ್ತಿ ವಿವಾದ ಅಥವಾ ಆರೋಪಿಗಳೊಂದಿಗೆ ಪೂರ್ವ ದ್ವೇಷವಿಲ್ಲದ ಕೋಲ್ಹೆಯನ್ನು ಕೊಲ್ಲಲು ಆರೋಪಿಗಳು ಸಂಚು ರೂಪಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.