ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳು ತೋರುತ್ತಿರುವ ನಡವಳಿಕೆ ಬಹಳ ಚಿಂತಾಜನಕವಾಗಿದೆ: ನಟಿ ರಮ್ಯಾ

ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟವಟಿಕೆಗಳಿಗೆ ಬೆಂಬಲ ಕೊಡಬಾರದು.

Team Udayavani, Dec 20, 2022, 4:15 PM IST

tdy-16

ಬೆಂಗಳೂರು: ಸಿನಿಮಾರಂಗದಲ್ಲಿ ಪ್ರತಿಯೊಬ್ಬರು ಸವಾಲುಗಳನು ಎದುರಿಸಿಯೇ ಬಂದಿರುತ್ತಾರೆ ಎಂದು ಮೋಹಕ ತಾರೆ ರಮ್ಯಾ ಕನ್ನಡ ಚಿತ್ರ ರಂಗ, ಅಭಿಮಾನಿಗಳ ಕುರಿತು ಸುದೀರ್ಘವಾದ ಮಾತುಗಳನ್ನು ಟ್ವೀಟ್‌ ಮೂಲಕ ಹೇಳಿದ್ದಾರೆ.

ಟ್ವೀಟ್‌ ನಲ್ಲಿರುವುದಿಷ್ಟು..

ಚಿತ್ರರಂಗದಲ್ಲಿ ಇವತ್ತು ತಲುಪಿರುವ ಹಂತಕ್ಕೆ ಬರಲು ಪ್ರತಿಯೊಬ್ಬರೂ ತಮ್ಮದೇ ಆದ ಸವಾಲುಗಳನ್ನು ಎದುರಿಸಿಕೊಂಡು ಬಂದಿರುತ್ತಾರೆ. ಕೇವಲ ನಾಯಕ ನಟರು ಮತ್ತು ನಾಯಕ ನಟಿಯರಷ್ಟೇ ಅಲ್ಲ, ಸಂಗೀತ ನಿರ್ದೇಶಕರು, ಗಾಯಕರು, ನೃತ್ಯ ನಿರ್ದೇಶಕರು, ಬರಹಗಾರರು, ಫೈಟ್ ಮಾಸ್ಟರ್ ಗಳು ಮುಂತಾದ ಪ್ರತಿಯೊಬ್ಬ ತಂತ್ರಜ್ಞರೂ ಅನೇಕ ಕಷ್ಟಕರವಾದ ಪರಿಸ್ಥಿತಿಗಳನ್ನು ಎದುರಿಸಿ ಉನ್ನತ ಸ್ಥಾನಕ್ಕೆ ಬಂದಿರುತ್ತಾರೆ, ಕೆಲವರ ಕಷ್ಟಗಳು ಸಾರ್ವಜನಿಕವಾಗಿ ನಮಗೆ ತಿಳಿದಿರುತ್ತೆ, ಮತ್ತಷ್ಟು ತಿಳಿದಿರುವುದಿಲ್ಲ. ಕೆಲವರು ಉನ್ನತ ಸ್ಥಾನಕ್ಕೆ ಏರಿದ್ದರೆ ” ಅನೇಕರಿಗೆ ದೊಡ್ಡ ಯಶಸ್ಸು ಗಳಿಸಲು ಸಾಧ್ಯವಾಗಿಲ್ಲದೆ ಇರಬಹುದು.

ಚಿತ್ರರಂಗದಲ್ಲಿ ನಮ್ಮ ಆಸೆಯ ಗೋಪುರ ಕಟ್ಟಿಕೊಂಡು ಬರುವವರ ಒಪ್ಪಲಿಗಳು ಬೇರೆಯೇ ಇರಬಹುದು. ಹಲವರಿಗೆ ಎರಡು ಹೊತ್ತು ಊಟ ಗಿಟ್ಟಿಸಿಕೊಳ್ಳುವುದುಕಷ್ಟವಾಗಿದ್ದರೆ, ಹಲವರಿಗೆ ಮೈ ತುಂಬಾ ಸಾಲ ಮಾಡಿಕೊಂಡು ಸಾಧನೆ ಮಾಡಬೇಕು ಅಂತ ಬಂದಿರಬಹುದು . ಹಲವರು ಇದ್ದುದೆಲ್ಲವನ್ನು ಬಿಟ್ಟು ಚಿತ್ರರಂಗದಲ್ಲಿ ಸಾಧಿಸಬೇಕೆಂದು ಬಿಟ್ಟು ಬಂದದ್ದು ಉಂಟು. ಯಶಸ್ಸು ಬಹಳ ಕಡಿಮೆ ಜನರ ಪಾಲಾಗಿದೆ ಅಷ್ಟೇ ಆದರೆ ಕ್ರಮ ಪಟ್ಟದರ ಸಂಖ್ಯೆ ಎಣಿಸಲಸಾಧ್ಯ.

ಎಲ್ಲಕ್ಕಿಂತ ಮುಖ್ಯ ಮನುಷ್ಯ ತನ್ನ ಬೇರುಗಳಿಗೆ ಗಟ್ಟಿಯಾಗಿ ಅಂಟಿಕೊಂಡಿರುವುದು ಮತ್ತು ತಾವು ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ ಮೇಲೆ ಬಂದ ಬಳಿಕ ತಮ್ಮಂತೆ ಕಷ್ಟ ಪಟ್ಟು ಶ್ರದ್ಧೆಯಿಂದ ಕೆಲಸ ಮಾಡಲು ಹಂಬಲ ಇರುವ ಪ್ರತಿಭೆಗಳನ್ನು ಹುಡುಕಿ ಸಹಾಯ ಮಾಡುವುದು ಉತ್ತಮ ನಡವಳಿಕೆ.

ಇದನ್ನೂ ಓದಿ: ಅಪ್ಪು – ದಚ್ಚು ಇಬ್ಬರಿಗೂ ನಾನು ಆತ್ಮೀಯ: ಇಂಥ ಅಗೌರವಕ್ಕೆ ದರ್ಶನ್‌ ಖಂಡಿತ ಅರ್ಹವಲ್ಲ; ಕಿಚ್ಚ ಸುದೀಪ್  

ನಾನು ಯಾವತ್ತಿಗೂ ನಂಬರ್ 1 ಮತ್ತು ಈ ಸ್ಥಾನ ನನಗೆ ಮಾತ್ರ ದಕ್ಕಬೇಕು ಅನ್ನುವ ಅಹಂ ಬಿಟ್ಟು ನಮ್ಮಲ್ಲಿ ಯಾರೇ ಮೇಲೆ ಬಂದರೂ ಅದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಯಶಸ್ಸು, ಅಧಿಕಾರ, ಹಣ ಯಾವುದು ಶಾಶ್ವತವಲ್ಲ ಅನ್ನುವ ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು. ಇಂದು ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳು ತೋರುತ್ತಿರುವ ನಡವಳಿಕೆಬಹಳ ಚಿಂತಾಜನಕವಾಗಿದೆ. ತಮ್ಮ ಗುಂಪಿನಲ್ಲಿ ಅಥವಾ ಬಣದಲ್ಲಿ ಕಾಣಿಸಿಕೊಳ್ಳದ ಎಲ್ಲರನ್ನು ಬಹಳ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ತಾಯಿ, ಹೆಂಡು, ಮಗಳು ಅನ್ನುವ ಎಲ್ಲ ಪವಿತ್ರ ಸಂಬಂಧಗಳಿಗೆ ಮಸಿ ಬಳಿಯುವಂತ ಬಹಳ ಕೆಟ್ಟ ಮಾತುಗಳು ಆಡುವುದನ್ನು ಕಂಡಲ್ಲಿ ನೋವಾಗುತ್ತದೆ. ನಮ್ಮ ಪ್ರಜಾವಂತ ಸಮಾಜ ಯಾವ ಮಟ್ಟಕ್ಕೆ ಇಳಿಯುತ್ತಿದೆ ಅನ್ನುವುದು ನೋಡಿ ಬೇಜಾರಾಗ್ತಿದೆ.

ಮುಂಚಿನಿಂದಲೂ ಅಭಿಮಾನಿ ಸಂಘಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವುದು ನಾವು ಕಂಡಿದ್ದೇವೆ, ಕೇಳಿದ್ದೇವೆ. ರಕ್ತದಾನ ಶಿಬಿರ, ಅನ್ನದಾನ, ವೃದ್ಧಾಶ್ರಮ, ಅನಾಥಾಶ್ರಮದಲ್ಲಿ ಸೇವೆ ಮಾಡುವುದು, ಗಿಡ ನೆಡುವುದು, ಪ್ರಕೃತಿ ಕಾಪಾಡುವುದು, ಬಡವರಿಗೆ ಆಹಾರ ಮತ್ತು ಔಷಧಿ ಹಂಚುವುದು ಮುಂತಾದ ಅನೇಕ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ಅಭಿಮಾನಿ ಸಂಘಗಳಿಗೆ ಇರುವ ಹೆಗ್ಗಳಿಕೆ, ಆದರೆ ಅಭಿಮಾನಿಗಳು ಅನ್ನುವ ಹೆಸರಿನಲ್ಲಿ ಈಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿಜ ರೂಪವನ್ನು, ಹೆಸರನ್ನು ಹಾಕಿಕೊಳ್ಳದೆ ಅನಾಮಧೇಯವಾಗಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯಲ್ಲಿ ಮಾತಾಡುವುದು ವಿಷಾದನೀಯ.

ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ ತಮ್ಮ ಅಭಿಮಾನಿಗಳಿಗೆ ತಿಳವಳಿಕೆ ಹೇಳಿ ಅವರನ್ನು ಸುಸಂಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟವಟಿಕೆಗಳಿಗೆ ಬೆಂಬಲ ಕೊಡಬಾರದು.

ಕನ್ನಡ ಚಿತ್ರರಂಗ ಇವತ್ತು ದೇಶ ವಿದೇಶಗಳಲ್ಲಿ ದೊಡ್ಡ ಖ್ಯಾತಿಪಡೆದಿದೆ . . IMDB ಉನ್ನತ 10 ಚಿತ್ರಗಳ ಪಟ್ಟಿಯಲ್ಲಿ 3 ಕನ್ನಡ ಚಿತ್ರಗಳಿವೆ ಅಂತ ಹೇಳಲು ನಮಗೆಲ್ಲ ಬಹಳ ಹೆಮ್ಮೆ ಆಗಬೇಕಿದೆ. ಕನ್ನಡ ಚಿತ್ರಗಳು ಈ ವರ್ಷ ಕಂಡ ಯಶಸ್ಸು ಬೇರಾವುದೇ ಭಾಷೆಯ ಚಿತ್ರಗಳಿಗೂ ಲಭ್ಯವಾಗಿಲ್ಲ. ಇದಕ್ಕಿಂತ ಹೆಮ್ಮೆಯ ವಿಚಾರ ಮತ್ತು ಸ್ಫೂರ್ತಿ ಬೇಕಿದೆಯೇ?

ಕಲಾದೇವಿಯ ಸೇವೆ ಮಾಡಿಕೊಂಡು ಸಮಾಜಕ್ಕೂ, ನಮ್ಮ ಚಿತ್ರರಂಗಕ್ಕೂ ಒಳ್ಳೆಯ ಹೆಸರು ತರುವುದು ನಮ್ಮೆಲ್ಲರ ಗುರಿ ಆಗಿರಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯೂ ಹೌದು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರನ್ನು ಉತ್ತೇಜಿಸೋಣ. ಪ್ರೀತಿ ಮತ್ತು ವಿಶ್ವಾಸ ತುಂಬಿದ ಉತ್ತಮ ಸಮಾಜ ನಿರ್ಮಿಸೋಣ. ದ್ವೇಷ ಮತ್ತು ಅಸೂಯೆಗಳನ್ನು ದಮನ ಮಾಡೋಣ. ಎಲ್ಲರಿಗು ಒಳಿತಾಗಲಿ.

ಹೊಸಪೇಟೆ ನಟ ದರ್ಶನ್‌ ಅವರ ಮೇಲೆ ನಡೆದ ಕೃತ್ಯವನ್ನು ರಮ್ಯಾ, ಕಿಚ್ಚ ಸುದೀಪ್‌, ಶಿವರಾಜ್‌ ಕುಮಾರ್‌, ಜಗ್ಗೇಶ್‌ ಸೇರಿದಂತೆ ಹಲವರು ಖಂಡಿಸಿದ್ದಾರೆ.

ಟಾಪ್ ನ್ಯೂಸ್

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.