ನವೀಕರಿಸಬಹುದಾದ ಇಂಧನ, ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ದ್ವಿಗುಣ
Team Udayavani, Dec 21, 2022, 7:25 AM IST
ಹೊಸದಿಲ್ಲಿ: 2022ರಲ್ಲಿ ದೇಶದಲ್ಲಿ ನವೀಕರಿಸಬಹುದಾದ ಇಂಧನ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿಗಳು ದ್ವಿಗುಣಗೊಂಡಿವೆ. ಆದರೆ ಮುಂಬರುವ ಸವಾಲುಗಳನ್ನು ಎದುರಿಸಿ ಗುರಿ ಸಾಧಿಸುವುದು ಸರಕಾರಕ್ಕೆ ಸವಾಲಾಗಿದೆ ಎಂದು ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಫಾರ್ ಸಸ್ಟೆನೆಬಲ್ ಡೆವಲಪ್‌ಮೆಂಟ್ ಹೇಳಿದೆ.
ಸಂಸ್ಥೆ ಬಿಡುಗಡೆ ಮಾಡಿರುವ ಅಧ್ಯಯನ ವರದಿಯಲ್ಲಿ ನವೀಕರಿಸಬಹುದಾದ ಇಂಧನಕ್ಕಾಗಿ ಸಬ್ಸಿಡಿಗಳು 2022 ರಲ್ಲಿ ರೂ 11,529 ಕೋ.ರೂ. ಗೆ ತಲುಪಿದೆ ಎಂದು ಹೇಳಿದೆ. 2021 ರಲ್ಲಿ ರೂ 5,774 ಕೋ. ರೂ.ಗಳಾಗಿದ್ದವು. ಇದೇ ವೇಳೆ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಬೇಡಿಕೆ ವ್ಯಕ್ತವಾಗಿದ್ದು ಆ ಅವಧಿಯಲ್ಲಿ ಸಬ್ಸಿಡಿಯು 906 ಕೋ.ರೂ.ನಿಂದ 2,358 ಕೋ. ರೂ.ಗೆ ಜಿಗಿದಿದೆ. ಸೌರ ವಿದ್ಯುತ್ ಕ್ಷೇತ್ರದಲ್ಲಿ 155 ಪ್ರತಿಶತದಷ್ಟು ಜಿಗಿತ ಕಂಡುಬಂದಿದೆ. ಸರಕಾರವು ಮುಂದಿನ ಕೆಲವು ವರ್ಷಗಳಲ್ಲಿ ಸಬ್ಸಿಡಿಗಳು, ಸಾರ್ವಜನಿಕ ಹಣಕಾಸು ಮತ್ತು ಸಾರ್ವಜನಿಕ ಸ್ವಾಮ್ಯದ ಕಂಪೆನಿಗಳ ಹೂಡಿಕೆಗಳ ಸಹಿತ ಬೆಂಬಲ ಕ್ರಮಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಸಲಹೆ ನೀಡಲಾಗಿದೆ.
2022ರ ಹಣಕಾಸಿನ ವರ್ಷದಲ್ಲಿ ಸ್ವತ್ಛ ಇಂಧನಗಿಳಿಗಿಂತ ಭಾರತ ಪಳೆಯುಳಿಕೆ ಇಂಧನಕ್ಕೆ 4 ಪಟ್ಟು ಹೆಚ್ಚಿನ ಮೊತ್ತವನ್ನು ವಿನಿಯೋಗಿಸಿದೆ. 2021ಕ್ಕೂ ಮುನ್ನ 9 ಪಟ್ಟು ಹೆಚ್ಚಿನ ಅನುದಾನವನ್ನು ವಿನಿಯೋಗಿಸುತ್ತಿತ್ತು.
2022ರ ಹಣಕಾಸು ವರ್ಷದಲ್ಲಿ ಭಾರತ ಕಲ್ಲಿದ್ದಲು, ಗ್ಯಾಸ್, ತೈಲಗಳ ಸಬ್ಸಿಡಿಗಳು 60,316 ಕೋಟಿ ರೂ.ಗಳಾಗಿದ್ದು, 2014ರಿಂದ ಶೇ.76ರಷ್ಟು ಕುಸಿದಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಮುಖವಾಗಿ, ತೈಲ ಮತ್ತು ಅನಿಲ ಸಬ್ಸಿಡಿಗಳು 44,383 ಕೋಟಿ ರೂ.ಗೆ 28 ಪ್ರತಿಶತದಷ್ಟು ಕುಸಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.