21 ಸಾವಿರ ಹಸು ಬಲಿ; ಹೆಚ್ಚುತ್ತಿದೆ ರಾಜ್ಯದಲ್ಲಿ ಚರ್ಮಗಂಟು ರೋಗದ ಹಾವಳಿ

 230 ತಾಲೂಕುಗಳಲ್ಲಿ  ಸೋಂಕು; ಲಸಿಕೆ ಪ್ರಮಾಣವೂ ಹೆಚ್ಚಳ

Team Udayavani, Dec 21, 2022, 7:00 AM IST

21 ಸಾವಿರ ಹಸು ಬಲಿ; ಹೆಚ್ಚುತ್ತಿದೆ ರಾಜ್ಯದಲ್ಲಿ ಚರ್ಮಗಂಟು ರೋಗದ ಹಾವಳಿ

ಬೆಂಗಳೂರು: ರಾಜ್ಯದಲ್ಲಿ ಚರ್ಮಗಂಟು ರೋಗವನ್ನು ಹತೋಟಿಗೆ ತರಲಾಗುತ್ತಿದ್ದರೂ  ಸುಮಾರು 21,305 ಜಾನುವಾರುಗಳು ಬಲಿಯಾಗಿರುವುದು ಆತಂಕ ಸೃಷ್ಟಿಸಿದೆ.

ರಾಜ್ಯದ ಸುಮಾರು 230 ತಾಲೂಕುಗಳ 15,977 ಗ್ರಾಮಗಳಲ್ಲಿ ಈವರೆಗೆ 2,37,194 ರಾಸುಗಳಿಗೆ ಚರ್ಮಗಂಟು ರೋಗ ಬಾಧಿಸಿದ್ದು, ಈ ಪೈಕಿ 1.64 ಲಕ್ಷ ರಾಸುಗಳು ಚೇತರಿಕೆಯಾಗಿವೆ. ಇನ್ನುಳಿದ ರಾಸುಗಳಿಗೆ ಸರಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಸಿಬಂದಿ ಇಲ್ಲದೆ ಲಸಿಕೆ ತಲುಪುತ್ತಿಲ್ಲ ಎಂಬ ಸಂಗತಿ “ಉದಯವಾಣಿ’ ನಡೆಸಿದ ಜಿಲ್ಲಾವಾರು ಮಾಹಿತಿ ಸಂಗ್ರಹದಿಂದ ಬೆಳಕಿಗೆ ಬಂದಿದೆ.

ಮೃತಪಟ್ಟ ಜಾನುವಾರುಗಳ ಮಾಲಕರಿಗೆ  ಈಗಾಗಲೇ ಮುಖ್ಯಮಂತ್ರಿಗಳು 37 ಕೋಟಿ ರೂ. ಪರಿಹಾರಧನ  ನೀಡಿದ್ದು, ಬುಧವಾರದಿಂದ ಪರಿಹಾರ ವಿತರಣೆಯಾಗಲಿದೆ. ಆ.1ರಿಂದ ಅನ್ವಯವಾಗುವಂತೆ ಪ್ರತೀ ರಾಸುಗಳಿಗೆ ಗರಿಷ್ಠ 20 ಸಾವಿರ ರೂ., ಎತ್ತುಗಳಿಗೆ ರೂ.30 ಸಾವಿರ ಹಾಗೂ ಪ್ರತೀ ಕರುವಿಗೆ 5 ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ. ಬ್ಯಾಂಕ್‌ ಖಾತೆಗೆ ನೇರವಾಗಿ ಪರಿಹಾರಧನ ವಿತರಣೆ ಮಾಡಲಾಗುತ್ತಿದೆ.

ಚರ್ಮಗಂಟು ರೋಗದಿಂದ ಜಾನುವಾರು ಮೃತಪಟ್ಟ ಪ್ರಕರಣದಲ್ಲಿ ಮಾಲಕರಿಗೆ ಪರಿಹಾರ ನೀಡಲು 37 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ  ಸಾವು ಹೆಚ್ಚು
ಇಡೀ ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆಯಲ್ಲಿ 5,120 ಜಾನುವಾರುಗಳು ಸಾವನ್ನಪ್ಪಿವೆ. ಜಿಲ್ಲೆಯ 1,077 ಗ್ರಾಮಗಳಲ್ಲಿ 42,225 ಜಾನುವಾರುಗಳಲ್ಲಿ ಚರ್ಮರೋಗ ಕಾಣಿಸಿಕೊಂಡಿದೆ. ಹಾಗೆಯೇ ಈ ಜಿಲ್ಲೆಯಲ್ಲಿ 7.42 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ.

ಇನ್ನು ಹಾವೇರಿ ಜಿಲ್ಲೆಯಲ್ಲಿ 2,322, ದಾವಣಗೆರೆಯಲ್ಲಿ 1,188, ಬಳ್ಳಾರಿ-ವಿಜಯನಗರದಲ್ಲಿ 2,878, ಚಿತ್ರದುರ್ಗದಲ್ಲಿ 1,225, ಬಾಗಲಕೋಟೆಯಲ್ಲಿ 1,093 ಪ್ರಕರಣಗಳು ಕಾಣಿಸಿಕೊಂಡಿವೆ.

ದಕ್ಷಿಣ ಕನ್ನಡ-ಉಡುಪಿಯಲ್ಲಿ ಕಡಿಮೆ
ಇಡೀ ರಾಜ್ಯಕ್ಕೆ ಹೋಲಿಸಿದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಂಕು ಮತ್ತು ಸಾವಿನ ಪ್ರಮಾಣ ಕಡಿಮೆ ಇದೆ. ಸದ್ಯ ದಕ್ಷಿಣ ಕನ್ನಡದಲ್ಲಿ 1,226 ಸೋಂಕು, 32 ಸಾವು, ಉಡುಪಿಯಲ್ಲಿ 798 ಕೇಸು, ಮೂರು ಜಾನುವಾರುಗಳ ಸಾವಿನ ಪ್ರಕರಣ ಪತ್ತೆಯಾಗಿದೆ.

ಗ್ರಾಪಂಗಳಿಗೆ ಸೂಚನೆ
ರೋಗ ತಡೆಗಟ್ಟಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲ ಗ್ರಾಮ ಪಂಚಾಯತ್‌ಗಳಿಗೆ ಸೂಚಿಸಲಾಗಿದೆ. ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚರ್ಮಗಂಟು ರೋಗವು ಮುಖ್ಯವಾಗಿ ಸೊಳ್ಳೆ, ಕಚ್ಚುವ

ನೊಣ, ಉಣ್ಣೆ ಇತ್ಯಾದಿಗಳಿಂದ ಹರಡುತ್ತದೆ. ರೋಗ ನಿಯಂತ್ರಣಕ್ಕೆ ಲಸಿಕೆ ಹಾಕುವುದರ ಜತೆಗೆ ಸೊಳ್ಳೆ, ಕೀಟಗಳ ಹಾಗೂ ನೊಣಗಳ ನಿಯಂತ್ರಣ ಮಾಡುವುದು ತೀರಾ ಆವಶ್ಯಕವಾಗಿದೆ.

ಆದ್ದರಿಂದ ಜಾನುವಾರುಗಳಲ್ಲಿ ಚರ್ಮಗಂಟು ರೋಗವನ್ನು ತಡೆಗಟ್ಟಲು ನೊಣ, ಸೊಳ್ಳೆಗಳ ಮತ್ತು ಕಚ್ಚುವ ಕೀಟಗಳ ನಿಯಂತ್ರಣಕ್ಕಾಗಿ ಗ್ರಾಮಗಳಲ್ಲಿನ ಚೌಗು ಪ್ರದೇಶಗಳಲ್ಲಿ, ರೈತರ ಜಾನುವಾರುಗಳ ಕೊಟ್ಟಿಗೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕೀಟ ನಾಶಕಗಳನ್ನು ಸಿಂಪಡಿಸುವುದು ಸೇರಿದಂತೆ ಅಗತ್ಯ ಎಲ್ಲ ಕ್ರಮಗಳನ್ನು ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಎಲ್ಲ ಗ್ರಾಮಗಳಲ್ಲಿ ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.

ಚರ್ಮಗಂಟು ರೋಗ ಲಕ್ಷಣ
ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು, ನಿಶ್ಶಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕುಂಟುವುದು, ಜಾನುವಾರು ಚರ್ಮದ ಮೇಲೆ 2-5 ಸೆಂಮೀ ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳು ಬಿದ್ದು ಹುಣ್ಣಾಗುತ್ತದೆ. ಇದರಿಂದ ಹಸುಗಳಲ್ಲಿ ಹಾಲು ಕೊಡುವ ಸಾಮರ್ಥ್ಯ ಕಡಿಮೆಯಾಗುತ್ತದೆ. ಎತ್ತುಗಳಲ್ಲಿ ಶಕ್ತಿ ಕುಂದುತ್ತದೆ.

ಲಸಿಕೆಗೆ ಸಿಗದ ವೇಗ
ಕೆಲವು ಜಿಲ್ಲೆಗಳಲ್ಲಿ ಮಾತ್ರ ಲಸಿಕೆಗೆ ವೇಗ ಸಿಕ್ಕಿದೆ. ರಾಮನಗರದಲ್ಲಿ ಶೇ.89ರಷ್ಟು ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಬೆಳಗಾವಿಯಲ್ಲಿ 7 ಲಕ್ಷಕ್ಕೂ ಹೆಚ್ಚು ರಾಸುಗಳಿಗೆ ಲಸಿಕೆ ನೀಡಲಾಗಿದೆ. ಆದರೆ ಕೆಲವು ಕಡೆಗಳಲ್ಲಿ ಸಿಬ್ಬಂದಿ ಕೊರತೆಯಿಂದ ಸರಿಯಾದ ಪ್ರಮಾಣದಲ್ಲಿ ಲಸಿಕೆ ನೀಡಲಾಗಿಲ್ಲ. ಬೀದರ್‌, ಶಿವಮೊಗ್ಗ, ಗದಗ,  ಮೈಸೂರು ಜಿಲ್ಲೆಗಳಲ್ಲಿ ಪಶು ವೈದ್ಯಕೀಯ ಸಿಬಂದಿ ಕೊರತೆ ಇದೆ.

ಟಾಪ್ ನ್ಯೂಸ್

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

3-ct-ravi

ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.