ನಾಳೆ ಪಂಚಮಸಾಲಿ ಮೀಸಲಾತಿ ಪ್ರಕಟಣೆ ಆಗಲಿದೆ: ಯತ್ನಾಳ್
Team Udayavani, Dec 21, 2022, 12:20 PM IST
ಬೆಳಗಾವಿ: ನಾಳೆ ಶಕ್ತಿಪ್ರದರ್ಶನ ಆಗವುದರಿಂದ, ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಮಾಡಲಿದ್ದಾರೆ. ನಾವು ಯಾರಿಗೂ ಆಹ್ವಾನ ನೀಡುತ್ತಿಲ್ಲ, 25 ಲಕ್ಷ ಜನ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಾಳೆ ಪಂಚಮಸಾಲಿ ಸಮುದಾಯದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಕುರಿತು ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸರ್ಕಾರದ ಮೇಲೆ ವಿಶ್ವಾಸ ಇದೆ. ನಾಳೆ ಪಂಚಮಸಾಲಿ ಮೀಸಲಾತಿ ಪ್ರಕಟಣೆ ಆಗಲಿದೆ. ಗುರುವಾರ ಈ ನಿಟ್ಟಿನಲ್ಲಿ ಐತಿಹಾಸಿಕ ಘೋಷಣೆ ಆಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿಯಲ್ಲಿ ಸ್ವಯಂಪ್ರೇರಿತವಾಗಿ ಜನ ಬಂದು ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದರು.
ಇದನ್ನೂ ಓದಿ:ಮೊದಲು ನಾನು ಬಿಜೆಪಿಯ ಕಾರ್ಯಕರ್ತ ನಂತರ ಸಭಾಪತಿ: ರಘುನಾಥ್ ಮಲ್ಕಾಪುರೆ
ನಾಳೆ ಶಕ್ತಿಪ್ರದರ್ಶನ ಆಗವುದರಿಂದ, ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಮಾಡಲಿದ್ದಾರೆ. ನಾವು ಯಾರಿಗೂ ಆಹ್ವಾನ ನೀಡುತ್ತಿಲ್ಲ, 25 ಲಕ್ಷ ಜನ ಬರುತ್ತಾರೆ. ನಿರಾಣಿ ಬಂದರೆ ಅವರನ್ನು ವೇದಿಕೆ ಮೇಲೆ ಕರೆಯುವುದಿಲ್ಲ. ಅವರಿಗೆ ಕೆಳಗೆ ಕುರ್ಚಿ ಹಾಕುತ್ತೇವೆ. ಇನ್ನು ಮೀಸಲಾತಿ ಶ್ರೇಯ ಯಾರಿಗೆ ಲಭಿಸಬೇಕು ಎಂಬ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಯಾರೊಬ್ಬರಿಗೂ ಸೀಮಿತವಲ್ಲ, ಸಮುದಾಯದ ಕಟ್ಟಡೆಯ ವ್ಯಕ್ತಿಗೆ ಸೇರುತ್ತದೆ ಎಂದು ತಿಳಿಸಿದರು.
ಎಲ್ಲಾ ಒಳ್ಳೆಯದಾಗಲಿದೆ: ಇದೇ ವೇಳೆ ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಜಯಮೃತ್ಯುಂಜಯ ಸ್ವಾಮೀಜಿ ಫೋನ್ ಮಾಡಿ, ಸಿಹಿ ಸುದ್ದಿ ಸಿಗುತ್ತಾ ಎಂದು ಕೇಳಿದರು. ಮುಖ್ಯಮಂತ್ರಿಯನ್ನು ಕೇಳಬೇಕು ಎಂದು ನಾನು ಹೇಳಿದ್ದೇನೆ. ಹೋಪ್ ಫಾರ್ ದ ಬೆಸ್ಟ್ ಎಂದಿದ್ದೇನೆ. ಇನ್ನು ಸುವರ್ಣಸೌಧದಲ್ಲಿ ನಾಳೆ ಸಮುದಾಯದವರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಕುರಿತು ಮಾತನಾಡಿದ ಅವರು, ಇದು ಶಕ್ತಿ ಪ್ರದರ್ಶನ ಅಂತಲ್ಲ, 2ಎ ಮೀಸಲಾತಿಗಾಗಿ ಹಕ್ಕೊತ್ತಾಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.