![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 21, 2022, 2:46 PM IST
ವಿಜಯಪುರ: ನಗರದ ಶಿವಬಸವ ಯೋಗಾಶ್ರಮದ ಶಂಭುಲಿಂಗ ಶ್ರೀಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳವಾರ ರಾತ್ರಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಸುದ್ದಿ ತಿಳಿಯುತ್ತಲೇ ಆಶ್ರಮದ ಭಕ್ತರು ಬುಧವಾರ ಬೆಳಗ್ಗೆಯಿಂದಲೇ ಆಶ್ರಮಕ್ಕೆ ಆಗಮಿಸಿ ಶ್ರೀಗಳ ದರ್ಶನ ಪಡೆದರು.
ಶ್ರೀಗಳು ವಿಶೇಷ ಅಧ್ಯಯನ ನಡೆಸಿ, ಪ್ರವಚನಗಳ ಮೂಲಕ ಅಪಾರ ಭಕ್ತರನ್ನು ಸಂಪಾದಿಸಿದ್ದರು. ಕಳೆದ ಕೆಲ ವರ್ಷಗಳಿಂದ ಚಿಂತನ ಗೋಷ್ಠಿ, ಮಾಸಿಕ ಶಿವಾನುಭವ ಗೋಷ್ಠಿ ಗಳಂತ ಕಾರ್ಯಗಳ ಮೂಲಕ ಸಮಾಜದಲ್ಲಿ ವಿಶೇಷವಾಗಿ ಯುವ ಜನರಲ್ಲಿ ನೈತಿಕ ಜೀವನ ಮೌಲ್ಯ ಬಿತ್ತುವ ಕೆಲಸದಲ್ಲಿ ತಮ್ಮನ್ನು ಸಕ್ರಿಯಗೊಳಿಸಿಕೊಂಡಿದ್ದರು.
ನಗರದಲ್ಲಿ ಭಕ್ತರಿಗೆ ಶ್ರೀಗಳ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶಟ್ಟಿ, ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಸೇರಿದಂತೆ ಇತರೆ ಗಣ್ಯರು ಶ್ರೀಗಳ ಅಂತಿಮ ದರ್ಶನ ಪಡೆದರು.
ಬಳಿಕ ಶ್ರೀಗಳ ಮೂಲಸ್ಥಳವಾದ ತಾಳಿಕೋಟೆಯ ಬಸವ ನಗರದ ಪೂಜ್ಯರ ಪೂರ್ವಾಶ್ರಮದ ಸ್ವಗೃಹದಲ್ಲಿ ಅಲ್ಲಿನ ಭಕ್ತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಸ್ಥಳಿಯ ಭಕ್ತರ ದರ್ಶನದ ನಂತರ ಬಳಗಾನೂರ ಕ್ರಾಸ್ ಬಳಿ ಇರುವ ಶ್ರೀಗಳ ತೋಟದಲ್ಲಿ ಅಂತಿಮ ವಿದಾಯ ಸಂಸ್ಕಾರ ನೆರವೇರಿಸಲಾಯಿತು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.