ಮಿನಿ ವಿಧಾನಸೌಧಕ್ಕೆ 10 ಕೋಟಿ: ಅಶೋಕ

30 ಕೋಟಿ ರೂ. ಹಣವನ್ನು ಕುಡಿಯುವ ನೀರಿಗಾಗಿ ಮಂಜೂರು ಮಾಡಲಾಗಿದೆ

Team Udayavani, Dec 21, 2022, 6:10 PM IST

Udayavani Kannada Newspaper

ಮೂಡಲಗಿ: ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ನೂತನ ಉಪ ನೋಂದಣಾಧಿ ಕಾರಿಗಳ ಕಚೇರಿಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಹೊಸ ತಾಲೂಕುಗಳ ಪೈಕಿ ಮೂಡಲಗಿ ತಾಲೂಕಿಗೆ ಮಾತ್ರ ಉಪ ನೋಂದಣಾಧಿಕಾರಿಗಳ ಕಚೇರಿ ಆರಂಭಿಸಲಾಗಿದ್ದು, ಇದಕ್ಕೆ ಇಲ್ಲಿನ ಜನಪ್ರಿಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಒತ್ತಡವೇ ಕಾರಣ ಎಂದು ತಿಳಿಸಿದರು.

ಬಾಲಚಂದ್ರ ಜಾರಕಿಹೊಳಿ ಅವರು ಅನೇಕ ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಪ್ರತಿ ಇಲಾಖೆಗಳ ಅನುದಾನ ತಂದು ಕ್ಷೇತ್ರವನ್ನು ಪ್ರಗತಿ ಪಥದತ್ತ ಮುನ್ನಡೆಸುತ್ತಿದ್ದಾರೆ. ಜೊತೆಗೆ ಕೆ.ಎಂ.ಎಫ್‌ ಅಧ್ಯಕ್ಷರಾಗಿ ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ.

ಕೋವಿಡ್‌ ಸಮಯದಲ್ಲಿ ರಾಜ್ಯದಲ್ಲಿರುವ ಎಲ್ಲ ಸ್ಲಂ ಪ್ರದೇಶಗಳ ನಾಗರಿಕರಿಗೆ ಉಚಿತ ಹಾಲು ನೀಡಿದ್ದಾರೆ. ಬಾಲಚಂದ್ರ ಅವರು ಕೇವಲ ಈ ಭಾಗಕ್ಕೆ ಕೊಡುಗೈ ದಾನಿಗಳಲ್ಲ. ಬೆಂಗಳೂರು ನಗರಕ್ಕೂ ಸಹ ಕೊಡುಗೆ„ ದಾನಿಗಳಾಗಿ ಹೆಸರುವಾಸಿಯಾಗಿದ್ದಾರೆ ಎಂದು ಶ್ಲಾಘಿಸಿದ ಅವರು, ಬರುವ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದ್ದು, ಬಸವರಾಜ ಬೊಮ್ಮಾಯಿ ಅವರು ಮತ್ತೂಂದು ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಅಧ್ಯಕ್ಷತೆ ವಹಿಸಿದ್ದ ಕೆ.ಎಂ.ಎಫ್‌ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಂತೆ ಉಪ ನೋಂದಣಾಧಿ ಕಾರಿಗಳ ಕಚೇರಿ ಲೋಕಾರ್ಪಣೆಗೊಳಿಸಲಾಗಿದೆ. ಈ ಕಚೇರಿಗೆ ತಾಲೂಕಿನ 48 ಗ್ರಾಮಗಳು ಸೇರ್ಪಡೆಯಾಗಿದ್ದು, ನಾಳೆಯಿಂದಲೇ ಕಚೇರಿ ಚಟುವಟಿಕೆ ಆರಂಭವಾಗಲಿದೆ. ಇನ್ನಾದರೂ ತಾಲೂಕಿನ ಜನತೆ ಬರುವ ಚುನಾವಣೆಯಲ್ಲಿ ಹೆಚ್ಚಿನ ಲೀಡ್‌ ನೀಡಿ ಮತ್ತೊಮ್ಮೆ ಜನಸೇವೆಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದರು. ಫೆಬ್ರವರಿ ತಿಂಗಳಲ್ಲಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲ್ಲಿದ್ದು. ವಿವಿಧ ಇಲಾಖೆಗಳ ಏಳು ಕಚೇರಿಗಳು ಕರ್ತವ್ಯ ನಿರ್ವಹಿಸಲಿವೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿ ವಿಧಾನ ಸಭಾ ಕ್ಷೇತ್ರಗಳ ಅಭಿವೃದ್ಧಿಗೆ 50 ರಿಂದ 100 ಕೋಟಿ ರೂ. ಅನುದಾನ ನೀಡಿದ್ದಾರೆ. ನಮ್ಮ ಕ್ಷೇತ್ರಕ್ಕೂ ಸಹ ಅನುದಾನ ಬಂದಿದೆ. ಮುಂದಿನ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ, ಮೂಡಲಗಿ ಪಟ್ಟಣದ ಅಭಿವೃದ್ಧಿಗೆ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ ಅವರ ಮೂಲಕ ಹೆಚ್ಚಿನ ಅನುದಾನ ತರುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಬೇಕು. ಅರಭಾವಿ ಕ್ಷೇತ್ರಕ್ಕೆ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ 30 ಕೋಟಿ ರೂ. ಹಣವನ್ನು ಕುಡಿಯುವ ನೀರಿಗಾಗಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು. ದತ್ತಾತ್ರೇಯಬೋಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಬೆ„ಲಹೊಂಗಲ ಉಪವಿಭಾಗಾಧಿಕಾರಿ ಡಾ| ಶಶಿಧರ ಬಗಲಿ, ಜಿಲ್ಲಾ ನೋಂದಣಿ ಅ ಧಿಕಾರಿ ಶಿವಕುಮಾರ ಅಪರಂಜಿ, ತಹಶೀಲ್ದಾರ್‌ ಡಿ.ಜಿ.ಮಹಾತ್‌, ಉಪನೋಂದಣಿ ಅಧಿಕಾರಿ ಹರಿಯಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಚಿವ ಆರ್‌.ಅಶೋಕ್‌ ಅವರಿಗೆ ಕೃಷ್ಣನ ಕಂಚಿನ ಪ್ರತಿಮೆ ಹಾಗೂ ಸಚಿವ ಭೈರತಿ ಬಸವರಾಜ ಅವರಿಗೆ ಬೆಳ್ಳಿ ಗಣೇಶನ ವಿಗ್ರಹ ನೀಡಿ ಸತ್ಕರಿಸಿದರು.

ನಮ್ಮ ಬಿಜೆಪಿ ಸರಕಾರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪವರ್‌ಫುಲ್‌ ಲೀಡರ್‌. ಬೆಂಗಳೂರಿಗೆ ಬಂದಾಗಲೆಲ್ಲ ಮುಖ್ಯಮಂತ್ರಿ ಸೇರಿದಂತೆ ಸಂಬಂಧ ಪಟ್ಟ ಹಲವಾರು ಮಂತ್ರಿಗಳನ್ನು ಭೇಟಿ ಮಾಡಿ ಅರಭಾವಿ ಅಭಿವೃದ್ಧಿ ಕೆಲಸಗಳ ಕಡತಗಳಿಗೆ ಅನುಮತಿ ಪಡೆದುಕೊಂಡೇ ಹೋಗುತ್ತಾರೆ.
ಆರ್‌.ಅಶೋಕ, ಕಂದಾಯ ಸಚಿವ

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.