5 ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಲಾಭ: ಸಿಎಂ
ಮಹಿಳೆಯರು ತಂತ್ರಜ್ಞಾನ ಅಳವಡಿಸಿಕೊಂಡು ನವೀನ ಮಾದರಿ ಉದ್ಯಮ ಪ್ರಾರಂಭಿಸಬೇಕು
Team Udayavani, Dec 23, 2022, 6:34 PM IST
ಬೆಳಗಾವಿ: ಸ್ತ್ರೀ ಸಾಮರ್ಥಯ ಯೋಜನೆ ಅನುಷ್ಠಾನಕ್ಕಾಗಿ ಅಯವ್ಯಯದಲ್ಲಿ ರೂ.1000 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಯೋಜನೆಯಿಂದ ರಾಜ್ಯದ 33 ಸಾವಿರ ಮಹಿಳಾ ಸಂಘದ 5 ಲಕ್ಷ ಮಹಿಳೆಯರಿಗೆ ಲಾಭವಾಗಿದೆ. ಸ್ತ್ರೀ ಸಾಮರ್ಥಯ ಯೋಜನೆಯಿಂದ ದೇಶದಲ್ಲಿ ದೊಡ್ಡ ಕ್ರಾಂತಿ ಉಂಟಾಗಲಿದೆ. ಮಹಿಳಾ ಸ್ವಸಹಾಯ ಸಂಘ ಉತ್ಪನ್ನಗಳ ಮಾರಾಟಕ್ಕೆ ರಾಜ್ಯದ ಐದು ಸ್ಥಳಗಳಲ್ಲಿ ಶಾಶ್ವತ ಪ್ರದರ್ಶನ ಮಾರಾಟ ಮಳಿಗೆ ನಿರ್ಮಾಣ ಮಾಡಲಾಗುವುದು ಎಂದು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಹಯೋಗದೊಂದಿಗೆ, ಬೆಳಗಾವಿಯ ಸರ್ದಾರ್ ಹೆ„ಸ್ಕೂಲ್ ಮೈದಾನದಲ್ಲಿ ಏರ್ಪಡಿಸಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಸಮುದಾಯ ಉದ್ಯಮ ನಿಧಿ ವಿತರಿಸಿ ಅವರು ಮಾತನಾಡಿದರು.
ಸ್ತ್ರೀ ಸಾಮರ್ಥಯ ಯೋಜನೆ ಮೂಲಕ ದೇಶದ ಅಭಿವೃದ್ಧಿ ಮಾಡುತ್ತಿರುವುದು ನಮ್ಮ ತಾಯಂದಿರು. ಸ್ತ್ರೀ ಸಾಮರ್ಥಯದ ಮೌಲ್ಯಮಾಪನವಾಗಬೇಕು. ಮನೆ ಕೆಲಸ ಮಾಡುವ ಮಹಿಳೆಯರಿಗೂ ಗೌರವ ಸಿಗಬೇಕು. ಅವರ ಕೆಲಸಕ್ಕೆ ಆದಾಯ ಬರಬೇಕು ಎಂದು ಹೇಳಿದರು.
ಮಹಿಳೆಯರ ಅಭಿವೃದ್ಧಿಗಾಗಿ ಮುಂದಿನ ಆಯವ್ಯಯದಲ್ಲಿ ವಿಶೇಷ ಯೋಜನೆ ಘೋಷಣೆ ಮಾಡಲಾಗುವುದು. ಈಗ ಸರ್ಕಾರದಿಂದ ಗ್ರಾ.ಪಂ. ವ್ಯಾಪ್ತಿಯಲ್ಲಿ 2 ಮಹಿಳಾ ಸಂಘಗಳಿಗೆ 1 ಲಕ್ಷ ಸಹಾಯಧನ ಹಾಗೂ ಬ್ಯಾಂಕ್ ಸಾಲ ನೀಡಿ ಅವರ ಸ್ವ ಉದ್ಯೋಗ ನೆರವು ನೀಡಲಾಗಿದೆ. ಅಮƒತ ಯೋಜನೆಯಡಿ 5000 ಸಾವಿರ ಮಹಿಳೆಯರಿಗೆ ಸಹಾಯ ಒದಗಿಸಲಾಗಿದೆ.
ಕರಕುಶಲತೆ ಭಾರತೀಯ ನಾರಿಯರಿಗೆ ದೇವರು ಕೊಟ್ಟ ವರ. ಇದಕ್ಕೆ ಮಾರುಕಟ್ಟೆ ಒದಗಿಸಲು ಪ್ರದರ್ಶನ ಮೇಳ ಆಯೋಜಲಾಗಿದೆ. ಆನ್ ಲೈನ್ ಮಾರುಕಟ್ಟೆಗೆ ಮಹಿಳಾ ಸಂಘಗಳನ್ನು ಜೋಡಿಸಲು ಚಿಂತನೆ ನಡೆಸಲಾಗಿದೆ. ಮಹಿಳೆಯರು ತಂತ್ರಜ್ಞಾನ ಅಳವಡಿಸಿಕೊಂಡು ನವೀನ ಮಾದರಿ ಉದ್ಯಮ ಪ್ರಾರಂಭಿಸಬೇಕು ಎಂದರು.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಮಾತನಾಡಿ, ಮುಖ್ಯಮಂತ್ರಿಗಳು ಮಹಿಳಾ ಸ್ವಸಹಾಯ ಸಂಘಗಳಿಗೆ ಶಕ್ತಿ ಹಾಗೂ ನಾಯಕತ್ವ ನೀಡಿ ಮಹಿಳೆಯರ ಸಬಲೀಕರಣಕ್ಕೆ ಹಗಲಿರುಳು ದುಡಿಯತ್ತಿದ್ದಾರೆ. ಮಾರುಕಟ್ಟೆ ಬಲವರ್ಧನೆಗೆ , ಕೌಶಲ್ಯ ಅಭಿವೃದ್ಧಿ ಇ ಕಾಮರ್ಸ್ ಸಂಸ್ಥೆಗಳೊಂದಿಗೆ ಒಡಂಬಡಿಕೆಯ ಮಾಡಿಕೊಳ್ಳಲಾಗಿದೆ. ಆವಿಷ್ಕಾರ, ಪ್ರಗತಿಪರ ತಂತ್ರಜ್ಞಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು
ಇದರ ಲಾಭ ಮಹಿಳೆಯರಿಗೂ ಲಭಿಸಿ ನಮ್ಮ ನಾಡಿನ ಮಹಿಳೆಯರು ವಿಶ್ವ ಮಟ್ಟದ ಪ್ರಗತಿ ಹೊಂದಬೇಕು ಎಂದು ಹೇಳಿದರು.
ಶಾಸಕ ಅನಿಲ್ ಎಸ್. ಬೆನಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬೆಳಗಾವಿ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಗಡಿಯನ್ನು ಹಂಚಿಕೊಂಡಿದ್ದು, ಬೆಳಗಾವಿಯಲ್ಲಿ ಶಾಶ್ವತ ಪ್ರದರ್ಶನ ಹಾಗೂ ಮಾರುಕಟ್ಟೆ ಸ್ಥಾಪಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮೀಣ ಉದ್ಯಮ ಯೋಜನೆಯಡಿ ಕೊಪ್ಪಳ ಹಾಗೂ ಮೈಸೂರಿನ ತಾಲೂಕುಗಳ ಮಹಿಳಾ ಸ್ವ ಸಹಾಯ ಸಂಘಗಳಿಗೆ 50 ಲಕ್ಷ ರೂಪಾಯಿ ಚಕ್ ವಿತರಣೆ ಮಾಡಲಾಯಿತಲ್ಲದೆ ತಾಂತ್ರಿಕ ಬೆಂಬಲ ಸಂಸ್ಥೆಗಳಿಗೆ ಒಡಂಬಡಿಕೆಯ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಐ.ಎನ್.ಸ್ ಪ್ರಸಾದ್, ಜಿ.ಪಂ ಸಿಇಒ ದರ್ಶನ.ಎಚ್.ವಿ. ಉಪಸ್ಥಿತರಿದ್ದರು. ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ. ರಾಗಪಿಯಾ.ಆರ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.