ಜಾಂಬೂರಿ ಉತ್ಸವ: ಕರಾವಳಿಯ 15 ಸಾವಿರ ಪ್ರತಿನಿಧಿಗಳು
Team Udayavani, Dec 24, 2022, 6:35 AM IST
ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ಒಂದು ವಾರ ಕಾಲದ ಜಾಂಬೂರಿ ಉತ್ಸವ ಅದ್ದೂರಿಯಾಗಿ ನಡೆಯುತ್ತಿದ್ದು, ದೇಶದೆಲ್ಲೆಡೆಯ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಅದರಲ್ಲೂ ಕರಾವಳಿಯ ಸುಮಾರು 15,000 ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಈಗಾಗಲೇ ವಿವಿಧ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.
ದ.ಕ.ದ 10,000 ಮಂದಿ ಮತ್ತು ಉಡುಪಿಯ 5,000 ಮಂದಿ ಸ್ಕೌಟ್ಸ್-ಗೈಡ್ಸ್- ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.
ಚಟುವಟಿಕೆಗಳೇನು?
ಸ್ಪರ್ಧಾತ್ಮಕ ಸಾಹಸಮಯ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಲು, ಸ್ಕೌಟ್ಸ್ ಮತ್ತು ಗೈಡ್ಸ್‌ಗಳು ವೈಯಕ್ತಿಕವಾಗಿ ಮತ್ತು ಗುಂಪುಗಳಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಾಂಬೂರಿಯ ದಿನಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯವಾಗಿ ಸ್ಕಿಲ್-ಒ-ರಾಮಾ, ಪಯೋನಿಯ ರಿಂಗ್, ಸಾಂಸ್ಕೃತಿಕ ಸಂಜೆ, ಸಮುದ್ರ ತೀರ ಚಾರಣ, ಮ್ಯಾರಥಾನ್, ಯೋಗ-ಧ್ಯಾನ, ಕೃಷಿಮೇಳ, ವಿಜ್ಞಾನ ಕೇಂದ್ರ, ಖಗೋಳ ವೀಕ್ಷಣಾಲಯ ಮುಂತಾದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ.
ವಿವಿಧ ರಾಜ್ಯಗಳ ಪ್ರತಿನಿಧಿಗಳ ಚರ್ಚೆಯಲ್ಲಿ ಭಾಗ ವಹಿಸಿ ಅಭಿಪ್ರಾಯ ಮಂಡಿಸುತ್ತಾರೆ. ಸ್ಕೌಟ್ಸ್ ಮತ್ತು ಗೈಡ್ಸ್‌ಗಳು/ರೋವರ್-ರೇಂಜರ್ ಚಳವಳಿ ಯಲ್ಲಿ ಪ್ರಸ್ತುತ ಇರುವ ಚಟುವಟಿಕೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಯಾವ ರೀತಿ ಬದಲಾವಣೆ ಮಾಡಬೇಕು ಮತ್ತು ಚಳವಳಿಯ ವ್ಯಾಪ್ತಿಯನ್ನು ಹೇಗೆ ಹೆಚ್ಚಿಸಬೇಕೆಂಬ ಬಗ್ಗೆಯೂ ಚರ್ಚಿಸಲು ಅವಕಾಶವಿದೆ.
ವಿಶ್ವದಲ್ಲೇ ಮೊದಲು
ಸಾಮಾನ್ಯವಾಗಿ ನಾಲ್ಕು ವರ್ಷಗಳಿಗೊಮ್ಮೆ ವಿಶ್ವ ಜಾಂಬೂರಿ ನಡೆಯುತ್ತದೆ. ಈ ವರ್ಷ ವಿಶೇಷವಾಗಿ ಸಾಂಸ್ಕೃತಿಕ ಜಾಂಬೂರಿ ಆಯೋಜಿಸಲಾಗಿದೆ.
ಅಮೆರಿಕದಲ್ಲಿ ಯಕ್ಷಗಾನ
ಪ್ರದರ್ಶಿಸಿದ್ದ ವಿದ್ಯಾರ್ಥಿಗಳು
ಮೂರು ವರ್ಷಗಳ ಹಿಂದೆ ಅಮೆರಿಕದಲ್ಲಿ ಜಾಂಬೂರಿ ನಡೆದಿದ್ದು, ದ.ಕ. ಜಿಲ್ಲೆಯ 12 ಮಂದಿ ಭಾಗಿಯಾಗಿದ್ದರು. ಕೌಶಲಗಳ ಜತೆ ತಾನು ಪ್ರತಿನಿಧಿಸಿದ ರಾಜ್ಯದ ಸಾಂಸ್ಕೃತಿಕ ಕಲೆ ಗಳಿಗೂ ವೇದಿಕೆ ಕಲ್ಪಿಸಲಾಗಿತ್ತು. ದ.ಕ. ಜಿಲ್ಲೆಯ ಪ್ರತಿನಿಧಿಗಳು ರಾಜ್ಯದ ಸಾಂಸ್ಕೃತಿಕ ಕಲೆಯಾದ ಯಕ್ಷಗಾನವನ್ನು ಅನವಾರಣ ಗೊಳಿಸಿದ್ದರು. ಮುಂದಿನ ಜಾಂಬೂರಿ ಕೊರಿಯಾದಲ್ಲಿ ನಡೆಯಲಿದೆ.
– ಬಿ. ಮೊಹಮ್ಮದ್ ತುಂಬೆ,
ಸ್ಕೌಟಿಂಗ್ ವಿಭಾಗ ರಾಜ್ಯ ಪ್ರತಿನಿಧಿ
-ನವೀನ್ ಭಟ್ ಇಳಂತಿಲ
ಫೋಟೋ: ಸತೀಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.