ನಕಲಿ ಎನ್‌ಒಸಿ ನೀಡಿ ವಾಹನಗಳ ಮಾರಾಟ

Team Udayavani, Dec 24, 2022, 10:13 AM IST

tdy-6

ಬೆಂಗಳೂರು: ಬ್ಯಾಂಕ್‌ ಅಥವಾ ಫೈನಾನ್ಸ್‌ಗಳಲ್ಲಿ ಬಾಕಿ ಇರುವ ಕಾರುಗಳು ಹಾಗೂ ಟೆಂಪೋ ಟ್ರಾವೆಲ್ಲರ್‌ಗಳನ್ನು ಖರೀದಿಸಿ, ಅದೇ ಬ್ಯಾಂಕ್‌ ಮತ್ತು ಫೈನಾನ್ಸ್‌ಗಳ ಹೆಸರಿನಲ್ಲಿ ನಕಲಿ ಎನ್‌ಒಸಿ ಸೃಷ್ಟಿಸಿ ವಾಹನಗಳ ಮಾರಾಟ ಮಾಡು ತ್ತಿದ್ದ ಮೂವರು ವಂಚಕರು ಬನಶಂಕರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸೋಲದೇವನಹಳ್ಳಿ ನಿವಾಸಿ ಸಿ.ಪ್ರಭಾಕರ (40), ಚಾಮರಾಜಪೇಟೆಯ ಆರ್‌. ಕಿರಣ್‌ (44) ಮತ್ತು ಮಂಡ್ಯ ಜಿಲ್ಲೆ ನಾಗಮಂಗಲ ನಿವಾಸಿ ಎಸ್‌.ಪ್ರಕಾಶ ಅಲಿಯಾಸ್‌ ಚೀಟಿ ಪ್ರಕಾಶ (33) ಬಂಧಿತರು.

ಆರೋಪಿಗಳಿಂದ 90 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಯ 7 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ಪೈಕಿ ಪ್ರಭಾಕರ ಮತ್ತು ಪ್ರಕಾಶ್‌ ಸೆಕೆಂಡ್‌ ಹ್ಯಾಂಡ್‌ ವಾಹನಗಳ ಮಾರಾಟ ವ್ಯವಹಾರ ಮಾಡುತ್ತಿದ್ದರು. ಹೀಗಾಗಿ ಬ್ಯಾಂಕ್‌ ಮತ್ತು ಫೈನಾನ್ಸ್‌ಗಳಲ್ಲಿ ಸಾಲ ಬಾಕಿ ಉಳಿಸಿಕೊಂಡ ಮಾಲೀಕರ ಪರಿಚಯವಾಗುತ್ತಿತ್ತು. ಆಗ ಬಾಕಿ ಸಾಲ ತಾವೇ ತೀರಿಸುತ್ತೇವೆ ಎಂದು ವಾಹನಗಳ ಖರೀದಿಸುತ್ತಿದ್ದರು. ಬಳಿಕ ಪ್ರಭಾಕರ ತನ್ನ ಜೆರಾಕ್ಸ್‌ ಅಂಗಡಿಯಲ್ಲಿ ಅದೇ ಬ್ಯಾಂಕ್‌ ಗಳ ಹೆಸರಿನಲ್ಲಿ ನಕಲಿ ಎನ್‌ಒಸಿ ಮತ್ತು ಲೋನ್‌ ಅಗ್ರಿಮೆಂಟ್‌ ಟರ್ಮಿನೇಷನ್‌ ಪತ್ರ ಸಿದ್ಧಪಡಿಸಿ ಇತರೆ ಇಬ್ಬರು ಆರೋಪಿಗಳಿಗೆ ನೀಡುತ್ತಿದ್ದ. ಈ ನಕಲಿ ದಾಖಲೆಗಳ ಮೂಲಕ ಬೇರೆ ಬೇರೆ ಗ್ರಾಹಕರಿಗೆ ವಾಹನಗಳ ಮಾರಾಟ ಮಾಡುತ್ತಿದ್ದರು. ಕೆಲವೊಮ್ಮೆ ಹಣಕಾಸಿನ ಸಂಸ್ಥೆಗಳು ಎಲ್ಲೆಂದರಲ್ಲಿ ವಾಹನಗಳ ಜಪ್ತಿ ಮಾಡುವ ಸಾಧ್ಯತೆಯಿದೆ ಎಂದು ಭಾವಿಸಿ, ವಾಹನಗಳಿಗೆ ನಕಲಿ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಿ ವಂಚಿಸು ತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಇತ್ತೀಚೆಗೆ ದೂರುದಾರ ಕುಮಾರ ನಾಯ್ಕ ಎಂಬುವರು ತಮ್ಮ ಸುಜುಕಿ ಸಿಯಾಜ್‌ ಕಾರಿನ ನೋಂದಣಿ ಸಂಖ್ಯೆ ಯನ್ನು ಬೇರೊಂದು ಕಾರಿಗೆ ಅಳವಡಿಸಿ, ತುಮಕೂರು ಆರ್‌ಟಿಒ ಕಚೇರಿಯಲ್ಲಿ ಮಾಲೀಕತ್ವ ಬದಲಾವಣೆ ಮಾಡಿ ವಂಚಿಸಿದ್ದರು. ಈ ಸಂಬಂಧ ಬನಶಂಕರಿ ಠಾಣೆಯಲ್ಲಿ ದೂರು ದಾಖ ಲಾಗಿತ್ತು. ಈ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳ ವಿಚಾರಣೆ ವೇಳೆ ಕಳೆದ ಐದು ವರ್ಷಗಳಿಂದ ಸಾಲ ಬಾಕಿಯಿರುವ ಕಾರುಗಳನ್ನು ಖರೀದಿಸಿ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವ ದಂಧೆಯಲ್ಲಿ ತೊಡಗಿದ್ದಾರೆ ಎಂಬುದು ಗೊತ್ತಾಗಿದೆ. ಆರೋಪಿ ಪ್ರಭಾಕರ 2017ರಲ್ಲಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ. ಜಾಮೀನು ಪಡೆದು ಹೊರಬಂದ ಬಳಿಕ ಉಳಿದ ಆರೋಪಿಗಳ ಜತೆ ಸೇರಿ ದಂಧೆ ಮುಂದುವರಿೆಸಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

ಮತ್ತೂಂದೆಡೆ ಸಾಲ ಬಾಕಿಯಿರುವ ಕಾರುಗಳಿಗೆ ನಕಲಿ ಎನ್‌ಒಸಿ ಮತ್ತು ಲೋನ್‌ ಅಗ್ರಿಮೆಂಟ್‌ ಟರ್ಮಿನೇಷನ್‌ ಪ್ರಮಾಣ ಪತ್ರಗಳನ್ನು ಸೃಷ್ಟಿಸಿ ಆರ್‌ಟಿಒ ಕಚೇರಿಗೆ ನೀಡಿ ಸೆಕೆಂಡ್‌ ಹ್ಯಾಂಡ್‌ ಕಾರು ಮಾರಾಟ ಮಾಡಿದ್ದರು ಎಂಬ ಮಾಹಿತಿ ಮೇರೆಗೆ ಸಾರಿಗೆ ಇಲಾಖೆಗೆ ಪತ್ರ ಬರೆದು ಮಾಹಿತಿ ಕೇಳಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.