ಫೆಬ್ರವರಿಯಲ್ಲಿ ರಾಜ್ಯ ಬಜೆಟ್: ಸಿಎಂ ಬೊಮ್ಮಾಯಿ
Team Udayavani, Dec 25, 2022, 6:35 AM IST
ಹಾವೇರಿ/ಹುಬ್ಬಳ್ಳಿ : ರಾಜ್ಯ ಬಜೆಟ್ ಸಂಬಂಧ ಈಗಾಗಲೇ ಹಣಕಾಸು ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆ ನಡೆಸಿದ್ದು, ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳಗಾವಿ ಅ ಧಿವೇಶನ ಮುಗಿದ ಅನಂತರ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.
ನಿಗದಿಯಂತೆ ಚುನಾವಣೆ
ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆಗೆ ಹೋಗುವ ಯಾವ ಚಿಂತನೆಯೂ ಸರಕಾರ ಮತ್ತು ಪಕ್ಷದಲ್ಲಿ ಇಲ್ಲವೇ ಇಲ್ಲ. ಅದೇನಿದ್ದರೂ ವಿಪಕ್ಷಗಳ ಚಿಂತನೆ, ಹೇಳಿಕೆಯಾಗಿದೆ. ನಮ್ಮ ಸರಕಾರ ಕೈಗೊಂಡ ಅಭಿವೃದ್ಧಿ ಯೋಜನೆಗಳ ರಿಪೋರ್ಟ್ ಕಾರ್ಡ್‌ನೊಂದಿಗೆ ಚುನಾವಣೆಗೆ ಹೋಗುತ್ತೇವೆ ಎಂದರು.
ನಾಳೆ ಹೊಸದಿಲ್ಲಿಗೆ
ಸೋಮವಾರ ಸಂಜೆ ದಿಲ್ಲಿಗೆ ಹೋಗುತ್ತಿರುವುದು ನಿಜ. ಅಲ್ಲಿ ಏನು ಚರ್ಚೆ ನಡೆಯುತ್ತದೆ ಎಂಬುದನ್ನು ಬಳಿಕವೇ ಹೇಳುವೆ. ಅನೇಕ ಅಭಿವೃದ್ಧಿ ಕಾರ್ಯಕ್ರಮ, ಯೋಜನೆಗಳು ಸರಿಯಾಗಿ ನಡೆಯುತ್ತಿವೆ. ಬಿಜೆಪಿ ಘಟಕದ ಅಧ್ಯಕÒರೊಂದಿಗೆ ಚರ್ಚೆ ಮಾಡುತ್ತೇನೆ. ಖಂಡಿತವಾಗಿ ಈ ವೇಳೆ ರಾಜಕೀಯ ಚರ್ಚೆಯೂ ಆಗಲಿದೆ. ಚುನಾವಣ ತಯಾರಿ ಕೂಡ ಚರ್ಚೆ ಆಗುತ್ತದೆ ಎಂದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳು, ಅಭಿವೃದ್ಧಿ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಉಭಯ ಸದನಗಳ ಮುಖ್ಯಸ್ಥರಿಗೆ ಮನವಿ ಮಾಡಿದ್ದೇನೆ. ಎರಡೂ¾ರು ದಿನ ಚರ್ಚೆಗೆ ಅವಕಾಶ ದೊರೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.